ಕಲಬುರಗಿ | ನಡುರಸ್ತೆಯಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

Date:

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಪತಿಯೊಬ್ಬನು ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಮಾಡಿದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

- Advertisement -

ಮೃತ ಮಹಿಳೆಯನ್ನು ಶೈಲಾ (28) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ಅಕ್ಷಯ್ ಎಂದು ತಿಳಿದುಬಂದಿದೆ. ಮಹಾರಾಷ್ಟ್ರ ಮೂಲದ ಈ ದಂಪತಿಗಳ ನಡುವೆ ಅನೈತಿಕ ಸಂಬಂಧದ ಅನುಮಾನದಿಂದ ಕಲಹ ಉಂಟಾಗಿತ್ತು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ʼಅಕ್ಷಯ್ ತನ್ನ ಪತ್ನಿಯನ್ನು ಗಾಣಗಾಪುರಕ್ಕೆ ಹೋಗೋಣ ಎಂದು ಹೇಳಿ ಕಾರಿನಲ್ಲಿ ಕರೆದುಕೊಂಡು ಬಂದಿದ್ದಾನೆ. ಮಾರ್ಗ ಮಧ್ಯೆ ಹೊಲದ ಬಳಿಯಲ್ಲಿ ಕಾರು ನಿಲ್ಲಿಸಿ, ಆಕೆಯನ್ನು ಹೊರಗೆ ಎಳೆದು ಕುಡುಗೋಲಿನಿಂದ ಕತ್ತಿಗೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಶೈಲಾ ಪ್ರಾಣ ಉಳಿಸಿಕೊಳ್ಳಲು ಹೊಲದ ಕಡೆ ಓಡಲು ಪ್ರಯತ್ನಿಸಿದ್ದರೂ, ಆರೋಪಿ ಪತಿ ಆಕೆಯನ್ನು ಬೆನ್ನಟ್ಟಿ ಕಾರಿನಿಂದ ಡಿಕ್ಕಿ ಹೊಡೆದು, ಬಳಿಕ ಆಕೆಯ ಮೇಲೆ ಕಾರು ಹಾಯಿಸಿ ಕೊಲೆ ಮಾಡಿದ್ದಾನೆʼ ಎಂದು ತಿಳಿದುಬಂದಿದೆ.

ಘಟನೆ ನಡೆಯುವ ವೇಳೆ ಅಲ್ಲಿ ಇದ್ದ ಜನರು ಬೆಚ್ಚಿಬಿದ್ದು ನೋಡುತ್ತಲೇ ನಿಂತಿದ್ದರು. ಪರಿಸ್ಥಿತಿ ಏಕಾಏಕಿ ಭೀತಿದಾಯಕವಾಗಿದ್ದರಿಂದ ಬಹುತೇಕರು ಗಾಬರಿಗೊಂಡಿದ್ದರು. ಕೆಲವು ಮಂದಿ ಧೈರ್ಯ ಮಾಡಿ ಹಂತಕನ ಮೇಲೆ ಕಲ್ಲುಗಳನ್ನು ಎಸೆದು ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಿದರೂ ಆ ಪ್ರಯತ್ನ ಫಲಕಾರಿಯಾಗಲಿಲ್ಲ.

ಈ ಭೀಕರ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರಲ್ಲಿ ಆಕ್ರೋಶ ಹಾಗೂ ಆತಂಕ ಹೆಚ್ಚಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಇದನ್ನೂ ಓದಿ : ಕಲಬುರಗಿ | ಕೇಂದ್ರ ಬಸ್ ನಿಲ್ದಾಣದಲ್ಲಿ ದುರ್ಘಟನೆ: ಬಸ್ ಡಿಕ್ಕಿಗೆ ಮಹಿಳೆ ಸಾವು!

ಘಟನೆ ಬಗ್ಗೆ ಮಾಹಿತಿ ತಿಳಿದು, ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಡ್ಡೂರು ಶ್ರೀನಿವಾಸುಲು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಪತಿ ಅಕ್ಷಯ್ ಸೇರಿದಂತೆ ಆತನ ತಂದೆ-ತಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯು ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಮತ್ತೊಂದು ಬೆಂಗಾಲ್ ಆಗಲು ಬಿಡುವುದಿಲ್ಲ; SIR ರದ್ದಾಗಲೇಬೇಕು: ಪ್ರಕಾಶ್ ರಾಜ್

ಕರ್ನಾಟಕ ಮತ್ತೊಂದು ಪಶ್ಚಿಮ ಬಂಗಾಳವಾಗಲು ಬಿಡುವುದಿಲ್ಲ. SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಮತದಾರರ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...