ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಗಂಡ ಪುಟ್ಟ ಮಗುವಿನೊಂದಿಗೆ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅಘಾತಕಾರಿ ಘಟನೆಯೊಂದು ನಡೆದಿದೆ.
ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದ ಬಳಿ ಸಂಭವಿಸಿದ ಈ ಘೋರ ಕೃತ್ಯದಲ್ಲಿ ಮೂರು ಜೀವಗಳ ಪ್ರಾಣಪಕ್ಷಿ ಹಾರಿಹೋಗಿದೆ. ಕೊಲೆ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.
ಲಕ್ಷ್ಮೀಪುತ್ರ ಎಂಬಾತ ತನ್ನ ಪತ್ನಿ ಅಂಜಲಿಯನ್ನು (23) ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಲಕ್ಷ್ಮೀಪುತ್ರ ಮದರಾ (ಕೆ) ಗ್ರಾಮದ ಸಮೀಪದ ಬಾವಿಗೆ ಜಿಗಿದಿದ್ದಾನೆ ಎಂದು ತಿಳಿದುಬಂದಿದೆ.
ಮಗುವಿನೊಂದಿಗೆ ಲಕ್ಷ್ಮೀಪುತ್ರ ಬಾವಿಗೆ ಹಾರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಗ್ರಾಮಸ್ಥರು ಸಮಯಪ್ರಜ್ಞೆ ಮೆರೆದು ಬಾವಿಗೆ ಜಿಗಿದು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಲಕ್ಷ್ಮೀಪುತ್ರ ಬಾವಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ : ಬೀದರ್ | ರೈತರ ಸಂಪೂರ್ಣ ಸಾಲಮನ್ನಾಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ
ರೇವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಸೋಕೋ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





