ಕಲಬುರಗಿ | ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಫ್‌ಎಸ್‌ಟಿಪಿ ಘಟಕದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Date:

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ, ಕಲಬುರಗಿ ತಾಲೂಕು ಪಂಚಾಯಿತಿ ಹಾಗೂ ತಾಜ್ ಸುಲ್ತಾನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಫ್‌ಎಸ್‌ಟಿಪಿ ಘಟಕದಲ್ಲಿ ಗುರುವಾರ ಪರಿಸರ ಜಾಗೃತಿ, ಸ್ವಚ್ಛತೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪರಿಸರ ಸಂರಕ್ಷಣೆಯ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ಹಾಗೂ ಹಸಿರು ಪರಿಸರ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಸಲಾಯಿತು.

- Advertisement -

ಬೆಳಕು ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಮಹಿಳಾ ಶಿಕ್ಷಣ ಸೇವಾ ಸಂಸ್ಥೆ (ರಿ.), ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ ಕಲಬುರಗಿ ಹಾಗೂ ಯೂತ್ ಅಡ್ವೆಂಚರ್ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್‌ಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು, ಯುವಕರು, ಮಹಿಳೆಯರು ಹಾಗೂ ಕೂಲಿ ಕಾರ್ಮಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...
1980120

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಸಯ್ಯದ್ ಪಟೇಲ್ ಮಾತನಾಡಿ, “ಪರಿಸರ ಸಂರಕ್ಷಣೆ ಇಂದಿನ ಕಾಲಘಟ್ಟದ ಅತ್ಯಂತ ಪ್ರಮುಖ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಅರಣ್ಯ ನಾಶ, ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆ ಹಾಗೂ ಹವಾಮಾನ ಬದಲಾವಣೆಯಂತಹ ಗಂಭೀರ ಸಮಸ್ಯೆಗಳು ಮಾನವಕುಲದ ಭವಿಷ್ಯಕ್ಕೆ ಸವಾಲಾಗಿದ್ದು, ಇವುಗಳನ್ನು ತಡೆಯಲು ಪ್ರತಿಯೊಬ್ಬ ನಾಗರಿಕರೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬರ ಸಾಮಾಜಿಕ ಕರ್ತವ್ಯವೂ ಆಗಿದೆ” ಎಂದು ತಿಳಿಸಿದರು.

“ಗಿಡಮರಗಳು ಪ್ರಕೃತಿಯ ಅಮೂಲ್ಯ ಕೊಡುಗೆಗಳಾಗಿವೆ. ಸಸಿ ನೆಡುವುದರಿಂದ ಪರಿಸರ ಸಮತೋಲನ ಕಾಪಾಡಲು ಸಾಧ್ಯವಾಗುತ್ತದೆ. ಗಿಡಗಳಿಂದ ಪರಿಶುದ್ಧ ಗಾಳಿ ದೊರೆಯುವುದರ ಜೊತೆಗೆ ಮಾನವನ ಆರೋಗ್ಯವೂ ಉತ್ತಮವಾಗಿರುತ್ತದೆ. ಸಸಿ ಎಂದರೆ ತಾಯಿ ಇದ್ದಂತೆ. ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು” ಎಂದು ಹೇಳಿದರು. ಇದೇ ವೇಳೆ ಅವರು ಎಲ್ಲರಿಗೂ ವಿಶ್ವ ಪರಿಸರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

1980117

ಅತಿಥಿಯಾಗಿ ಭಾಗವಹಿಸಿದ್ದ ಈದಿನ.ಕಾಮ್ ಜಿಲ್ಲಾ ವರದಿಗಾರ್ತಿ ಗೀತಾ ಹೊಸಮನಿ ಮಾತನಾಡಿ, “ಪರಿಸರ ದಿನಾಚರಣೆಯನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ ಪ್ರತಿಯೊಂದು ಮನೆಯಲ್ಲೂ ಸಸಿ ನೆಡುವ ಅಭಿಯಾನ ನಿರಂತರವಾಗಿ ನಡೆಯಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಾವು ಇಂದು ಕೈಗೊಳ್ಳುವ ಪರಿಸರ ಸ್ನೇಹಿ ಕ್ರಮಗಳು ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ನಿರ್ಮಿಸಲು ಸಹಕಾರಿಯಾಗಲಿವೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸ್ವಚ್ಛ ಭಾರತ್ ಮಿಷನ್ ಪ್ರತಿನಿಧಿ ಪಾಪರೆಡ್ಡಿ, ಸಾಹಸ್ ಯೋಜನೆಯ ಸಂಯೋಜಕ ರಾಜಶೇಖರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅನುಪಮಾ ಹಾಗೂ ಕಲಬುರಗಿ ಯೂತ್ ಅಡ್ವೆಂಚರ್ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ದೇವರಾಜ್ ಆರ್.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

1980118

ಸಮಾರಂಭದಲ್ಲಿ ತ್ಯಾಜ್ಯ ನಿರ್ವಹಣೆ, ನೀರಿನ ಸಂರಕ್ಷಣೆ, ಗಿಡಮರಗಳ ನೆಡುವಿಕೆ, ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯದ ಕುರಿತು ವಿವರವಾಗಿ ಚರ್ಚಿಸಲಾಯಿತು. ಪರಿಸರ ಸ್ನೇಹಿ ಅಭ್ಯಾಸಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಹಾಗೂ ಸುರಕ್ಷಿತ ಸಮಾಜ ನಿರ್ಮಿಸಲು ಸಾಧ್ಯವೆಂದು ತಿಳಿಸಲಾಯಿತು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ 50 ಸಸಿಗಳನ್ನು ನೆಡಲಾಯಿತು.

1980175

ತಾಜ್ ಸುಲ್ತಾನಪುರ ಗ್ರಾಮದ ನಿವಾಸಿಗಳು, ಮಹಿಳೆಯರು ಹಾಗೂ ಕೂಲಿ ಕಾರ್ಮಿಕರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಪರಿಸರ ರಕ್ಷಣೆಯ ಬಗ್ಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು. ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗದೆ ಪ್ರತಿದಿನದ ಜೀವನದ ಭಾಗವಾಗಬೇಕು ಎಂಬ ಸಂದೇಶವನ್ನು ಕಾರ್ಯಕ್ರಮ ಪರಿಣಾಮಕಾರಿಯಾಗಿ ಸಾರಿತು.

ಇದನ್ನು ಓದಿದ್ದೀರಾ? ಯಾದಗಿರಿ | ಪದವಿ ಪೂರ್ವ ಉಪನ್ಯಾಸಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಡಾ. ರವೀಂದ್ರನಾಥ ಹೊಸಮನಿ ಅವಿರೋಧ ಆಯ್ಕೆ

ಸ್ಥಳೀಯ ಮಟ್ಟದಲ್ಲಿ ಪರಿಸರ ಜಾಗೃತಿ ಮೂಡಿಸುವುದರ ಜೊತೆಗೆ ಹಸಿರು ಕಲಬುರಗಿ ನಿರ್ಮಾಣದತ್ತ ಸಮುದಾಯದ ಒಗ್ಗಟ್ಟಿನ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...