ಕಲಬುರಗಿ | ಖಾಸಗಿ ಶಾಲೆಯ ಅವ್ಯವಸ್ಥೆ ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆ ಮನವಿ

Date:

ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಿ.ಬಿ.ಎಸ್‌.ಸಿ ವಿದ್ಯಾ ಮಂದಿರ ಖಾಸಗಿ ಶಾಲೆ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿರುವ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ಸೇಡಂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಜಿಲ್ಲಾ ಉಪಾಧ್ಯಕ್ಷ ವರದಾ ಸ್ವಾಮಿ ಬಿ. ಹಿರೇಮಠ ಮಾತನಾಡಿದ, ‘ಶಾಲೆಯ ಆಡಳಿತ ಮಂಡಳಿಯ ಸದಸ್ಯರ ಮಕ್ಕಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದ್ದು, ಸಾಮಾನ್ಯ ಜನರ ಮಕ್ಕಳಿಗೆ ಅನ್ಯಾಯವಾಗುತ್ತಿದೆ’ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

‘ಶಾಲೆಯ ಆವರಣದಲ್ಲಿ ಕೆಲ ವಿದ್ಯಾರ್ಥಿಗಳು ನಿಯಮ ಉಲ್ಲಂಘನೆ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಆದರೆ ಶಿಸ್ತು ಪಾಲಿಸುವಂತೆ ಸೂಚಿಸುವ ಶಿಕ್ಷಕರ ಮೇಲೆಯೇ ಆಡಳಿತ ಮಂಡಳಿ ಒತ್ತಡ ತರುತ್ತಿದೆ’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

1901691

‘ಖಾಸಗಿ ಶಿಕ್ಷಣ ಸಂಸ್ಥೆಗಳು ಎಲ್ಲ ವಿದ್ಯಾರ್ಥಿಗಳನ್ನೂ ಸಮಾನವಾಗಿ ಕಾಣಬೇಕು. ದೊಡ್ಡವರು-ಸಣ್ಣವರು ಎಂಬ ಭೇದಭಾವಕ್ಕೆ ಅವಕಾಶ ಕೊಡಬಾರದು. ಆಡಳಿತ ಮಂಡಳಿಯ ಮಕ್ಕಳಿಗೆ ಮಾತ್ರ ಪ್ರಾಧಾನ್ಯತೆ ನೀಡುವುದು ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾಗಿದೆ’ ಎಂದು ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಸೇಡಂ ಕ್ಷೇತ್ರ ಶಿಕ್ಷಣ ಇಲಾಖೆ ಕಾರ್ಯಾಲಯದ ಆವರಣದಲ್ಲಿ ಸಾರ್ವಜನಿಕರು ಹಾಗೂ ಶಿಕ್ಷಕರು ಸಂಚರಿಸಲು ಅಸಾಧ್ಯವಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದನ್ನೂ ಸಂಘಟನೆ ಖಂಡಿಸಿತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕ್ಷೇತ್ರ ಶಿಕ್ಷಣ ಇಲಾಖೆ ಕಾರ್ಯಾಲಯವನ್ನು ಶೀಘ್ರದಲ್ಲೇ ಪುನರಾರಂಭಗೊಳಿಸಬೇಕು ಎಂದು ಒತ್ತಾಯಿಸಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ | ಓದುವ ಹವ್ಯಾಸ ಬೆಳೆಸಿಕೊಳ್ಳಿ : ಡಾ. ನಿಲಾಂಬಿಕಾ ಮಾಲಿ ಪಾಟೀಲ್

ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯದಿದ್ದರೆ, ಜನಸಾಮಾನ್ಯರ ಮಕ್ಕಳ ಪಾಲಕರೊಂದಿಗೆ ಸೇರಿ ಖಾಸಗಿ ಶಿಕ್ಷಣ ಸಂಸ್ಥೆಯ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದಾಗಿ ಜಯ ಕರ್ನಾಟಕ ಜನಪರ ವೇದಿಕೆ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...