ಕಲಬುರಗಿ | ಲಂಚ ಪಡೆಯುತ್ತಿದ್ದ ವೇಳೆ ಎಫ್‌ಡಿಎ ಲೋಕಾಯುಕ್ತ ಬಲೆಗೆ

Date:

ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಶನಿವಾರ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ತಿಳಿದು ಬಂದಿದೆ.

- Advertisement -

ಕಮಲಾಪುರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕಾಂತ್ ಜಂಜೀರ್ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ಆರೋಪಿಯಾಗಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದ್ದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ಆದೇಶ ಪ್ರತಿಯನ್ನು ನೀಡುವ ಸಲುವಾಗಿ ಫಲಾನುಭವಿಯಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಎಫ್‌ಡಿಎ ಶಶಿಕಾಂತ್ ಮೇಲಿದ್ದು, ಹಣ ನೀಡುವಂತೆ ನಿರಂತರವಾಗಿ ಒತ್ತಾಯಿಸುತ್ತಿದ್ದರಿಂದ ಕಿಶನ್ ರಾಠೋಡ್ ಎಂಬವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಯಾದಗಿರಿ | ವಿಚಾರಣೆಯ ನೆಪದಲ್ಲಿ ರಕ್ತ ಕ್ಯಾನ್ಸರ್ ಪೀಡಿತನ ಮೇಲೆ ಪೊಲೀಸರ ಹಲ್ಲೆ ಆರೋಪ

‘ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ತನಿಖಾಧಿಕಾರಿ ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಮುರಗುಂಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಲಂಚ ಪಡೆಯುತ್ತಿದ್ದ ಎಫ್‌ಡಿಎ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...