ಕಲಬುರಗಿ | ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಮಾರಣಾಂತಿಕ ಹಲ್ಲೆ

Date:

ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋವನ್ನು ಪಕ್ಕಕ್ಕೆ ಸರಿಸುವಂತೆ ಹೇಳಿದ ವಿಚಾರಕ್ಕೆ ಕಟ್ಟಿಗೆ ಹಾಗೂ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಲಬುರಗಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ಭೀಮಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

- Advertisement -

ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳಾದ ತೋಟೆಂದ್ರ ಮತ್ತು ಸುನೀಲ್ ಹಲ್ಲೆಗೊಳಗಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

ತೋಟೆಂದ್ರ ಹಾಗೂ ಸುನೀಲ್ ಅವರು ಬಸವರಾಜ ವಿಠ್ಠಲ ಅವರ ಪತ್ನಿಯ ಅಣ್ಣ-ತಮ್ಮಂದಿರಾಗಿದ್ದು, ಭೀಮಳ್ಳಿ ಗ್ರಾಮದಲ್ಲಿರುವ ತಮ್ಮ ಸಹೋದರಿಯ ಮನೆಯಲ್ಲಿ ಗೋಳಾ ಲಕ್ಕಮ್ಮ ದೇವರಿಗೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಬರುತ್ತಿದ್ದರು. ಈ ವೇಳೆ ರಸ್ತೆ ಮಧ್ಯೆ ಆಟೋ ನಿಲ್ಲಿಸಿದ್ದನ್ನು ಗಮನಿಸಿ ಅದನ್ನು ಪಕ್ಕಕ್ಕೆ ಸರಿಸುವಂತೆ ತಿಳಿಸಿದ್ದಾರೆ.

ಇದರಿಂದ ಮಾತಿನ ಚಕಮಕಿ ಉಂಟಾಗಿ, ಕೆಲವೇ ಕ್ಷಣಗಳಲ್ಲಿ ಗಲಾಟೆ ತೀವ್ರಗೊಂಡಿದೆ. ಈ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕಟ್ಟಿಗೆ ಹಾಗೂ ದೊಣ್ಣೆಗಳಿಂದ ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ತೋಟೆಂದ್ರ ಮತ್ತು ಸುನೀಲ್ ಗಾಯಗೊಂಡಿದ್ದಾರೆ.

ಘಟನೆಯ ವೇಳೆ ಜಗಳ ಬಿಡಿಸಲು ಹೋದ ವೃದ್ಧೆಯ ಮೇಲೂ ಹಲ್ಲೆ ನಡೆಸಲಾಗಿದ್ದು, ಅವರ ಕೈ ಎಲುಬು ಮುರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು, ₹1.25 ಲಕ್ಷ ದಂಡ

ಸಣ್ಣ ವಿಚಾರವೇ ಗಲಾಟೆಗೆ ತಿರುಗಿ ಹಲ್ಲೆ ಮಟ್ಟಕ್ಕೆ ತಲುಪಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...