ಕಲಬುರಗಿ | ಕಡಗಂಚಿ ಬಿಸಿಎಂ ಹಾಸ್ಟೆಲ್ ವೈರಲ್ ವಿಡಿಯೋಗೆ ಹೊಸ ತಿರುವು; ಹಳೆಯ ಘಟನೆ ಎಂದ ಇಲಾಖೆ

Date:

ಆಳಂದ ತಾಲೂಕಿನ ಕಡಗಂಚಿಯ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಹೊಸ ಚರ್ಚೆಗೆ ಕಾರಣವಾಗಿದ್ದು, ಘಟನೆಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ಪಷ್ಟನೆ ನೀಡಿದೆ.

- Advertisement -

ಕೆಲ ದಿನಗಳಿಂದ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ವಿದ್ಯಾರ್ಥಿನಿಯರು ಹಾಸ್ಟೆಲ್ ಕೊಠಡಿಯೊಂದರಲ್ಲಿ ಪಾರ್ಟಿ ನಡೆಸುತ್ತಿರುವ ದೃಶ್ಯಗಳು ಕಂಡುಬಂದಿದ್ದು, ಮದ್ಯ ಸೇವನೆ ಹಾಗೂ ಹೊರಗಿನ ವ್ಯಕ್ತಿಗಳ ಪ್ರವೇಶದ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆದಿದ್ದು, ಪ್ರಕರಣದ ಸತ್ಯಾಸತ್ಯತೆ ಕುರಿತು ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಇದಕ್ಕೆ ಪ್ರತಿಕ್ರಿಯಿಸಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವೈರಲ್ ಆಗಿರುವ ದೃಶ್ಯಗಳು ಇತ್ತೀಚಿನದ್ದಲ್ಲ ಎಂದು ಸ್ಪಷ್ಟಪಡಿಸಿದೆ. ಇಲಾಖೆಯ ಮಾಹಿತಿಯಂತೆ, ವಿಡಿಯೋದಲ್ಲಿರುವ ಘಟನೆ ಸುಮಾರು 3 ರಿಂದ 4 ವರ್ಷಗಳ ಹಿಂದಿನದ್ದು ಎನ್ನಲಾಗಿದೆ.

ಪ್ರಸ್ತುತ ಕಡಗಂಚಿಯಲ್ಲಿ ಬಾಲಕಿಯರ ವಸತಿ ನಿಲಯ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲಿದ್ದ ಹಾಸ್ಟೆಲ್ ಅನ್ನು ಈಗಾಗಲೇ ಆಳಂದ ಪಟ್ಟಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ವೈರಲ್ ವಿಡಿಯೋದಲ್ಲಿರುವ ಕೆಲ ವಿದ್ಯಾರ್ಥಿನಿಯರು ಈಗ ಶಿಕ್ಷಣ ಪೂರ್ಣಗೊಳಿಸಿ ತಮ್ಮ ವೈಯಕ್ತಿಕ ಜೀವನದಲ್ಲಿ ತೊಡಗಿಕೊಂಡಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಆದಾಗ್ಯೂ, ವೈರಲ್ ಆಗಿರುವ ವಿಡಿಯೋ ಹಾಗೂ ಆಡಿಯೋ ಕ್ಲಿಪ್‌ಗಳ ಹಿನ್ನೆಲೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಶಿಕ್ಷಕರ ನೇಮಕಾತಿಯಲ್ಲಿ ಕೆಪಿಎಸ್‌ಗೆ ಆದ್ಯತೆ ನೀಡಿರುವುದು ಖಂಡನೀಯ: ಎಐಡಿಎಸ್‌ಒ

ಹಳೆಯ ಘಟನೆಯನ್ನು ಇತ್ತೀಚಿನ ಬೆಳವಣಿಗೆ ಎಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರೈತರ ಸಾಲಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ

ಅನಾವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಶೇ.100ರಷ್ಟು ಬೆಳೆ ವಿಮೆ ಪರಿಹಾರ...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ...