ರಾಜ್ಯದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಒತ್ತಾಯಿಸಿ ಕಲಬುರಗಿ ರೈತ ಸಂಘಟನೆಗಳು ಸೆಪ್ಟೆಂಬರ್ 3ರಂದು ಅತನೂರು ಕ್ರಾಸ್ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಸಜ್ಜಾಗಿದ್ದು, ಕಬ್ಬಿನ ಬೆಲೆ, ನೀರಿನ ಸಮಸ್ಯೆ, ಬೆಳೆ ನಷ್ಟ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸದೆ ಅನ್ಯಾಯ ದೋರಣೆ ತಾಳಿರುವ ಕೇಂದ್ರ-ರಾಜ್ಯ ಸರ್ಕಾರಗಳ ನಡೆ ಖಂಡನೀಯ ಎಂದು ಕೆಪಿಆರ್ಎಸ್ ಮುಖಂಡ ಶರಣಬಸಪ್ಪ ಮಮಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
“ಎಲ್ಲಾ ರೈತರ ಕಬ್ಬನ್ನು ಕಾರ್ಖಾನೆಗಳು ಖರೀದಿಸಬೇಕು. ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡಬೇಕು. ಸಕ್ಕರೆ ಬೆಲೆ ಏರಿಕೆ, ಬೆಲ್ಲದ ಬೆಲೆ ಇಳಿಕೆ ಹಿನ್ನೆಲೆಯಲ್ಲಿ ರೈತರಿಗೆ ಆಗುತ್ತಿರುವ ನಷ್ಟವನ್ನು ತಪ್ಪಿಸಬೇಕು. ಕಬ್ಬು ಕಟಾವು ವೆಚ್ಚ ಮತ್ತು ಸಾಗಣೆ ವೆಚ್ಚವನ್ನು ಕಾರ್ಖಾನೆಗಳೇ ಭರಿಸಬೇಕು” ಎಂದು ಆಗ್ರಹಿಸಲಿದ್ದಾರೆ.
“ಪ್ರತಿ ಟನ್ ಕಬ್ಬಿಗೆ ₹5,000 ಬೆಂಬಲ ಬೆಲೆ(MSP) ನೀಡಬೇಕು. ಪ್ರತಿ ಟನ್ ಕಬ್ಬಿಗೆ ₹900 ರಾಜ್ಯ ಸರ್ಕಾರದ SAP(State Advisory Price) ನಿಗದಿ ಮಾಡಬೇಕು. ತೊಗರಿ ನಾಡು ಕಲಬುರಗಿ ಜಿಲ್ಲೆಗೆ ₹1,000 ವಿಶೇಷ ಪ್ಯಾಕೇಜ್ ಘೋಷಿಸಬೇಕು. ಈ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಬರದಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಸೆ.5ರಂದು ಪ್ರಜಾಸೇವೆ ಇಲಾಖೆ ಪ್ರಾರಂಭ, ಸಚಿವರಿಂದ ತಿಂಗಳಿಗೆ ಎರಡು ದಿನಗಳ ಸಭೆ: ಸಿಎಂ ಡಿ ಕೆ ಶಿವಕುಮಾರ್
“ಬರ, ನೀರಿನ ಕೊರತೆ ಮತ್ತು ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ರೈತರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು. ರೈತರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು” ಎಂದು ರೈತ ಸಂಘಟನೆಗಳ ಪರವಾಗಿ ಎಚ್ಚರಿಕೆ ನೀಡಿದರು.





