ಕಲಬುರಗಿ | ಅಪ್ರಾಪ್ತ ಬಾಲಕಿಯರೊಂದಿಗೆ ಅನುಚಿತ ವರ್ತನೆ: ಖಾಸಗಿ ಶಾಲಾ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Date:

ನಗರದ ಖಾಸಗಿ ಶಾಲೆಯೊಬ್ಬ ಸಿಬ್ಬಂದಿಯೊಬ್ಬನು ಐವರು ಅಪ್ರಾಪ್ತ ಬಾಲಕಿಯರಿಗೆ ಅನುಚಿತವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಘಟನೆ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.

- Advertisement -

ಪೋಷಕರು ನೀಡಿದ ದೂರಿನ ಪ್ರಕಾರ, ಶಾಲೆಯಲ್ಲಿ ಓದುತ್ತಿರುವ ಐವರು ಅಪ್ರಾಪ್ತ ಬಾಲಕಿಯರನ್ನು ಸಿಬ್ಬಂದಿ ದಾವೂದ್ (60) ಅನುಚಿತವಾಗಿ ಸ್ಪರ್ಶಿಸಿ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಕಿರುಕುಳದಿಂದ ಮಾನಸಿಕ ಒತ್ತಡಕ್ಕೆ ಒಳಗಾದ ಬಾಲಕಿಯರು ಶಾಲೆಗೆ ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪೋಷಕರಿಗೆ ವಿಷಯ ತಿಳಿದುಬಂದಿದ್ದು, ಬಳಿಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಕುರಿತು ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನಂತರ ಆರೋಪಿಗೆ ಜಾಮೀನು ಮಂಜೂರು ಮಾಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಆರೋಪಿಗೆ ಜಾಮೀನು ಮಂಜೂರಾದ ವಿಚಾರಕ್ಕೆ ಮಹಿಳಾ ಸಂಘಟನೆಗಳು ಮತ್ತು ಸಾಮಾಜಿಕ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತೆ ಶಹೇನಾಜ್ ಅಕ್ತರ್ ನೇತೃತ್ವದಲ್ಲಿ ಮಹಿಳಾ ಸಂಘಟನೆ ಸದಸ್ಯರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ, ಜಾಮೀನು ರದ್ದುಪಡಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು’ ಆಗ್ರಹಿಸಿದ್ದಾರೆ.

‘ಶಾಲೆ ಎಂಬುದು ಮಕ್ಕಳಿಗೆ ಸುರಕ್ಷಿತ ತಾಣವಾಗಿರಬೇಕು. ಇಂತಹ ಘಟನೆಗಳು ಹೆಣ್ಣು ಮಕ್ಕಳ ಸುರಕ್ಷತೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆ ಮೂಡಿಸುತ್ತವೆ. ಆರೋಪಿಯ ವಿರುದ್ಧ ಗಂಭೀರ ಸೆಕ್ಷನ್‌ಗಳನ್ನು ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು,” ಎಂದು ಮಾನವ ಹಕ್ಕುಗಳ ಹೋರಾಟಗಾರ ರಿಯಾಜ್ ಖತೀಬ್ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಹೊಲಕ್ಕೆ ತೆರಳಿದ್ದ ಯುವಕ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆ

ಈ ಪ್ರಕರಣ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣೆ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದೆ. ಪೋಷಕರು ಮಕ್ಕಳ ನಡೆ-ನುಡಿಗಳಲ್ಲಿ ಬದಲಾವಣೆ ಕಂಡುಬಂದಲ್ಲಿ ತಕ್ಷಣ ಗಮನ ಹರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದು, ಸಾಕ್ಷ್ಯಾಧಾರಗಳ ಸಂಗ್ರಹಣೆ ಹಾಗೂ ಬಾಲಕಿಯರ ಹೇಳಿಕೆಗಳ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ...

ಕಲಬುರಗಿ | ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಮೋಟಾರ್‌ಸೈಕಲ್ ಹಾಗೂ ಕೇಬಲ್ ವೈರ್ ಕಳ್ಳತನಕ್ಕೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಕರಣಗಳನ್ನು...

ಕಲಬುರಗಿ | ರಸ್ತೆ ಬದಿಯಲ್ಲಿ ಲಾರಿ ನಿಲುಗಡೆಗೆ ಕಡಿವಾಣ: ಪೊಲೀಸರ ಕಟ್ಟುನಿಟ್ಟಿನ ಸೂಚನೆ

ರಸ್ತೆ ಅಪಘಾತಗಳನ್ನು ನಿಯಂತ್ರಿಸಿ ಸಾರ್ವಜನಿಕರ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಸೇಡಂ ಪೊಲೀಸ್...

ಕಲಬುರಗಿ | ಸಂಕನೂರ ಗುಡ್ಡದಲ್ಲಿ ಒಂದೇ ಮರದ ಬಳಿ ಇಬ್ಬರ ಶವ: ಪ್ರೇಮದ ಶಂಕೆ, ಸಾವಿನ ಸುತ್ತ ನಿಗೂಢತೆ

ಚಿತ್ತಾಪುರ ತಾಲೂಕಿನ ಸಂಕನೂರ ಗುಡ್ಡದ ನಿರ್ಜನ ಪ್ರದೇಶದಲ್ಲಿ ಒಂದೇ ಮರದ ಬಳಿ...