ಕಲಬುರಗಿ | ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು; ಸರದಿ ಉಳಿಸಿಕೊಳ್ಳಲು ಚಪ್ಪಲಿಗಳ ತಂತ್ರ

Date:

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಜೋರಾಗಿರುವ ನಡುವೆಯೇ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು, ಸೇಡಂ ತಾಲ್ಲೂಕಿನ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಕಚೇರಿ ಎದುರು ರೈತರು ಗೊಬ್ಬರಕ್ಕಾಗಿ ಮುಂಜಾನೆಯಿಂದಲೇ ಕಾದು ನಿಂತ ದೃಶ್ಯ ಕಂಡುಬಂದಿದೆ.

- Advertisement -

ರಸಗೊಬ್ಬರ ವಿತರಣೆ ನಡೆಯಲಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ವಿವಿಧ ಗ್ರಾಮಗಳಿಂದ ರೈತರು ಕಚೇರಿ ಎದುರು ಆಗಮಿಸಿದ್ದರು. ಜನಸಂದಣಿ ಹೆಚ್ಚಿದ್ದ ಕಾರಣ ಕೆಲ ರೈತರು ತಮ್ಮ ಸರದಿ ಕಾಯ್ದಿರಿಸಿಕೊಳ್ಳಲು ಚಪ್ಪಲಿಗಳನ್ನು ಸಾಲಾಗಿ ಇಟ್ಟು ಸ್ಥಳವನ್ನು ಗುರುತಿಸಿಕೊಂಡಿದ್ದರು. ಈ ದೃಶ್ಯ ಸ್ಥಳೀಯರ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಗೊಬ್ಬರ ಪಡೆಯಲು ಹಲವು ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಎಲ್ಲ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗೊಬ್ಬರ ದೊರೆತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಬಿತ್ತನೆ ಅವಧಿಯಲ್ಲಿ ಗೊಬ್ಬರದ ಲಭ್ಯತೆ ಖಚಿತಪಡಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದ ರಸಗೊಬ್ಬರ ಪೂರೈಕೆಯಾಗಲಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಕೆಲ ವಿತರಣಾ ಕೇಂದ್ರಗಳಲ್ಲಿ ಜನಸಂದಣಿ ಹೆಚ್ಚಿರುವ ಕಾರಣ ಪೊಲೀಸ್ ಭದ್ರತೆಯೊಂದಿಗೆ ಗೊಬ್ಬರ ವಿತರಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಕಡಗಂಚಿ ಬಿಸಿಎಂ ಹಾಸ್ಟೆಲ್ ವೈರಲ್ ವಿಡಿಯೋಗೆ ಹೊಸ ತಿರುವು; ಹಳೆಯ ಘಟನೆ ಎಂದ ಇಲಾಖೆ

ಮುಂಗಾರು ಹಂಗಾಮಿನ ಆರಂಭದಲ್ಲೇ ರಸಗೊಬ್ಬರಕ್ಕಾಗಿ ರೈತರು ಪರದಾಡುತ್ತಿರುವುದು ಕೃಷಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...