ಕಲಬುರಗಿ | ಭೂಸ್ವಾಧೀನ ರದ್ದುಪಡಿಸಿ: ರೈತರ ಭೂಮಿ ಹಿಂದಿರುಗಿಸುವಂತೆ ಆಗ್ರಹಿಸಿ ಮನವಿ

Date:

ಕಲಬುರಗಿ ತಾಲೂಕಿನ ಕಿರಣಗಿ, ಸೋಮನಾಥಹಳ್ಳಿ ಹಾಗೂ ಫಿರೋಜಾಬಾದ್ ಗ್ರಾಮಗಳ ಭೂ ಸಂತ್ರಸ್ತ ರೈತರು ತಮ್ಮ ಜಮೀನುಗಳನ್ನು ಮರಳಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

- Advertisement -

2013ರಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆ ಹೆಸರಿನಲ್ಲಿ ಸರ್ಕಾರವು ಸುಮಾರು 1,821 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಆದರೆ, ಇಂದಿನವರೆಗೆ ಗುಲಬರ್ಗಾ ಸಿಮೆಂಟ್ ಲಿಮಿಟೆಡ್–ಹೈಡೆಲ್‌ಬರ್ಗ್ ಗ್ರೂಪ್ ಯಾವುದೇ ಕೈಗಾರಿಕೆ ಸ್ಥಾಪನೆ ಮಾಡಿಲ್ಲ. ಇದರಿಂದ ರೈತರು ಭೂಹೀನರಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಪಡಿಸಿ ಜಮೀನುಗಳನ್ನು ಮರಳಿ ರೈತರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮನವಿ ಸಲ್ಲಿಸಿದ ಬಳಿಕ ರೈತ ಮುಖಂಡರು ಮಾತನಾಡಿ, ‘ನಮ್ಮ ಕುಟುಂಬಗಳು ಪೀಳಿಗೆಗಳಿಂದ ಕೃಷಿಯನ್ನೇ ಅವಲಂಬಿಸಿ ಬದುಕು ಸಾಗಿಸುತ್ತಿದ್ದವು. ಜಮೀನುಗಳಿಂದಲೇ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ವೃದ್ಧರ ಆರೈಕೆ ಹಾಗೂ ಪಶುಸಂಗೋಪನೆ ನಡೆಯುತ್ತಿತ್ತು. ಭೂಸ್ವಾಧೀನದಿಂದ ರೈತರು ಮಾತ್ರವಲ್ಲದೆ ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಕೂಲಿಕಾರರೂ ಜೀವನೋಪಾಯ ಕಳೆದುಕೊಂಡಿದ್ದಾರೆ’ ಎಂದು ವಿವರಿಸಲಾಗಿದೆ.

1767623

‘ಸ್ವಾಧೀನಪಡಿಸಿಕೊಂಡ ಜಮೀನುಗಳು 15 ಅಡಿ ಆಳದ ಕಪ್ಪು ಮಣ್ಣು ಹೊಂದಿರುವ ಅತ್ಯಂತ ಫಲವತ್ತಾದ ಕೃಷಿ ಭೂಮಿಗಳಾಗಿವೆ. ಕೈಗಾರಿಕಾ ಅಭಿವೃದ್ಧಿಗೆ ಅನುಕೂಲಕರವಲ್ಲದ ಜಮೀನುಗಳನ್ನು ಆಯ್ಕೆ ಮಾಡಬೇಕೆಂಬ ನಿಯಮಗಳಿದ್ದರೂ, ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅವನ್ನು ಕಡೆಗಣಿಸಿ ಅಕ್ರಮವಾಗಿ ಭೂಸ್ವಾಧೀನ ನಡೆಸಿವೆ’ ಎಂದು ರೈತರು ಆರೋಪಿಸಿದರು.

ಭೂ ಪರಿಹಾರ ನಿಗದಿಯಲ್ಲಿಯೂ ಅನ್ಯಾಯವಾಗಿದೆ ಎಂದು ಆರೋಪಿಸಿರುವ ರೈತರು, ‘ಮಾರುಕಟ್ಟೆ ದರ ಪರಿಗಣಿಸದೇ ಹಾಗೂ ರೈತರೊಂದಿಗೆ ಸಮರ್ಪಕ ವಿಚಾರಣೆ ನಡೆಸದೇ ಕಡಿಮೆ ಪರಿಹಾರ ನಿಗದಿ ಮಾಡಲಾಗಿದೆ. ಪಿತ್ರಾರ್ಜಿತ ಆಸ್ತಿ ಕಳೆದುಕೊಂಡು ಉದ್ಯೋಗವೂ ಇಲ್ಲ, ಭೂಮಿಯೂ ಇಲ್ಲದ ಸ್ಥಿತಿಗೆ ರೈತರು ತಳ್ಳಲ್ಪಟ್ಟಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಭೂಸ್ವಾಧೀನ ಪಾರದರ್ಶಕತೆ, ಸೂಕ್ತ ಪರಿಹಾರ, ಪುನರ್ವಸತಿ ಮತ್ತು ಪುನರ್‌ನಿರ್ಮಾಣ ಹಕ್ಕುಗಳ ಕಾಯ್ದೆ–2013ರ ಕಲಂ 24(2) ಅನ್ವಯ ಈ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಪಡಿಸಿ ರೈತರಿಗೆ ಭೂಮಿ ಮರಳಿ ನೀಡಬೇಕು ಎಂದು ಆಗ್ರಹಿಸಿದರು. ಜೊತೆಗೆ, 2017ರ ಏಪ್ರಿಲ್ 19ರಂದು ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ಜೆ. ವೆಂಕಟೇಶ ರೆಡ್ಡಿ ಮತ್ತು ಇತರರು ವಿರುದ್ಧ ಕರ್ನಾಟಕ ಸರ್ಕಾರ ಪ್ರಕರಣದ ತೀರ್ಪು ಈ ಪ್ರಕರಣಕ್ಕೂ ಅನ್ವಯಿಸುತ್ತದೆ’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

‘ಕೈಗಾರಿಕೆ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಸರ್ಕಾರ ರೈತರಿಗೆ ಮೋಸ ಮಾಡಿದೆ. ಜಮೀನು ಸ್ವಾಧೀನಪಡಿಸಿಕೊಂಡು 13 ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯ ಆರಂಭಿಸಿಲ್ಲ. ನಾವು ಇಂದಿಗೂ ನಮ್ಮ ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡು ಬದುಕು ಸಾಗಿಸುತ್ತಿದ್ದೇವೆ. ಆದ್ದರಿಂದ ಸರ್ಕಾರ ತಕ್ಷಣ ರೈತರ ಭೂಮಿಯನ್ನು ಹಿಂದಿರುಗಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಭೂಸ್ವಾಧೀನ ರದ್ದುಪಡಿಸಿ: ರೈತರ ಭೂಮಿ ಹಿಂದಿರುಗಿಸುವಂತೆ ಆಗ್ರಹಿಸಿ ಮನವಿ

ಈ ಸಂದರ್ಭದಲ್ಲಿ ಶರಣಬಸಪ್ಪ ಮಮಶೆಟ್ಟಿ, ಶಂಕರ ಗೊಬ್ಬೂರು, ಶಿವಪ್ಪ ಜಲ್ಲಿ, ಇರಣ್ಣ ಉಳಾಗಡ್ಡಿ, ಪ್ರಭು ಭೈರಾಮಡಿಗಿ, ಜೆಟ್ಟೆಪ್ಪ ಪೂಜಾರಿ, ಬಸವರಾಜ ಕೊಬಾಳ, ಭಗವಂತ್ರಾಯ ದಂಡಗುಂಡ, ಉಮೇಶ್ ಗೌಡ, ಹಣಮಂತ ಅರಶಿಣ, ಮಲ್ಲು ನರಿಬೊಳ, ನಾಗಪ್ಪ ಪೂಜಾರಿ, ಬಸವರಾಜ ಗೊಬ್ಬೂರು, ಪರಮೇಶ ನರಿಬೊಳ ಸೇರಿದಂತೆ ಹಲವರು ಭಾಗವಹಿಸಿದ್ದರು. KPRS ಜಿಲ್ಲಾ ಅಧ್ಯಕ್ಷರು ಹಾಗೂ ಭೂ ಸಂತ್ರಸ್ತರ ಹೋರಾಟ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...