ಕಲಬುರಗಿ | ನಿರುದ್ಯೋಗಿಗಳಿಗೆ ಸುವರ್ಣಾವಕಾಶ; ಎಸ್‌ಬಿಐ ಆರ್‌ಸೆಟ್‌ನಿಂದ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

Date:

ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕಲಬುರಗಿ ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RSETI) ವಿವಿಧ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್‌.ಬಿ.ಐ. ಆರ್‌ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

- Advertisement -

ಜುಲೈ 16ರಿಂದ ಆಗಸ್ಟ್ 16ರವರೆಗೆ ದ್ವಿಚಕ್ರ ವಾಹನ ದುರಸ್ತಿ ಮತ್ತು ಸರ್ವೀಸ್ ತರಬೇತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. ಜುಲೈ 13ರಿಂದ 25ರವರೆಗೆ ಕೃಷಿ ಉದ್ಯಮಿ (ಕುರಿ-ಆಡು ಸಾಕಾಣಿಕೆ, ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕೆ) ತರಬೇತಿ ಆಯೋಜಿಸಲಾಗಿದ್ದು, ಜುಲೈ 12ರವರೆಗೆ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಜುಲೈ 25ರಿಂದ ಆಗಸ್ಟ್ 8ರವರೆಗೆ ಸಿಸಿಟಿವಿ ಇನ್‌ಸ್ಟಾಲೇಶನ್ ಮತ್ತು ಸರ್ವೀಸ್ ಹಾಗೂ ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿ ನೀಡಲಾಗುತ್ತಿದ್ದು, ಜುಲೈ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜುಲೈ 20ರಿಂದ ಆಗಸ್ಟ್ 20ರವರೆಗೆ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್‌ಸೆಟ್ ರಿಪೇರಿ ಹಾಗೂ ಸರ್ವೀಸ್ ತರಬೇತಿ ನಡೆಯಲಿದ್ದು, ಜುಲೈ 19ರೊಳಗೆ ಅರ್ಜಿ ಸಲ್ಲಿಸಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. 18ರಿಂದ 50 ವರ್ಷದೊಳಗಿನ ಬಿಪಿಎಲ್, ಅಂತ್ಯೋದಯ ಅಥವಾ ಎಂಜಿಎನ್‌ಆರ್‌ಇಜಿಎ ಕಾರ್ಡ್ ಹೊಂದಿರುವ ಗ್ರಾಮೀಣ ಕುಟುಂಬಗಳ ನಿರುದ್ಯೋಗಿಗಳು ಅರ್ಜಿ ಸಲ್ಲಿಸಲು ಅರ್ಹರು.

ಇದನ್ನು ಓದಿದ್ದೀರಾ? ಯಾದಗಿರಿ | ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಶ್ವಾನ ದಳದಿಂದ ತೀವ್ರ ತಪಾಸಣೆ

ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9900135705, 7019939996, 9901694389, 9901098123 ಹಾಗೂ 9448994585 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಎಸ್‌ಬಿಐ ಆರ್‌ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 28ರಂದು ಕಾರವಾರ, ಕುಮಟಾ ಹಾಗೂ ಗೋಕರ್ಣ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರವಾರ: ತುರ್ತು ವಿದ್ಯುತ್ ಮಾರ್ಗ ನಿರ್ವಹಣೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಉತ್ತರ ಕನ್ನಡ | ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 11.39 ಲಕ್ಷ ಮತದಾರರು

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ...