ಕಲಬುರಗಿ | ಪ್ರತಿ ಟನ್‌ ಕಬ್ಬಿಗೆ 5,000 ರೂ. ಬೆಂಬಲ ಬೆಲೆ ನಿಗದಿಗೆ ಕೆಪಿಆರ್‌ಎಸ್ ಆಗ್ರಹ

Date:

ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಪ್ರತ್ಯೇಕವಾಗಿ ಪರಿಗಣಿಸಿ, ರೈತರಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವವರೆಗೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಾರದು, ಪ್ರತಿ ಟನ್‌ ಕಬ್ಬಿಗೆ 5,000 ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ(KPRS)ದ ಕಲಬುರಗಿ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, “ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹5,000 ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸಿ, ಅದಕ್ಕೆ ಕಾನೂನುಬದ್ಧ ಖಾತರಿ ನೀಡಬೇಕು. ಜತೆಗೆ ರಾಜ್ಯ ಸರ್ಕಾರವೂ SAP (State Advised Price) ಜಾರಿಗೊಳಿಸಿ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ₹900 ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಕಬ್ಬಿನ ತೂಕದಲ್ಲಿ ರೈತರಿಗೆ ಅನ್ಯಾಯವಾಗದಂತೆ ಪ್ರತಿ ಸಕ್ಕರೆ ಕಾರ್ಖಾನೆಯ ಮುಖ್ಯ ಗೇಟ್‌ ಸಮೀಪವೇ ವೇಬ್ರಿಡ್ಜ್ ಅಳವಡಿಸಬೇಕು. ರೈತರು ತರುವ ಎಲ್ಲ ಕಬ್ಬಿನ ವಾಹನಗಳನ್ನು ರೈತರ ಸಮ್ಮುಖದಲ್ಲಿಯೇ ತೂಕ ಮಾಡಿ ನಂತರ ಕಾರ್ಖಾನೆಯೊಳಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

“ಕಬ್ಬಿನಿಂದ ದೊರೆಯುವ ಸಕ್ಕರೆ ಇಳುವರಿಯ ಪ್ರಮಾಣವನ್ನು ರೈತರ ಸಮ್ಮುಖದಲ್ಲಿಯೇ ಪರಿಶೀಲಿಸಿ ನಿರ್ಧರಿಸಬೇಕು. ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡುವುದಕ್ಕೂ ಮೊದಲು ರೈತರು ಮತ್ತು ಕಾರ್ಖಾನೆ ಆಡಳಿತದ ನಡುವೆ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಣಪತಿ ವಿಸರ್ಜನೆಗೆ ಮೀಸಲಿಟ್ಟ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ: ಬೇರೆ ಕೆರೆ ಗುರುತಿಗೆ ಸ್ಥಳೀಯರ ಆಗ್ರಹ

“ಕಬ್ಬಿನ ಬೆಲೆ, ತೂಕ, ಇಳುವರಿ ಹಾಗೂ ಪಾವತಿ ವಿಚಾರದಲ್ಲಿ ಪ್ರತಿ ಹಂಗಾಮಿನಲ್ಲೂ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತವು ಸಕ್ಕರೆ ಕಾರ್ಖಾನೆಗಳು ಆರಂಭವಾಗುವ ಮುನ್ನವೇ ರೈತರು ಮತ್ತು ಕಾರ್ಖಾನೆ ಪ್ರತಿನಿಧಿಗಳ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಅಕ್ಟೋಬರ್ 30ರೊಳಗೆ ರೈತರ ಸಭೆ ನಡೆಸಬೇಕು ಎಂದು KPRS ಪರವಾಗಿ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

“ಕಬ್ಬು ಬೆಳೆಗಾರರಿಗೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾದ ದರ ದೊರೆಯಬೇಕು. ಕಟಾವು ಮತ್ತು ಸಾಗಾಣಿಕೆ ವೆಚ್ಚದ ಹೊರೆ ರೈತರ ಮೇಲೆ ಬೀಳದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಶರಣಬಸಪ್ಪ ಮಮಶೆಟ್ಟಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...