ಕಲಬುರಗಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ರೈತನ ಕಬ್ಬಿನ ತೋಟ ಬೆಂಕಿಗಾಹುತಿ

Date:

ತಾಲೂಕಿನ ಹೇರೂರ(ಕೆ) ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿ ರೈತನೊಬ್ಬರ ಐದು ಎಕರೆ ಕಬ್ಬಿನ ತೋಟ ಬೆಂಕಿಗಾಹುತಿಯಾದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.

- Advertisement -

ಗ್ರಾಮದ ರೈತ ರೇವಣಸಿದ್ದಪ್ಪ ಸಿದ್ದಣ್ಣ ಕುಂಬಾರ ಅವರಿಗೆ ಸೇರಿದ ತೋಟದಲ್ಲಿ ಸಂಭವಿಸಿದ ಈ ಅವಘಡದಲ್ಲಿ ಒಂದು ಎಕರೆಯಲ್ಲಿದ್ದ ಸುಮಾರು 10 ಟನ್ ಕಬ್ಬು ಸಂಪೂರ್ಣವಾಗಿ ನಾಶವಾಗಿದೆ. ಜೊತೆಗೆ ಐದು ಎಕರೆ ವ್ಯಾಪ್ತಿಯಲ್ಲಿ ಅಳವಡಿಸಲಾಗಿದ್ದ ಕೃಷಿ ಡ್ರಿಪ್ ವ್ಯವಸ್ಥೆ, ಲ್ಯಾಟ್ರಲ್, ಸ್ಪ್ರಿಂಕ್ಲರ್ ಪೈಪ್‌ಗಳು ಹಾಗೂ ಸೋಲಾರ್ ಬೇಲಿ ಬೆಂಕಿಗೆ ಆಹುತಿಯಾಗಿದ್ದು, ಅಂದಾಜು 6 ಲಕ್ಷ ರೂ. ಮೌಲ್ಯದ ಕೃಷಿ ಪರಿಕರಗಳು ನಾಶವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಹೊಲದಲ್ಲಿರುವ ವಿದ್ಯುತ್ ಕಂಬಗಳು ಹಾಗೂ ಜೋತುಬಿದ್ದ ವೈರ್‌ಗಳನ್ನು ಸರಿಪಡಿಸುವಂತೆ ಹೆಬ್ಬಾಳ ಕೆಇಬಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ರೈತ ರೇವಣಸಿದ್ದಪ್ಪ ಕುಂಬಾರ ಆರೋಪಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಅವರು ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಆಸ್ತಿ ಹಂಚಿಕೆ ವಿವಾದ; ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

ಘಟನೆಯ ಮಾಹಿತಿ ಪಡೆದ ಸ್ಥಳೀಯರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...