ಕಲಬುರಗಿ | ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾಗೇಂದ್ರ ಮಸೂತಿಗೆ ಅಧಿಕೃತ ಆಹ್ವಾನ

Date:

ಕಲಬುರಗಿ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಅ.28 ಮತ್ತು 29ರಂದು ನಡೆಯಲಿರುವ ಕಲಬುರಗಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಡಾ.ನಾಗೇಂದ್ರ ಮಸೂತಿ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸತ್ಕರಿಸಿ, ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.

- Advertisement -

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, “ಕಳೆದ ನಾಲ್ಕು ದಶಕಗಳಿಂದ ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳನ್ನು ಜೊತೆಜೊತೆಯಾಗಿ ಮುನ್ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯ ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಕಾರ್ಯವನ್ನು ಪರಿಷತ್ತು ನಿರಂತರವಾಗಿ ಮಾಡುತ್ತಿದೆ. ಕನ್ನಡ ಸಾರಸ್ವತ ಲೋಕಕ್ಕೆ ಡಾ. ನಾಗೇಂದ್ರ ಮಸೂತಿ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಅಧಿಕೃತ ಆಹ್ವಾನ ಸ್ವೀಕರಿಸಿ ಮಾತನಾಡಿದ ನಿಯೋಜಿತ ಸಮ್ಮೇಳನಾಧ್ಯಕ್ಷ ಡಾ.ನಾಗೇಂದ್ರ ಮಸೂತಿ ಮಾತನಾಡಿ, “ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ನಿರಂತರವಾಗಿ ಆಯೋಜಿಸುತ್ತಿರುವ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಯಾವುದೇ ಬರವಿಲ್ಲ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ತೇಗಲತಿಪ್ಪಿ ಹಾಗೂ ಅವರ ಬಳಗಕ್ಕೆ ಮತ್ತಷ್ಟು ಬಲ ತುಂಬಬೇಕಿದೆ. ವಿಶೇಷ ಹಾಗೂ ವೈವಿಧ್ಯಮಯ ಸಮ್ಮೇಳನಗಳ ಮೂಲಕ ತೆರೆಮರೆಯಲ್ಲಿರುವ ಪ್ರತಿಭಾವಂತ ಲೇಖಕರನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಯುತ್ತಿದೆ. ಈ ಪ್ರಯತ್ನದ ಮೂಲಕ ಕನ್ನಡ ಸಾಹಿತ್ಯ ಪರಿಷತ್ತನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷ ಬಸವರಾಜ ಬಳೂಂಡಗಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ ಗಂಗೂ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಮುಡುಬಿ ಗುಂಡೇರಾವ, ಪ್ರಾಧ್ಯಾಪಕ ಡಾ. ಶಿವಶರಣಪ್ಪ ಮೋತಕಪಳ್ಳಿ, ಜಿಲ್ಲಾ ಕಸಾಪದ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ಧನ್ನಿ, ರವೀಂದ್ರಕುಮಾರ ಭಂಟನಳ್ಳಿ, ಸಿದ್ಧಲಿಂಗ ಬಾಳಿ, ವಿದ್ಯಾಸಾಗರ ದೇಶಮುಖ, ಶಿವಲೀಲಾ ಕಲಗುರ್ಕಿ, ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ಮಹಾದೇವ ಬಡಾ, ಈರಣ್ಣ ಸೋನಾರ, ಪರಮಾನಂದ ಸರಸಂಬಿ, ಬಂಗಾರಪ್ಪ ಆಡಿನ್, ಮಹಾಲಿಂಗಯ್ಯ ಸ್ವಾಮಿ, ರಾಜೇಂದ್ರ ಮಾಡಬೂಳ, ಹಣಮಂತರಾವ ಪೆಂಚನಪಳ್ಳಿ, ಅನೀಲಕುಮಾರ ಪಾಟೀಲ, ಕುಪೇಂದ್ರ ಬರಗಾಲಿ, ಜ್ಯೋತಿ ಹಿರೇಮಠ, ಮಹಾನಂದಾ ಹುಲಿ, ವೆಂಕುಬಾಯಿ ರಜಪೂತ, ಪ್ರೊ. ಎಸ್.ಎಲ್. ಪಾಟೀಲ, ಶಿವಕುಮಾರ ಬಿದರಿ, ಮಲ್ಲಿನಾಥ ಸಂಗಶೆಟ್ಟಿ, ರೇವಯ್ಯ ಸ್ವಾಮಿ, ಜಯಶ್ರೀ ಜಮಾದಾರ, ಸಮರೀನ್ ಶೇಖ್, ಡಾ. ರೆಹಮಾನ್ ಪಟೇಲ್, ಬಾಬಾ ಫಕ್ರುದ್ದೀನ್, ಮಹ್ಮದ್ ಅಯಾಜೋದ್ದಿನ್ ಪಟೇಲ್, ಬಿ.ಎಂ. ಪಾಟೀಲ ಕಲ್ಲೂರ, ಪ್ರಭುಶೆಟ್ಟಿ ಮುದ್ದಾ, ಪದ್ಮಾವತಿ ನಾಯಕ್ ಹಾಗೂ ದಿನೇಶ ಮದಕರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೂ 7 ದಿನ ಭಾರೀ ಮಳೆ

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ ರಾಜ್ಯದ ಹವಾಮಾನದಲ್ಲಿ ದಿಢೀರ್...

ರಾಮಮಂದಿರ ಲೂಟಿ: ಕಳ್ಳರು, ಅಪರಾಧಿಗಳನ್ನು ಮೋದಿ, ಶಾ, ಯೋಗಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್ ಆರೋಪ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆ ಹಣ ಮತ್ತು ದಾನದ...

ಫ್ರಾನ್ಸ್‌ನಲ್ಲಿ ಭಾರೀ ಜನಾಕ್ರೋಶ: 4 ಲಕ್ಷಕ್ಕೂ ಹೆಚ್ಚು ಜನರ ಪ್ರತಿಭಟನೆ

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಡಳಿತಾವಧಿಯ ಕೊನೆಯ ಹಂತದಲ್ಲಿ ದೇಶಾದ್ಯಂತ...