ಕಲಬುರಗಿ | ಭಾರತೀಯ ಸಂಸ್ಕೃತಿಯ ನೆಲೆಯಾದ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸಬೇಕು: ಡಾ. ಸದಾನಂದ ಪೆರ್ಲ ಅಭಿಮತ

Date:

ಭಾರತೀಯ ಸಂಸ್ಕೃತಿಯ ನೆಲೆಯಾದ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಸ್ವಯಂಸೇವಾ ಸಂಸ್ಥೆಗಳು ಮತ್ತು ಸರ್ಕಾರಿ ಇಲಾಖೆಗಳು ಕೈಜೋಡಿಸಬೇಕು ಎಂದು ಆಕಾಶವಾಣಿಯ ನಿವೃತ್ತ ಅಧಿಕಾರಿ ಡಾ. ಸದಾನಂದ ಪೆರ್ಲ ಅವರು ಹೇಳಿದರು.

- Advertisement -

ಮಂಗಳವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಸಭಾ ಭವನದಲ್ಲಿ ಪ್ರಿಯದರ್ಶಿನಿ ಸಂಗೀತ ಸಾಂಸ್ಕೃತಿಕ ಸೇವಾ ಸಂಸ್ಥೆ (ರಿ) ಹಡಗಿಲ ಹಾರತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಗ್ರಾಮೀಣ ಜಾನಪದ ಕಲಾ ಮಹೋತ್ಸವ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ಹಾಗೂ ಜಾನಪದ ನೃತ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

‘ಭಾರತೀಯ ಸಂಸ್ಕೃತಿ ವಿಶ್ವಮಟ್ಟದಲ್ಲಿ ಉನ್ನತ ಸ್ಥಾನದಲ್ಲಿ ಗುರುತಿಸಿಕೊಳ್ಳಲು ಜಾನಪದ ಸಂಸ್ಕೃತಿಯೇ ಮೂಲ ಅಡಿಪಾಯವಾಗಿದೆ. ಜಾನಪದವು ಪುಸ್ತಕಾಧಾರಿತ ಅಧ್ಯಯನದಿಂದ ಬೆಳೆದದ್ದಲ್ಲ; ಅದು ಗ್ರಾಮೀಣ ಬದುಕಿನ ಅನುಭವಗಳಿಂದ ರೂಪುಗೊಂಡ ಮೌಖಿಕ ಪರಂಪರೆಯಾಗಿದೆ’ ಎಂದರು.

‘ಗ್ರಾಮೀಣ ಜನರ ಜೀವನಶೈಲಿ, ಸಂಪ್ರದಾಯ, ನಂಬಿಕೆ, ಮೌಲ್ಯಗಳನ್ನು ಒಳಗೊಂಡ ಜಾನಪದ ಸಾಹಿತ್ಯ ಹಾಗೂ ಕಲಾ ಪ್ರಕಾರಗಳು ತಲೆಮಾರಿನಿಂದ ತಲೆಮಾರಿಗೆ ಸಾಗುತ್ತಾ ಭಾರತೀಯ ಸಂಸ್ಕೃತಿಯ ಗಟ್ಟಿಯಾದ ನೆಲೆಯಾಗಿ ಉಳಿದಿವೆ. ಇವು ಜೀವನ ಮೌಲ್ಯಗಳು ಮತ್ತು ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ’ ಎಂದು ತಿಳಿಸಿದರು.

‘-ಇಂದಿನ ತಾಂತ್ರಿಕ ಯುಗದಲ್ಲಿ ಮಾನವೀಯ ಮೌಲ್ಯಗಳು ಹಾಗೂ ಸಂಬಂಧಗಳು ಕುಗ್ಗುತ್ತಿರುವ ಸಂದರ್ಭದಲ್ಲಿ ಜಾನಪದ ಕಲೆ, ಸಾಹಿತ್ಯ, ಸಂಗೀತ ಹಾಗೂ ಜನಪದ ವೈದ್ಯಪದ್ಧತಿ ಸೇರಿದಂತೆ ವಿವಿಧ ಪರಂಪರಾತ್ಮಕ ಜ್ಞಾನವನ್ನು ಯುವಜನತೆಗೆ ಪರಿಚಯಿಸುವ ಅಗತ್ಯ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲವು ಸ್ವಯಂಸೇವಾ ಸಂಸ್ಥೆಗಳು ಕೈಗೊಂಡಿರುವ ಪ್ರಯತ್ನ ಶ್ಲಾಘನೀಯ’ ಎಂದರು.

‘ಕಲ್ಯಾಣ ಕರ್ನಾಟಕ ಭಾಗ ಜಾನಪದ ಪರಂಪರೆಯಲ್ಲಿ ಅತ್ಯಂತ ಶ್ರೀಮಂತವಾಗಿದೆ. ಆಕಾಶವಾಣಿ ಮೊದಲಾದ ಮಾಧ್ಯಮಗಳು ಜಾನಪದ ಕಲಾವಿದರನ್ನು ಗುರುತಿಸಿ ಬೆಳೆಸುವಲ್ಲಿ ಮಹತ್ವದ ಕೊಡುಗೆ ನೀಡಿವೆ. ಜಾನಪದ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಲಾವಿದರು ಸಮಾಜದಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಸಮೃದ್ಧ ಸಮಾಜ ನಿರ್ಮಾಣದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ’ ಎಂದು ಹೇಳಿದರು.

‘ಜಾನಪದದ ತತ್ವ ಮತ್ತು ಸಂದೇಶಗಳು ಶಾಂತಿ, ಸಾಮರಸ್ಯ ಮತ್ತು ಮೌಲ್ಯಾಧಾರಿತ ಬದುಕನ್ನು ಕಟ್ಟಿಕೊಡಲು ಸಹಕಾರಿಯಾಗುತ್ತವೆ. ಆದ್ದರಿಂದ ಜಾನಪದದ ಬಗ್ಗೆ ನಿರ್ಲಕ್ಷ್ಯ ತೋರದೆ ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲೂ ಇದೆ’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಗ್ಯಾಸ್‌ ಸಿಲಿಂಡರ್ ಸಿದಿದ್ದಕ್ಕೆ ಬಡವರ ಬದುಕು ಕಂಗಾಲು:‌ ಕೂಲಿ ಬಿಟ್ಟು ಸರದಿ ಸಾಲಿನಲ್ಲಿ ನಿಲ್ಲುವ ದುಃಸ್ಥಿತಿ

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ಮತ್ತು ಜಾನಪದ ನೃತ್ಯ ಪ್ರದರ್ಶನಗಳು ಗಮನ ಸೆಳೆದವು. ವಿವಿಧ ಕಲಾವಿದರು, ಸ್ಪರ್ಧಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...