ಕಲಬುರಗಿ | ಜೀವಣಗಿ ಗ್ರಾಮ ತಲುಪಿದ ʼಕಲ್ಯಾಣ ನಡಿಗೆ, ಹರಳಯ್ಯ ಜ್ಯೋತಿಯಾತ್ರೆʼ : ಅದ್ದೂರಿ ಸ್ವಾಗತ

Date:

ಕಮಲಾಪುರ : ಬಸವಾದಿ ಶರಣರು ಮಾಡಿರುವ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನೆಗೆ ತಲುಪಿಸುವುದು ಹಾಗೂ ಶರಣ ಹರಳಯ್ಯ–ಕಲ್ಯಾಣಮ್ಮ ದಂಪತಿ ಚಮ್ಮಾವುಗೆಗಳಿರುವ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮ, ಬಸವಕಲ್ಯಾಣದ ತ್ರಿಪುರಾಂತ ಕೆರೆ ಸಮಗ್ರ ಅಭಿವೃದ್ಧಿ ಆಗಬೇಕೆಂಬ ಸದಾಶಯದೊಂದಿಗೆ ಬೀದರ್‌ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ ಹಮ್ಮಿಕೊಂಡಿರುವ ‘ಕಲ್ಯಾಣ ನಡಿಗೆ ಮತ್ತು ಹರಳಯ್ಯ ಜ್ಯೋತಿಯಾತ್ರೆ’ ಸೋಮವಾರ ಕಮಲಾಪುರ ತಾಲೂಕಿನ ಜೀವಣಗಿ ಗ್ರಾಮಕ್ಕೆ ತಲುಪಿತು.

- Advertisement -

ಫೆ.15ರಿಂದ ಮಾರ್ಚ್ 1ರವರೆಗೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸುಕ್ಷೇತ್ರ ಬಿಜನಳ್ಳಿಯ ಶರಣಭೂಮಿ ಬಸವಕಲ್ಯಾಣದವರೆಗೆ ಪಾದಯಾತ್ರೆ ನಡೆಯುತ್ತಿದ್ದು, 9ನೇ ದಿನ ಜೀವಣಗಿ ಗ್ರಾಮ ತಲುಪಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
WhatsApp Image 2026 02 24 at 2.07.05 PM
ಜೀವಣಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳೊಂದಿಗೆ ಬಸವಕುಮಾರ ಪಾಟೀಲ್‌ ಅವರು ಸಂವಾದ ನಡೆಸಿದರು.

ಸೋಮವಾರ ಬೆಳಿಗ್ಗೆ ಕಾಳಗಿ ತಾಲೂಕಿನ ರಟಕಲ್ ಸಾಮೂಹಿಕ ಇಷ್ಟಲಿಂಗ ಪೂಜೆ ಜರುಗಿತು. ಬಳಿಕ ಕಲ್ಯಾಣ ನಡಿಗೆ ಮತ್ತು ಹರಳಯ್ಯಾ ಜ್ಯೋತಿ ಯಾತ್ರೆಯು ಕಾಲ್ನಡಿಗೆ ಮುಖಾಂತರ ಮಧ್ಯಾಹ್ನ ಜೀವಣಗಿ ಗ್ರಾಮಕ್ಕೆ ತಲುಪಿತು. ಯಾತ್ರೆಗೆ ಗ್ರಾಮದ ಮಹಿಳೆಯರು, ಮುಖಂಡರು ಆರತಿ ಬೆಳಗಿ, ಪೂಜೆ ಸಲ್ಲಿಸಿ ಸ್ವಾಗತಿಸಿದರು. ತದನಂತರ ಗ್ರಾಮದಲ್ಲಿ ಮೆರವಣಿಗೆ ನಡೆಯಿತು.

ಮಧ್ಯಾಹ್ನ 2 ಗಂಟೆಗೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳೊಂದಿಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಹಾಗೂ ನೈತಿಕ ಮೌಲ್ಯಗಳ ಕುರಿತು ಸಂವಾದ ನಡೆಯಿತು. ವಿದ್ಯಾರ್ಥಿಗಳಿಗೆ ಬಸವಣ್ಣನವರ ‘ವಚನ ಸುಧೆ’ ಎಂಬ ಕಿರುಹೊತ್ತಿಗೆ ಉಚಿತವಾಗಿ ವಿತರಿಸಲಾಯಿತು.

WhatsApp Image 2026 02 24 at 2.31.57 PM
ನಾಟಕ ತಂಡ

ಕಲ್ಯಾಣ ನಡಿಗೆಯ ನೇತೃತ್ವದ ವಹಿಸಿರುವ ಬಸವಕುಮಾರ್ ಪಾಟೀಲ್ ಅವರು ಮಾತನಾಡಿ, ‘ವಿದ್ಯಾರ್ಥಿಗಳೇ ನಾಳಿನ ಪ್ರಬುದ್ಧ ನಾಗರಿಕರು. ವಿದ್ಯಾರ್ಥಿಗಳು ದೇಶಭಕ್ತಿ, ಸಂಸ್ಕಾರ, ಸಂಸ್ಕೃತಿ ಹಾಗೂ ಉನ್ನತ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪರೀಕ್ಷೆಯನ್ನು ಯಾವುದೇ ಭಯವಿಲ್ಲದೆ ಆತ್ಮವಿಶ್ವಾದಿಂದ ಎದುರಿಸಬೇಕುʼ ಎಂದು ಸಲಹೆ ನೀಡಿದರು.

ಸಂಜೆ 6ಕ್ಕೆ ‘ದುರ್ಗುಣ–ದುಶ್ಚಟಗಳ ಭಿಕ್ಷೆ, ಸದ್ಗುಣ–ಸನ್ನಡತೆಯ ದೀಕ್ಷೆ’ ಎಂಬ ಸಂಕಲ್ಪದೊಂದಿಗೆ ಸಾರ್ವಜನಿಕ ಉಪನ್ಯಾಸ ನಡೆಯಿತು. ರಾತ್ರಿ 8ಕ್ಕೆ ಬಳ್ಳಾರಿಯ ಧಾತ್ರಿ ರಂಗಸಂಸ್ಥೆಯ ಕಲಾ ತಂಡದಿಂದ ಪ್ರದರ್ಶನಗೊಂಡ ‘ಕಲ್ಯಾಣ ಕ್ರಾಂತಿ’ ನಾಟಕ ಮೈನವಿರೇಳಿಸಿತು.

WhatsApp Image 2026 02 24 at 12.09.11 PM
ಕಮಲಾಪುರ ಪಟ್ಟಣಕ್ಕೆ ಮಂಗಳವಾರ ʼಕಲ್ಯಾಣ ನಡಿಗೆʼ ಯಾತ್ರೆ ತಲುಪಿತು.

ಫೆ.24ರಂದು 10ನೇ ದಿನದ ಕಲ್ಯಾಣ ನಡಿಗೆಯು ಮಂಗಳವಾರ ಮಧ್ಯಾಹ್ನ ಕಮಲಾಪುರ ಪಟ್ಟಣಕ್ಕೆ ತಲುಪಿದೆ. ಫೆ.25ಕ್ಕೆ ಬಸವಕಲ್ಯಾಣ ತಾಲೂಕಿನ ಕಲಕೋರಾ, ಫೆ.26ಕ್ಕೆ ಮುಡಬಿ, ಫೆ.27ರಂದು ಯರಂಡಗಿ, ಫೆ.28 ಬಸವಕಲ್ಯಾಂಣ ಹಾಗೂ ಮಾ.1ರಂದು ಬಸವಕಲ್ಯಾಣದಲ್ಲಿ ಸಮಾರೋಪ ನಡೆಯಲಿದೆ.

ಇದನ್ನೂ ಓದಿ : ಔರಾದ್‌ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಮನೆ-ಮನೆಗೆ ಭೇಟಿ ನೀಡಿದ ಗ್ರಾ.ಪಂ.ಅಧಿಕಾರಿಗಳು

ಪಾದಯಾತ್ರೆಯಲ್ಲಿ ಪ್ರಮುಖರಾದ ಪಂಡರಿ ಬಾಳೂರೆ, ನಾಗಯ್ಯ ಸ್ವಾಮಿ ಮುಧೋಳ, ಶಂಕರಲಿಂಗ ಸ್ವಾಮೀಜಿ, ಮಂಜುನಾಥ ರೆಡ್ಡಿ, ವೀರಣ್ಣ ಕೊರಲಳ್ಳಿ, ಮನೋಜಕುಮಾರ್ ಬುಕ್ಕಾ, ರೇವಣಸಿದ್ದಪ್ಪ ಭಂಕೂರ, ರಾಮಶೆಟ್ಟಿ ಹಂಗನಳ್ಳಿ, ಕಲ್ಯಾಣರಾವ ಬೆನಕನಳ್ಳಿ, ಸತ್ಯಕ್ಕ ಬೆಂಗಳೂರು, ಜ್ಯೋತಿ ಸದಾನಂದ, ಮಲ್ಲಮ್ಮ ಆರ್.ಪಾಟೀಲ್, ಓಂಪ್ರಕಾಶ್ ರೊಟ್ಟೆ, ಸುನೀತಾ ಚಂದ್ರಶೇಖರ್ ಭದ್ರಾವತಿ, ಸಂತೋಷ ಕೆ.ಉಜಳಂಬೆ, ಕೆ.ಬಾಳಪ್ಪ ಶಿವಮೊಗ್ಗ, ಮಲ್ಲಿನಾಥ ಪಾಟೀಲ್, ಸೋಮಶೇಖರ ಮಾಲಿಪಾಟೀಲ, ಶರಣು ಜೀವಣಗಿ, ರಾಜಕುಮಾರ ಕೋಟಿ, ವೀರೇಶ ಮಾಲಿಪಾಟೀಲ, ಸುಭಾಷ ಬಿರಾದರ್ ಸೇರಿದಂತೆ ಜೀವಣಗಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...