ಕಲಬುರಗಿ | ಕರ್ತವ್ಯದಲ್ಲೇ ಹೃದಯಾಘಾತ; ಕೆಎಸ್‌ಆರ್‌ಟಿಸಿ ನಿರ್ವಾಹಕ ನಿಧನ

Date:

ಕೆಎಸ್‌ಆರ್‌ಟಿಸಿ ಬಸ್‌ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೇವರ್ಗಿಯಲ್ಲಿ ನಡೆದಿದೆ.

- Advertisement -

ಕಲಬುರಗಿಯಿಂದ ಹರವಾಳ ಕಡೆಗೆ ತೆರಳುತ್ತಿದ್ದ ಬಸ್ ಜೇವರ್ಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸಮೀಪ ತಲುಪಿದಾಗ ಮಲ್ಲಯ್ಯ ಸ್ವಾಮಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ಹಾಗೂ ಸಹೋದ್ಯೋಗಿಗಳು ಕೂಡಲೇ ಬಸ್ ನಿಲ್ಲಿಸಿ ಅವರನ್ನು ಜೇವರ್ಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಆದರೆ ಆಸ್ಪತ್ರೆಗೆ ಕರೆದೊಯ್ದು ವೈದ್ಯರು ಪರೀಕ್ಷಿಸಿದಾಗ ಮಲ್ಲಯ್ಯ ಸ್ವಾಮಿ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದಿಂದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಮೃತ ಮಲ್ಲಯ್ಯ ಸ್ವಾಮಿ ಅವರು ಜೇವರ್ಗಿ ತಾಲೂಕಿನ ರಾಜವಾಳ ಗ್ರಾಮದ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಕೆಎಸ್‌ಆರ್‌ಟಿಸಿಯಲ್ಲಿ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ರಸಗೊಬ್ಬರ, ಯೂರಿಯಾ ಕೊರತೆಗೆ ಎತ್ತಿನ ಬಂಡಿ ಸಮೇತ ಡಿಸಿ ಕಚೇರಿ ಎದುರುಗಡೆ ರೈತರ ಪ್ರತಿಭಟನೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜೇವರ್ಗಿ ಡಿಪೋ-2ರ ವ್ಯವಸ್ಥಾಪಕ ಕೃಷ್ಣ ಹಾಗೂ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳಲಾಯಿತು.

ಮಲ್ಲಯ್ಯ ಸ್ವಾಮಿ ಅವರ ನಿಧನಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ...

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ...