ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ರಿಂಗ್ ರಸ್ತೆಯ ಕಾಕಡೆ ಚೌಕ್ ಸಮೀಪ ಗುರುವಾರ ನಡೆದಿದೆ.
ಮೃತರನ್ನು ನಗರದ ರಾಮ್‌ಜಿ ನಗರದ ನಿವಾಸಿ ಪ್ರಭಾಕರ ಸೈದಪ್ಪ ಹುಣಸಿ ಹಡಗಿಲ್ (50) ಎಂದು ಗುರುತಿಸಲಾಗಿದೆ.
ಅಪಘಾತದ ತೀವ್ರತೆಗೆ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶವಾಗಾರಕ್ಕೆ ರವಾನಿಸಿದರು ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿದ್ದೀರಾ? ಕಲಬುರಗಿ | ದ್ವಿತೀಯ ಪಿಯುಸಿ ಫಲಿತಾಂಶ: ಕ್ಷಣಗಣನೆ ಆರಂಭ
ಈ ಕುರಿತು ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.





