ಕಲಬುರಗಿ | ಗುಂಡಿನ ದಾಳಿ; ಆರೋಪಿ ಬಂಧನ

Date:

ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುನಿಲ್‌ ಮಹಾಲಕ್ಷ್ಮಿ ಲೇಔಟ್‌ಗೆ ಬಂದಿದ್ದ ವೇಳೆ ಉಮೇಶ್‌ ಯಳವಂತಿ ಎಂಬಾತ ಸುನಿಲ್‌ನನ್ನು ಅಡ್ಡಗಟ್ಟಿದ್ದು, ʼನಮ್ಮ ಏರಿಯಾಗೆ ಯಾಕೆ ಬಂದಿರುವುದುʼ ಎಂದು ಪ್ರಶ್ನೆ ಮಾಡಿದ್ದ. ಈ ನಡುವೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಸಿಟ್ಟಿಗೆದ್ದ ಸುನಿಲ್‌ ತನ್ನ ಬಳಿ ಇದ್ದ ಗನ್‌ನಿಂದ ಉಮೇಶ್‌ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದಾನೆ. ಸುನಿಲ್ ಹಾರಿಸಿದ ಗುಂಡು ಗೋಡೆಗೆ ತಗುಲಿದ ಪರಿಣಾಮ ಕೂದಲೆಳೆ ಅಂತರದಲ್ಲಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹಾಸನ | ಗ್ರ್ಯಾನೈಟ್ ಉದ್ಯಮಿ ಹತ್ಯೆ ಪ್ರಕರಣ; 143 ಮಂದಿ ಆರೋಪಿಗಳ ಬಂಧನ

ಘಟನೆ ಸಂಬಂಧ ಸದ್ಯ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಂಡಿನ ದಾಳಿ ಮಾಡಿದ ಸುನಿಲ್‌ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸುನಿಲ್‌ ಬಳಿ ಗನ್‌ ಹೇಗೆ ಬಂತು, ಪರವಾನಗಿ ಇದೆಯೇ ಇಲ್ಲವೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗ್ಯಾರಂಟಿ ಯೋಜನೆ ಟೀಕಿಸುವ ಬಿಜೆಪಿಯವರಿಗೆ ಜನರ ಕಷ್ಟಗಳ ಅರಿವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಯವರಿಗೆ ಜನರ ಕಷ್ಟಗಳ ಅರಿವಿಲ್ಲ. ಅವರು...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಕಲಬುರಗಿ | ಕುಡಿಯುವ ನೀರಿಲ್ಲದೆ ಗ್ರಾಮಸ್ಥರ ಪರದಾಟ; ಖಾಲಿ ಕೊಡ ಪ್ರತಿಭಟನೆ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರುಮ್ಮುನುಗುಡ ಗ್ರಾಮದಲ್ಲಿ ಕುಡಿಯುವ ನೀರಿ ಹಾಹಾಕಾರವಿದ್ದು...

ಕಲಬುರಗಿ | ಎಸ್‌ಯುಸಿಐ(ಕಮ್ಯೂನಿಸ್ಟ್)‌ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ದೇಶದ 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಗುಲ್ಬರ್ಗಾ(ಎಸ್‌ಸಿ) ಲೋಕಸಭಾ ಕ್ಷೇತ್ರದಿಂದ ಸೋಷಲಿಸ್ಟ್ ಯೂನಿಟಿ...