ಕಲಬುರಗಿ | ಸೇಡಂ ತಾಲೂಕನ್ನ ಬರಪೀಡಿತವೆಂದು ಘೋಷಿಸುವಂತೆ ಜೆಡಿಎಸ್ ಅಗ್ರಹ

Date:

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಬರದ ಛಾಯೆ ಆವರಿಸಿದ್ದು, ಆಗಸ್ಟ್ ತಿಂಗಳು ಮುಗಿದರೂ ವಾಡಿಕೆಯ ಮಳೆ ಬಿದ್ದಿಲ್ಲ. ಆದ್ದರಿಂದ ಕ್ಷೇತ್ರದ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಆಗ್ರಹಿಸಿದರು.

“ರೈತರು ಸಾಲ ಮಾಡಿ ಬೀಜ, ರಸಗೊಬ್ಬರ ಖರೀದಿಸಿ ತೊಗರಿ, ಹತ್ತಿ ಸೇರಿದಂತೆ ಹಲವು ಬೀಜಗಳನ್ನು ಬಿತ್ತನೆ ಮಾಡಿದ್ದಾರೆ. ಆದರೆ ಮಳೆ ಬಾರದಿರುವುದರಿಂದ ಬೆಳೆಗಳು ಸಂಪೂರ್ಣವಾಗಿ ಬಾಡಿ ಹೋಗುತ್ತಿವೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ” ಎಂದು ಹೇಳಿದರು.

“ಜೂನ್ ತಿಂಗಳಿನಲ್ಲಿ ಮುಂಗಾರು ಮಳೆ ಪ್ರವೇಶಿಸಬೇಕಾಗಿತ್ತು. ಆದರೆ ಜೂಲೈ ತಿಂಗಳಿನಲ್ಲಿ ಅಲ್ಪ ಸ್ವಲ್ಪ ಮಳೆಯಾದ ಬಳಿಕ ರೈತರು ಸಂಕಷ್ಟಗಳ ನಡುವೆ ಬಿತ್ತನೆ ಕಾರ್ಯ ಮಾಡಿದ್ದಾರೆ. ಬಳಿಕ ಮಳೆ ಬಾರದೇ ಇರುವುದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಿದೆ ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ಒದಗಿಸಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸೇಡಂ ಮತಕ್ಷೇತ್ರದಲ್ಲಿ ಈ ಬಾರಿ ತೊಗರಿ ಬೆಳೆ ಹೆಚ್ಚಾಗಿ ಬಿತ್ತನೆಯಾಗಿದೆ. ಎಣ್ಣೆಕಾಳು, ವಾಣಿಜ್ಯ ಬೆಳೆಗಳು ನಿಗದಿತ ಪ್ರಮಾಣದಂತೆ ಬಿತ್ತನೆಯಾಗಿವೆ ಆದರೆ ಸಕಾಲಕ್ಕೆ ಮಳೆ ಬಾರದೇ ಇರುವುದರಿಂದ ತೇವಾಂಶ ಕೊರತೆಯಿಂದ ಬೆಳೆಗಳು ಒಣಗುತ್ತಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತ ಸಂಘ ಆಗ್ರಹ

“ಮಳೆ ಬಾರದೇ ಇರುವುದರಿಂದ ಜನ, ಜಾನವಾರುಗಳು ಕುಡಿಯುವ ನೀರಿನ ತೊಂದರೆ ಅನುಭವಿಸುವಂತಾಗಿದೆ. ತೀವ್ರ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಕಾರ್ಯ ಮಾಡಬೇಕು. ಅಲ್ಲದೇ ಜಾನುವಾರುಗಳಿಗಾಗಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಮೇವು ಕೇಂದ್ರ ಸ್ಥಾಪಿಸಬೇಕು” ಎಂದು ಆಗ್ರಹಿಸಿ ಪ್ರಕಟಣೆಗೆ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲಾ ಮೀಡಿಯಾ ವಾಲೆಂಟಿಯರ್‌ ಅಮೀರ್ ಅವರ ಮಾಹಿತಿ ಆಧರಿಸಿದ ವರದಿ 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಿಸಿಲ ಧಗೆಗೆ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆ

ರಾಜ್ಯದ ಜಿಲ್ಲೆಗಳಲ್ಲಿ ಭಾಗಗಳಲ್ಲಿ ಬಿಸಿಲು ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ...

ಕಲಬುರಗಿ | ಬಾಬು ಜಗಜೀವನ್‌ ರಾಂ ಅವರ “ಜೀವನ ಚರಿತ್ರೆ” ಕವನ ಸಂಕಲನ ಬಿಡುಗಡೆ

ಬಾಬು ಜಗಜೀವನ್‌ ರಾಂ ಅವರು ರಾಷ್ಟ್ರೀಯ ನಾಯಕರಾಗಿದ್ದು, ಅವರಿಗೆ ಸಿಕ್ಕ ಎಲ್ಲ...

ಕಲಬುರಗಿ | ಕಾರ್ಮಿಕ ಮಹಿಳೆಯರ ಕೊಲೆ ತನಿಖೆ ಸಿಐಡಿಗೆ ವಹಿಸಿ; ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ

ಕಲಬುರಗಿ ಜಿಲ್ಲೆಯಲ್ಲಿ ನಡೆದ ಕಟ್ಟಡ ಕಾರ್ಮಿಕ ಮಹಿಳೆಯರ ಜೋಡಿ ಕೋಲೆ ಪ್ರಕರಣದ...

ಕಲಬುರಗಿ | ದಲಿತರ ಮೇಲಿನ ಹಲ್ಲೆ; ಜಿಲ್ಲಾಡಳಿತ ನಿರ್ಲಕ್ಷ್ಯ – ಗ್ರಾಮಸ್ಥರ ಪ್ರತಿಭಟನೆ

ದಲಿತರ ಮೇಲಿನ ಹಲ್ಲೆಯನ್ನು ಜಿಲ್ಲಾಡಳಿತ ಹಗುರವಾಗಿ ಪರಿಗಣಿಸಿದೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು...