ಕಲಬುರಗಿ | ಸಿರಿಗನ್ನಡ ವೇದಿಕೆ, ಸಾಕ್ಷಿ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ಸಮಾಗಮ ಕಾರ್ಯಕ್ರಮ

Date:

ನಗರದಲ್ಲಿ ಭಾನುವಾರ ಸಿರಿಗನ್ನಡ ವೇದಿಕೆ (ರಿ) ಜಿಲ್ಲಾ ಘಟಕ, ಕಲಬುರಗಿ ಹಾಗೂ ಸಾಕ್ಷಿ ಪ್ರತಿಷ್ಠಾನ, ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಸಾಹಿತ್ಯ ಸಮಾಗಮ ಉಪನ್ಯಾಸ ಮಾಲಿಕೆ–೧೨ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಲಾಯಿತು.

- Advertisement -

ಕಾರ್ಯಕ್ರಮವನ್ನು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯೆ ಹಾಗೂ ಸಾಹಿತಿ ಡಾ. ನಾಗಾಬಾಯಿ ಬುಳ್ಳಾ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, “ಸಿರಿಗನ್ನಡ ವೇದಿಕೆ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ಎಲೆಮರೆಯ ಕಾಯಿಯಂತಿರುವ ಪ್ರತಿಭಾವಂತರನ್ನು ಹುಡುಕಿ ಪರಿಚಯಿಸುವ ಕಾರ್ಯ ಶ್ಲಾಘನೀಯ” ಎಂದು ಹೇಳಿದರು. ಮೊಬೈಲ್ ಯುಗದಲ್ಲಿ ಓದು ಸಂಸ್ಕೃತಿ ಕುಗ್ಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಇಂತಹ ಕಾರ್ಯಕ್ರಮಗಳು ಓದುವ ಅಭ್ಯಾಸ ಬೆಳೆಸಲು ನೆರವಾಗುತ್ತವೆ ಎಂದರು. ಪುಸ್ತಕಗಳ ಪ್ರಕಟಣೆ ಹೆಚ್ಚಾದರೂ ಓದುಗರ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
1703014

ಮಾದನಹಿಪ್ಪರಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ರಾಜಕುಮಾರ ಮಾಳಗೆ “ಪ್ರಪಾತ” ಕಥಾಸಂಕಲನ ಮತ್ತು “ಆಚೆ–ಈಚೆ” ಕವನ ಸಂಕಲನಗಳ ಕುರಿತು ವಿಶ್ಲೇಷಣೆ ನೀಡಿದರು. ಎಪ್ಪತ್ತರ ದಶಕದಲ್ಲಿ ರಚಿತವಾದ ಈ ಕೃತಿಗಳು ಇಂದಿಗೂ ಪ್ರಸ್ತುತತೆಯನ್ನು ಕಾಪಾಡಿಕೊಂಡಿವೆ ಎಂದು ಅವರು ಅಭಿಪ್ರಾಯಪಟ್ಟರು. ಸಾಮಾಜಿಕ ಅಸಮಾನತೆ, ರಾಜಕೀಯ, ಭ್ರಷ್ಟಾಚಾರ, ಪ್ರೇಮ ಮತ್ತು ಆಧುನಿಕತೆ ಮೊದಲಾದ ವಿಷಯಗಳನ್ನು ಒಳಗೊಂಡಿರುವ ಈ ಕವನಗಳು ಬಂಡಾಯ ಚಿಂತನೆಗಳನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಪ್ರೊ. ಜಿ.ಎನ್. ಮಲ್ಲಪ್ಪ ಅವರು ಮೂವತ್ತಕ್ಕೂ ಹೆಚ್ಚು ಕವನ ಸಂಕಲನಗಳನ್ನು ರಚಿಸಿರುವುದನ್ನು ಅವರು ಸ್ಮರಿಸಿದರು.

ಅರ್ಥಶಾಸ್ತ್ರದ ವಿಶ್ರಾಂತ ಪ್ರಾಧ್ಯಾಪಕ ಡಾ. ವಾಸುದೇವ ಸೇಡಂ ಮಾತನಾಡಿ, “ಬಡತನವೇ ಬದುಕಿನ ಪಾಠಗಳನ್ನು ಕಲಿಸುವ ಶಕ್ತಿ ಹೊಂದಿದ್ದು, ವ್ಯಕ್ತಿಯನ್ನು ಮೇಲಕ್ಕೆತ್ತುವ ಪ್ರೇರಣೆಯಾಗಿ ಪರಿಣಮಿಸುತ್ತದೆ” ಎಂದು ಹೇಳಿದರು. ವಚನ ಸಾಹಿತ್ಯ, ಜನಪದ ಸಾಹಿತ್ಯ ಮತ್ತು ದಾಸ ಸಾಹಿತ್ಯದಂತಹ ಪರಂಪರೆಗಳು ಕನ್ನಡ ಭಾಷೆಯನ್ನು ಉಳಿಸಿವೆ ಎಂದು ಅವರು ಅಭಿಪ್ರಾಯಪಟ್ಟರು. ಸಾಹಿತ್ಯ ಸಂಸ್ಕಾರವನ್ನು ಉಳಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದರು.

ಮುಖ್ಯ ಅತಿಥಿ ವಾಸುದೇವ ಸೇಡಂಕರ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿ, ”ಕನ್ನಡ ಸಾಹಿತ್ಯ ಪರಂಪರೆಗಳ ಮಹತ್ವವನ್ನು ಒತ್ತಿ ಹೇಳಿದರು. ವಚನ ಸಾಹಿತ್ಯ, ಜನಪದ ಸಾಹಿತ್ಯ ಹಾಗೂ ದಾಸ ಸಾಹಿತ್ಯಗಳಂತಹ ಪರಂಪರೆಗಳು ಕನ್ನಡ ಭಾಷೆಯ ಉಳಿವಿಗೆ ಕಾರಣವಾಗಿವೆ” ಎಂದು ಹೇಳಿದರು.

“ಬಡತನವು ಜೀವನದಲ್ಲಿ ಪಾಠ ಕಲಿಸುವ ಶಕ್ತಿ ಹೊಂದಿದ್ದು, ಅದು ವ್ಯಕ್ತಿಯನ್ನು ಉತ್ತೇಜಿಸಿ ಮೇಲಕ್ಕೆತ್ತುತ್ತದೆ ಎಂದು ಅಭಿಪ್ರಾಯಪಟ್ಟರು. ಸಾಹಿತ್ಯ ಸಂಸ್ಕಾರವನ್ನು ಉಳಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ” ಎಂದು ಹೇಳಿದರು.

1703013

ಕಾರ್ಯಕ್ರಮದ ಕೇಂದ್ರಬಿಂದುವಾಗಿದ್ದ ಪ್ರೊ. ಜಿ.ಎನ್. ಮಲ್ಲಪ್ಪ ತಮ್ಮ ಸಾಹಿತ್ಯ ಪಯಣವನ್ನು ಹಂಚಿಕೊಂಡು, “ಎಪ್ಪತ್ತರ ದಶಕದಲ್ಲಿ ಬರವಣಿಗೆ ಪ್ರಾರಂಭಿಸಿದ್ದು, ನಂತರ ಜವಾಬ್ದಾರಿಗಳ ನಡುವೆ ಸಮಯದ ಅಭಾವ ಇದ್ದರೂ ಬರವಣಿಗೆಯನ್ನು ಮುಂದುವರಿಸಿದ್ದೇನೆ. ನನ್ನ ಗುರುಗಳನ್ನು ಸದಾ ಸ್ಮರಿಸುತ್ತೇನೆ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಗವಿಸಿದ್ದಪ್ಪ ಪಾಟೀಲ್ ಮಾತನಾಡಿ, ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮವು ತತ್ವಪದಕಾರರು, ಕವಿಗಳು ಹಾಗೂ ಕಲಾವಿದರ ತಾಯ್ನಾಡಾಗಿ ಪ್ರಸಿದ್ಧಿ ಪಡೆದಿದೆ ಎಂದು ಹೇಳಿದರು. ಇದೇ ನೆಲೆಯಲ್ಲಿಂದ ಪ್ರೊ. ಮಲ್ಲಪ್ಪ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿರುವುದನ್ನು ಅವರು ವಿವರಿಸಿದರು. “ಪ್ರಪಾತ” ಮತ್ತು “ಆಚೆ–ಈಚೆ” ಕೃತಿಗಳು ಅವರ ಸೃಜನಶೀಲತೆಯನ್ನು ಸ್ಪಷ್ಟಪಡಿಸುತ್ತವೆ ಎಂದರು.

“ಸಾಹಿತ್ಯ ಸಮಾಗಮ”ವನ್ನು ವಿವಿಧ ಭಾಗಗಳಲ್ಲಿ ನಿರಂತರವಾಗಿ ಆಯೋಜಿಸಲಾಗುತ್ತಿದ್ದು, “ಪ್ರಪಾತ” ಕಥಾಸಂಕಲನದ ಹತ್ತು ಕಥೆಗಳು ಸಮಾಜದ ಕಳಕಳಿಯನ್ನು ಪ್ರತಿಬಿಂಬಿಸುತ್ತವೆ ಎಂದು ತಿಳಿಸಿದರು. ಗ್ರಾಮೀಣ ಭಾಷೆಯಲ್ಲಿಯೇ ಆಳವಾದ ಸಂದೇಶ ನೀಡುವ ಕಥೆಗಾರರಾಗಿ ಮಲ್ಲಪ್ಪ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ಶೀಲಾದೇವಿ ಎಸ್. ಬಿರಾದಾರ ಸ್ವಾಗತಿಸಿ ನಿರೂಪಿಸಿದರು. ಡಾ. ಅಣ್ಣಾರಾವ್ ವಂದಿಸಿದರು. ಡಾ. ಸಿದ್ಧಪ್ಪ ಹೊಸಮನಿ, ಡಾ. ಪೀರಪ್ಪ ಸಜ್ಜನ, ಡಾ. ವಿಠ್ಠಲ ಗೋಖಲೆ, ಅಮೃತಪ್ಪ ಹಿರೇಮನಿ, ರೇವಣಸಿದ್ಧಪ್ಪ ದುಕಾನ, ಡಾ. ಭಗವಂತಪ್ಪ ಬುಳ್ಳಾ, ಮಾರುತಿಬ ಪಾಟೀಲ, ಭಾಗ್ಯಶ್ರೀ ನರಗುಂದ, ಶ್ರೀಧರ ಎಂ. ಗಡ್ಡಿಮನಿ, ಜಯಶ್ರೀ, ಮಂಜುನಾಥ ರಾಯಪಳ್ಳಿ, ಆಕಾಶ ತೆಗನೂರು, ಶ್ಯಾಮರಾವ್ ಮಾಡ್ಯಾಳ ಸೇರಿದಂತೆ ಸಿರಿಗನ್ನಡ ವೇದಿಕೆ ಮತ್ತು ಸಾಕ್ಷಿ ಪ್ರತಿಷ್ಠಾನದ ಪದಾಧಿಕಾರಿಗಳು ಹಾಗೂ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಕಲಬುರಗಿ | ಪರವಾನಗಿ ಇಲ್ಲದೇ ಮದ್ಯ ಮಾರಾಟ; ಆರೋಪಿತನ ವಿರುದ್ಧ ಪ್ರಕರಣ ದಾಖಲು

ನಗರದ ಹೀರಾಪುರ ಬಡಾವಣೆಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ...