ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

Date:

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

- Advertisement -

ಕಲಬುರಗಿ ನಗರದ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಿಳಾ ಮೀಸಲಾತಿ ಜಾರಿಗೆ ಕಾಂಗ್ರೆಸ್ ಈಗಾಗಲೇ ಬೆಂಬಲ ನೀಡಿದೆ. ಆದರೆ, ಕ್ಷೇತ್ರಗಳ ಮರುವಿಂಗಡಣೆಯ ನಂತರವೇ ಮೀಸಲಾತಿ ಜಾರಿಗೊಳಿಸುವ ಷರತ್ತು ಏಕೆ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಈ ಕುರಿತು ಚರ್ಚಿಸಿ ತಕ್ಷಣ ನಿರ್ಧಾರ ಕೈಗೊಳ್ಳಬೇಕು. ರಿಜಿಜು ಅವರಿಗೆ ಸಂಪೂರ್ಣ ಅಧಿಕಾರವಿಲ್ಲ. ಅವರು ಮೋದಿ ಮತ್ತು ಅಮಿತ್ ಶಾ ಅವರ ನಿರ್ದೇಶನದಂತೆ ನಡೆದುಕೊಳ್ಳುತ್ತಾರೆ. ನಿಜವಾಗಿಯೂ ಅಧಿಕಾರವಿದ್ದರೆ ನಾಳೆಯೇ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲಿ. ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ” ಎಂದರು.

Advertisements

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸುಳ್ಳು ಹೇಳುವ ಮೂಲಕ ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಯುವಕರಿಗೆ ಉದ್ಯೋಗ ಕಲ್ಪಿಸುವುದು ಹಾಗೂ ವಿವಿಧ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸುವುದಕ್ಕೆ ಸರ್ಕಾರ ಆದ್ಯತೆ ನೀಡಬೇಕು. ಅನುದಾನದ ಕೊರತೆಯಿಂದ ಹಲವು ವಿಶ್ವವಿದ್ಯಾಲಯಗಳು ಸಂಕಷ್ಟ ಎದುರಿಸುತ್ತಿವೆ. ಇಂತಹ ಸಮಸ್ಯೆಗಳನ್ನು ಪರಿಹರಿಸುವ ಬದಲು ಸರ್ಕಾರ ಬೇರೆ ವಿಚಾರಗಳಿಗೆ ಆದ್ಯತೆ ನೀಡುತ್ತಿದೆ. ದೇಶದ ಹಿತ ಕಾಪಾಡಲು ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದು ಹೇಳಿದರು.

Advertisements

ಎಸ್‌ಐಆರ್ ರದ್ದುಪಡಿಸಲು ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು. 2023ರ ಕಾಯ್ದೆಯನ್ನು ಹಿಂಪಡೆಯುವುದರ ಜತೆಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ಖರ್ಗೆ ಒತ್ತಾಯಿಸಿದರು.

ರಾಹುಲ್ ಗಾಂಧಿ ಟೀಕಿಸುವುದೇ ಬಿಜೆಪಿಯ ಕೆಲಸವೇ?

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಿರಂತರವಾಗಿ ಟೀಕಿಸುವುದೇ ಬಿಜೆಪಿಯ ಕೆಲಸವಾಗಿದೆ ಎಂದು ಖರ್ಗೆ ಟೀಕಿಸಿದರು.

ಕಾಂಗ್ರೆಸ್ ನಡೆಸುವ ಪ್ರತಿಭಟನೆಯಲ್ಲಿ 8 ಸಾವಿರ ಜನರು ಭಾಗವಹಿಸಿದರೆ ಏನಾಗುತ್ತದೆ ಎಂದು ಪ್ರಶ್ನಿಸುವ ಬಿಜೆಪಿಯವರು, ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಪ್ರತಿಭಟನೆ ನಡೆಸಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಜನರ ಸಮಸ್ಯೆಗಳಿಗಾಗಿ ಧ್ವನಿ ಎತ್ತಲು ಲಕ್ಷಾಂತರ ಜನರನ್ನು ಸೇರಿಸಿ ಗಲಾಟೆ ಮಾಡಬೇಕೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

8 ರಿಂದ 10 ಸಾವಿರ ಜನರ ಪ್ರತಿಭಟನೆಗೆ ಹೆದರುವುದಿಲ್ಲ ಎಂದು ಅಮಿತ್ ಶಾ ಹೇಳುತ್ತಾರೆ. ಹಾಗಾದರೆ, ದೇಶದ ಕೋಟ್ಯಂತರ ಜನರು ಒಟ್ಟಾಗಿ ಪ್ರತಿಭಟನೆ ನಡೆಸಿದರೆ ಅದನ್ನು ಒಪ್ಪಿಕೊಳ್ಳುತ್ತಾರೆಯೇ? ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವುದು ವಿರೋಧ ಪಕ್ಷದ ಕರ್ತವ್ಯವಾಗಿದೆ. ಇತರರನ್ನು ಟೀಕಿಸುವುದರಿಂದ ಏನು ಪ್ರಯೋಜನ? ರಾಹುಲ್ ಗಾಂಧಿ ಅವರನ್ನು ಇನ್ನೆಷ್ಟು ದಿನ ಟೀಕಿಸುತ್ತೀರಿ? ಜವಾಹರಲಾಲ್ ನೆಹರೂ ಮತ್ತು ಇಂದಿರಾ ಗಾಂಧಿ ಅವರನ್ನು ನಿರಂತರವಾಗಿ ಟೀಕಿಸುತ್ತಲೇ ಬಂದಿದ್ದೀರಿ. ರಾಜೀವ್ ಗಾಂಧಿ ಅವರ ನಂತರ ಅವರ ಕುಟುಂಬದ ಯಾರಾದರೂ ಪ್ರಧಾನಿಯಾಗಿದ್ದಾರೆಯೇ ಅಥವಾ ಸಚಿವರಾಗಿದ್ದಾರೆಯೇ ಎಂದು ಖರ್ಗೆ ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾನ್ಯ ಶಿಸ್ತುಕ್ರಮವನ್ನು ‘ಆತ್ಮಹತ್ಯೆಗೆ ಪ್ರಚೋದನೆ’ ಎನ್ನಲಾಗದು: ಮದ್ರಾಸ್ ಹೈಕೋರ್ಟ್

ರಜೆ ಅರ್ಜಿಯನ್ನು ತಿರಸ್ಕರಿಸುವುದು, ಕರ್ತವ್ಯಕ್ಕೆ ಗೈರುಹಾಜರಿ ಎಂದು ದಾಖಲಿಸುವುದು ಹಾಗೂ ಶಿಸ್ತುಕ್ರಮ...

ಸ್ಥಳೀಯ ಸಂಸ್ಥೆಗಳ ಚುನಾವಣೆ ನಾಮಪತ್ರ ಸಲ್ಲಿಕೆ ಗಡುವು ಪರಿಶೀಲಿಸಿ; ಆಂಧ್ರ ಪ್ರದೇಶ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ!

ಆಂಧ್ರಪ್ರದೇಶದಲ್ಲಿ ಮುಂಬರಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...