ಕಲಬುರಗಿ | ಕೀಟನಾಶಕದಿಂದ ರೈತರು ಅಸ್ವಸ್ಥ; ನೆರವಿಗೆ ಎಐಕೆಕೆಎಂ ಆಗ್ರಹ

Date:

ಚಿತ್ತಾಪುರ ತಾಲೂಕಿನ ಗುರೂಜಿ ನಾಯಕ ತಾಂಡಾದಲ್ಲಿ ಬೆಳೆಗೆ ಕ್ರಿಮಿನಾಶಕ ಸಿಂಪಡಿಸುವಾಗ ನಾಲ್ವರು ರೈತರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಅವರ ಚಿಕಿತ್ಸೆ ಭಾರೀ ಹಣ ಕರ್ಚಾಗುತ್ತಿದ್ದು, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅವರಿಗೆ ಆರ್ಥಿಕ ನೆರವು ನೀಡಬೇಕೆಂದು ಎಐಕೆಕೆಎಂ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಸ್‌.ಬಿ ಮಹೇಶ್ ಹೇಳಿದ್ದಾರೆ.

- Advertisement -

“ತಾಂಡಾದ ರೈತ ಸುನೀಲ್ ಜಾಧವ್ (32), ಅನೀಲ್ ಜಾಧವ್ (26), ಕುಮಾರ್ ಜಾಧವ (24) ಹಾಗೂ ಖೇಮು ರಾಠೋಡ್ (35) ಅವರು ಕೀಟನಾಶಕ ಸಿಂಪಡಿಸುವ ವೇಳೆಯಲ್ಲಿ ಕೀಟನಾಶಕ ದೇಹ ಸೇರಿದ್ದು ತೀವ್ರ ಅಸ್ವಸ್ಥರಾಗಿದ್ದಾರೆ. ಕಳೆದ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಸಂಸದರು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ಮಾಡಿದ್ದಾರೆ. ಆದರೆ, ಅವರಿಗೆ ಸಹಾಯ ಮಾಡುವುದಾಗಿ ಹೇಳಿಲ್ಲ. ಅವರಿಗೆ ಸಹಕಾರ ನೀಡದೇ ಇರುವುದು ದುರಂತ ಸಂಗತಿ” ಎಂದು ಮಹೇಶ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ರೈತರ ಚಿಕಿತ್ಸೆಗೆ ದಿನನಿತ್ಯ 2 ಲಕ್ಷ ರೂ. ವೆಚ್ಚವಾಗುತ್ತಿದೆ. ರೋಗಿಗಳು ಇನ್ನೂ ಯಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಬಾರಿ ದರವನ್ನು ಕುಟುಂಬದವರು ಭರಿಸಲು ಪಡಬಾರದ ಕಷ್ಟ ಪಡುತ್ತಿದ್ದಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ಬಂದು ಕೇವಲ ಮಾತನಾಡಿ ಹೋದರು. ಅವರುಗೆ ಯಾವುದೇ ರೀತಿಯ ನೆರವು ನೀಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇನ್ನೂ ನೋವಿನ ವಿಷಯವೇನೆಂದರೆ ಈ ಭಾಗದ ಶಾಸಕರು ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿಯೇ ಇಲ್ಲ. ಜವಬ್ದಾರಿ ಸ್ಥಾನದಲ್ಲಿರುವವರು ರೈತರ ಪರಿಸ್ಥಿತಿಯನ್ನು ಗಮನಿಸದೇ ಇರುವುದು ಖಂಡನೀಯ. ರೈತರ ತಾಯಂದಿರು ನೊಂದಿದ್ದಾರೆ. ಅವರಿಗೆ ಇಂತಹ ಸಂದರ್ಭದಲ್ಲಿ ಸರಿಯಾದ ಬೆಂಬಲ, ಸಹಕಾರ ಮತ್ತು ಸಹಾಯ ಸಿಗದೇ ಹೋದರೆ ಅವರ ಇಡೀ ಕುಟುಂಬವು ಸರ್ವಸ್ವವನ್ನು ಕಳೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ರೈತರ ಚಿಕಿತ್ಸೆಯ ಜವಬ್ದಾರಿಯನ್ನು ಸರ್ಕಾರವೇ ತೆಗೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಹತ್ತಿಗೆ ಔಷಧಿ ಸಿಂಪಡಿಸಲು ಬಳಸಲಾದ ಮೋನೋಕ್ರಾಟ್ ಕಂಪನಿಯಿಂದ ರೈತರ ಆಸ್ಪತ್ರೆಯ ಖರ್ಚನ್ನು ಕೊಡಿಸಬೇಕು. ಅವರ ಜೀವನಾಧಾರಕ್ಕೆ ಸೂಕ್ತವಾದ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...