ಕಲಬುರಗಿ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

Date:

ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮದಲ್ಲಿ ನಡೆದಿದೆ.

ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ಕೈಕೊಟ್ಟ ಕಾರಣಕ್ಕೆ ಕನಕಪುರ ಗ್ರಾಮದ ಮಲ್ಲೇಶಪ್ಪ ಕಲ್ಲಪ್ಪ (65) ವಿಷ ಕುಡಿದು ಸಾವಿಗೀಡಾಗಿದ್ದಾರೆ.

“ವಿಷ ಕುಡಿದು ಅಸ್ವಸ್ಥಗೊಂಡ ಅವರನ್ನು ಕೂಡಲೇ ಕಲಬುರಗಿಯ ಜಿಮ್ಸ್‌ಗೆ ದಾಖಲಿಸಲಾಗಿತ್ತು‌‌. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ನಸುಕಿನ ಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ” ಎಂದು ಗ್ರಾಮದ ಮುಖಂಡ ಹಣಮಂತರಾವ್ ದೇಶಪಾಂಡೆ ಎಂಬುವವರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಿಯಾಯಿತಿ ಪಾವತಿಗೆ ಗಡುವು ಮುಕ್ತಾಯ; ₹9 ಕೋಟಿಗೂ ಅಧಿಕ ದಂಡ ಸಂಗ್ರಹ

ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಚಿಂಚೋಳಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಧಾವಿಸಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಕೆಜಿಬಿ ಹಾಗೂ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ಹಲವೆಡೆ ಅವರಿಗೆ ₹ 8 ಲಕ್ಷ ಸಾಲವಿದೆ ಎನ್ನಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತುರ್ತಾಗಿ ಬರಪರಿಹಾರ ಒದಿಗಿಸುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘ ಆಗ್ರಹ

ತುರ್ತಾಗಿ ಬರಪರಿಹಾರವನ್ನು ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ-ಕಾರ್ಮಿಕರ...

ಕಲಬುರಗಿ | ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಡಿಎಸ್‌ಎಸ್‌ ಆಗ್ರಹ

ಹುಬ್ಬಳ್ಳಿಯ ಅಂಜಲಿ ಅಂಬಿಗರ, ನೇಹಾ ಹಿರೇಮಠ ಹಾಗೂ ಯಾದಗಿರಿಯ ರಾಕೇಶ್ ಹತ್ಯೆ...

ಕಲಬುರಗಿ | ಲಾರಿ-ಬೈಕ್‌ ನಡುವೆ ಢಿಕ್ಕಿ: ತಂದೆ-ಮಗ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟ...

ಕಲಬುರಗಿ | ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಶಿಕ್ಷಕ, ತಲೆ ಮರೆಸಿಕೊಂಡ ಬಿಇಒ

ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ಮಂಜೂರು ಮಾಡಲು 50 ಸಾವಿರ ರೂ....