ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ ; ಡಿವೈಎಫ್‌ಐ ಪ್ರತಿಭಟನೆ

Date:

ಹುಬ್ಬಳ್ಳಿಯ ಸಮೀಪದ ಗ್ರಾಮವೊಂದರಲ್ಲಿ ನಡೆದ ಮರ್ಯಾದಾ ಹತ್ಯೆಯನ್ನು ಖಂಡಿಸಿ ಡಿವೈಎಫ್‌ಐ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಕಲಬುರಗಿ ನಗರದ ತಿಮ್ಮಪುರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಲವಿತ್ರ ವಸ್ತ್ರದ ಮಾತನಾಡಿ, ‘ಸಮಾಜದಲ್ಲಿ ಪುರೋಹಿತಶಾಹಿ ಹಾಗೂ ಚತುರ್ವರ್ಣ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಲು ಕೋಮುವಾದಿ ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು. ಯುವಜನರ, ಅದರಲ್ಲೂ ಮಹಿಳೆಯರ ಆಯ್ಕೆ ಸ್ವಾತಂತ್ರ್ಯಕ್ಕೆ ಸಮಾಜದಲ್ಲಿ ಇನ್ನೂ ಪೂರ್ಣ ಮಾನ್ಯತೆ ದೊರೆಯುತ್ತಿಲ್ಲ. ಮಹಿಳೆಯನ್ನು ಕೀಳಾಗಿ ಕಾಣುವ ಮನುವಾದಿ ಚಿಂತನೆಗಳನ್ನು ಸಮಾಜದ ಮೇಲೆ ಹೇರುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

‘ಜಾತಿ ಹೆಸರಿನಲ್ಲಿ ನಡೆಯುವ ಕೊಲೆಗಳು ಹಾಗೂ ದೌರ್ಜನ್ಯಗಳು ಖಂಡನೀಯವಾಗಿದ್ದು, ಇಂತಹ ಮರ್ಯಾದಾ ಹತ್ಯೆಗಳನ್ನು ತಡೆಯಲು ನಿರ್ದಿಷ್ಟ ಕಾನೂನು ರೂಪಿಸುವ ಅಗತ್ಯವಿದೆ. ಯುವಜನರ ಆಯ್ಕೆ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಗಟ್ಟಿಯಾದ ಕಾನೂನುಗಳನ್ನು ಜಾರಿಗೊಳಿಸಬೇಕು’ ಎಂದು ಅವರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಶಿಕ್ಷಕರ ಹುದ್ದೆಗಳು ಶೀಘ್ರ ಭರ್ತಿ : ಸಚಿವ ಶರಣ ಪ್ರಕಾಶ ಪಾಟೀಲ್ ಭರವಸೆ

Advertisements
Advertisements

‘ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಯುವತಿಯ ಪತಿಯ ಮನೆಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು’ ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಾನಿಯಾ, ಎಸ್‌ಎಫ್ಐ ಸಂಘಟನೆಯ ಸರ್ವೇಶ ಮಾವಿನಕರ್, ಸುಜಾತಾ ವೈ, ಸೌಮ್ಯ ಬಿರಾದಾರ, ಸ್ವರಾಜ, ತಾಯಣ್ಣ, ನಿತಿಷ್, ನೇಸಮಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...