ಕಲಬುರಗಿ | ಮಾನವ ಸಂಪನ್ಮೂಲ‌ ಈ ದೇಶದ ಪ್ರಬಲ ಆಸ್ತಿ, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು: ಸಚಿವ ಪ್ರಿಯಾಂಕ್ ಖರ್ಗೆ

Date:

ಮಾನವ ಸಂಪನ್ಮೂಲ ಈ ದೇಶದ ಪ್ರಬಲ ಆಸ್ತಿಯಾಗಿದೆ. ಈ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

- Advertisement -

ಕಲಬುರಗಿ ನಗರದ ಆದರ್ಶ ಶಿಕ್ಷಣ ಸಂಸ್ಥೆಯ ಪ್ರೊ. ಪಿ ಎಸ್ ಚೌಧರಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮ‌ದಲ್ಲಿ ಮಾತನಾಡಿದರು. “ಗುಣಮಟ್ಟದ ಶಿಕ್ಷಣ ಹಾಗೂ ಕೌಶಲ್ಯ ತರಬೇತಿ ನೀಡುವ ಮೂಲಕ ಯುವಕರನ್ನು ಸಮರ್ಪಕ ಮಾನವ ಸಂಪನ್ಮೂಲವನ್ನಾಗಿ ಪರಿವರ್ತಿಸಬೇಕು. ಬಲಿಷ್ಠ ಸಮಾಜ‌ ನಿರ್ಮಾಣ ಮಾಡುವಲ್ಲಿ ಇದು ಸಹಕಾರಿಯಾಗಲಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ವಿದೇಶದಲ್ಲಿ ಭಾರತ ಸಂಪನ್ಮೂಲ ಅದರಲ್ಲೂ ಕರ್ನಾಟಕ ಕೌಶಲ್ಯ ತರಬೇತಿ ಹೊಂದಿದ ಮಾನವ ಸಂಪನ್ಮೂಲಕ್ಕೆ ಭಾರೀ ಬೇಡಿಕೆ ಇದೆ. ಇತ್ತೀಚಿಗೆ ಅಮೇರಿಕಾಕ್ಕೆ ತಾವು ಭೇಟಿ ನೀಡಿದಾಗ ಅಲ್ಲಿನ ಉದ್ಯಮಿಗಳು ತಮಗೆ ರಾಜ್ಯದ ಕೌಶಲ್ಯ‌ ತರಬೇತುದಾರರನ್ನು ಒದಗಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ” ಎಂದರು.

“ಐಟಿಐ ಮುಗಿಸಿದ ವಿದ್ಯಾರ್ಥಿಗಳು ರೀ ಸ್ಕಿಲ್ಲಿಂಗ್, ಅಪ್ ಸ್ಕಿಲ್ಲಿಂಗ್ ಆಗುವ ಮೂಲಕ ವಿದೇಶಕ್ಕೆ ಬೇಕಾಗುವ ತರಬೇತಿ ಹೊಂದಿದ ಯುವಕರನ್ನು ಒದಗಿಸಲು ಅನುಕೂಲವಾಗುತ್ತದೆ. ಬೆಂಗಳೂರಿನಲ್ಲಿ ಐ-ಫೋನ್ ತಯಾರಿಕ ಘಟಕ ಸ್ಥಾಪನೆ ಮಾಡುತ್ತಿದೆ. ಅದಕ್ಕೆ 48,000 ಮಂದಿ ತರಬೇತಿ ಹೊಂದಿದ‌ ಯುವಕರು ಬೇಕಾಗುತ್ತದೆಂದು ಕಂಪನಿ ಬೇಡಿಕೆ ಇಟ್ಟಿದೆ. ಒಂದು ಪ್ರಮುಖ ಅಂಶವೆಂದರೆ‌ ಈ ತರಹದ ಹೊಸ ಆವಿಷ್ಕಾರಗಳಿಗೆ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ. ನಾವೂ ಕೂಡಾ ಈ ವಿಷಯದಲ್ಲಿ ಅವರಂತೆ ಆಧುನಿಕ ಜಗತ್ತಿಗೆ ಅನುಕೂಲವಾಗುವಂತ ಕೌಶಲ್ಯ ಹೊಂದಿದ ಮಾನವ ಸಂಪನ್ಮೂಲ ಉತ್ಪನ್ನ ಮಾಡಿದಾಗ ಮಾತ್ರ ಚೀನಾಗೆ ಸರಿಗಟ್ಟಬಹುದು” ಎಂದರು.

“ಸ್ಕಿಲ್ಲಿಂಗ್ ಇನ್ನೋವೇಷನ್ ಹಾಗೂ ಇನ್ಕ್ಯೂಬೇಷನ್ ಸೆಂಟರ್ ನಿರ್ಮಾಣ ಮಾಡುವ ಆಲೋಚನೆ ಇದ್ದು, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಅವರ ನೇತೃತ್ವದಲ್ಲಿ ಈಗಾಗಲೇ ಸ್ಕಿಲ್ ಅಡ್ವೈಸರಿ ಕಮಿಟಿ ಸ್ಥಾಪಿಸಲಾಗಿದೆ. ನಮ್ಮ ರಾಜ್ಯದಲ್ಲಿರುವ ಕೌಶಲ್ಯ ಹೊಂದಿದ ಮಾನವ ಸಂಪನ್ಮೂಲ ಬಳಸಿಕೊಂಡು ಕರ್ನಾಟಕವನ್ನು ‘ಸ್ಕಿಲ್ ಕ್ಯಾಪಿಟಲ್’ ಮಾಡುತ್ತೇವೆ” ಎಂದು ಸಚಿವರು ಘೋಷಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಕೆಲ ವರ್ಷಗಳ ಹಿಂದೆ ಕೈಗಾರಿಕ ತಯಾರಿಕೆಗೆ ಒತ್ತು ನೀಡಲಾಗುತ್ತಿತ್ತು. ಈಗ ತಾಂತ್ರಿಕತೆ ಹಾಗೂ ಕೌಶಲ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭಾರತದ ಮಾನವ ಸಂಪನ್ಮೂಲಕ್ಕೆ ಹೆಚ್ಚು ಬೇಡಿಕೆ ಇದೆ. ಸ್ಲೋವಾಕಿಯಾ ದೇಶದವರು 2000 ಟ್ರೈನಿಡ್ ಐಟಿಐ ಪದವೀಧರರ ಬೇಡಿಕೆ ಇಟ್ಟಿದ್ದಾರೆ. ತರಬೇತಿ ನೀಡಿ 200 ಅಭ್ಯರ್ಥಿಗಳನ್ನು ಕಳಿಸಲಾಗುತ್ತದೆ. ಅವರಲ್ಲಿ ಕಲಬುರಗಿಯಿಂದ 20 ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ” ಎಂದರು.

“ಉತ್ಪಾದಕರು ಐಟಿಐ, ಡಿಪ್ಲೋಮ ಹಾಗೂ ಎಂಜಿನಿಯರ್ ಪಾಸಾದವರಿಗೆ ತರಬೇತಿ ನೀಡಿ ಕೆಲಸ ಕೊಡಿಸುವುದು ಸರ್ಕಾರದ ಈಗಿನ ಆದ್ಯ ಕರ್ತವ್ಯವಾಗಿದೆ. ಸಂಪರ್ಕ ಸೇರಿದಂತೆ ಹೆಚ್ಚುವರಿ ತರಬೇತಿ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಈ ಬಗ್ಗೆ ಸಚಿವರುಗಳಾದ ಪ್ರಿಯಾಂಕ್ ಖರ್ಗೆ ಹಾಗೂ ಎಂ ಸಿ ಸುಧಾಕರ್ ಜೊತೆಗೂಡಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದೇವೆ” ಎಂದರು.

“ರಾಜ್ಯದಲ್ಲಿ 250 ಸರ್ಕಾರಿ ಐಟಿಐ ಕಾಲೇಜುಗಳು, 33 ಜಿಟಿಟಿಸಿ, ಕೆಜಿಡಿಟಿಐ ಸಂಸ್ಥಗಳಿವೆ. ಇಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಕಲಬುರಗಿಯಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಸೇರಿದಂತೆ ಇತರೆ ತಾಂತ್ರಿಕ ಸಂಸ್ಥೆಗಳ ಅಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ” ಎಂದರು.

“ಕಲಬುರಗಿ ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿಯಾಗಿವೆ. ಜಿಮ್ಸ್, ಜಯದೇವ ಸಂಸ್ಥೆಯ ವಿಸ್ತರಣೆ, ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಜೊತೆಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ. ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ, ಯುವನಿಧಿಯನ್ನು ಜನವರಿ 12ರಂದು ವಿವೇಕಾನಂದ ಜಯಂತಿಯ ದಿನದಂದು ಯೋಜನೆಗೆ ಚಾಲನೆ ನೀಡಲಾಗುವುದು” ಎಂದು ಸಚಿವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಗ್ರಾಮೀಣ ವೈದ್ಯರ ಮೇಲೆ ನಡೆಯುತ್ತಿರುವ ಕಿರುಕುಳ ತಡೆಗೆ ಆಗ್ರಹ

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಇತರರಿಗೆ ಬೆಳ್ಳಿ ಪದಕ ಹಾಗೂ ಕಂಚಿನ ಪದಕ ನೀಡಿ ಗೌರವಿಸಿದರು.

ವೇದಿಕೆಯ ಮೇಲೆ ಶಾಸಕರುಗಳಾದ ಕನೀಜ್ ಫಾತೀಮಾ ಹಾಗೂ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ರವೀಂದ್ರನಾಥ ಬಾಳಿ, ವಿಜಯಕುಮಾರ ಕಲ್ಮಣಕರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...