ಕಲಬುರಗಿ | ಮನೋರಂಜನ್‌ ಎಸ್‌ಎಫ್‌ಐ ಸದಸ್ಯನೆಂಬ ಸುಳ್ಳು ಸುದ್ದಿ; ಕಾನೂನು ಕ್ರಮಕ್ಕೆ ಆಗ್ರಹ

Date:

ಸಂಸತ್ತಿನಲ್ಲಿ ನಡೆದ ಘಟನೆಯ ಮನೋರಂಜನ ಎಂಬ ವ್ಯಕ್ತಿಯು ಎಸ್‌ಎಫ್‌ಐ ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲಾಧಿಕಾರಿ ಮುಖಾಂತರ ಗೃಹಮಂತ್ರಿಗಳಿಗೆ ಎಸ್‌ಎಫ್‌ಐ ಮನವಿ ಪತ್ರ ಸಲ್ಲಿಸಿತು.

- Advertisement -

ಎಸ್‌ಎಫ್‌ಐ ಜಿಲ್ಲಾ ಸಂಚಾಲಕಿ ಸುಜಾತಾ ಮಾತನಾಡಿ, ಈ ದೇಶದ ಪ್ರಜೆಗಳನ್ನು ಪ್ರತಿನಿಧಿಸುವ ಪವಿತ್ರ ಸ್ಥಳವಾದ ಲೋಕಸಭೆಯಲ್ಲಿ ಇಂದು ಕೆಲವು ಕಿಡಿಗೆಡಿಗಳು ನುಗ್ಗಿ ಕಲರ್ ಗ್ಯಾಸ್ ಸಿಂಪಡಿಸುವ ಮೂಲಕ ಭಾರಿ ಭದ್ರತಾ ಲೋಪವನ್ನು ಎಸಗಿದ್ದಾರೆ. ಇದು ಅಕ್ಷಮ್ಯ ಅಪರಾಧ ಮತ್ತು ಖಂಡನೀಯ ಇದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸುತ್ತದೆ ಎಂದರೂ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಕೃತ್ಯ ಎಸಗಿದವರನ್ನು  ಈಗಾಗಲೇ ಬಂಧಿಸಿಲಾಗಿದೆ. ಅವರನ್ನು ಸೂಕ್ತ ವಿಚಾರಣೆ ಒಳಪಡಿಸಿ ಕಾನೂನಿನ ಕ್ರಮಕ್ಕೆ ಮುಂದಾಗಬೇಕೆಂದು ಎಸ್ಎಫ್ಐ ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ.

ಕೃತ್ಯ ಎಸಗಿದವರ ಪೈಕಿ ಇಬ್ಬರೂ ಕರ್ನಾಟಕ, ಒಬ್ಬರು ಹರಿಯಾಣ ಮತ್ತೋರ್ವರು ಮಹಾರಾಷ್ಟ್ರ ಮೂಲದವರೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಇವರೆಲ್ಲ ಲೋಕಸಭೆ ಪ್ರವೇಶ ಮಾಡಲು ಇವರಿಗೆ ಪಾಸ್ ನೀಡಿದವರು ಯಾರು? ಇವರ ಹಿಂದೆ ಯಾರೆಲ್ಲಾ ಇದ್ದಾರೆ, ಇದಕ್ಕೆ ಕುಮ್ಮಕ್ಕು ನೀಡಿದವರು ಯಾರು? ಮತ್ತು ಇವರ ಉದ್ದೇಶ ಏನಾಗಿತ್ತು ಎಂಬುದರ ಕುರಿತು ಸಮಗ್ರ ತನಿಖೆ ನಡೆಯಲಿ ಎಂದು ಅವರು ಆಗ್ರಹಿಸಿದರು.

ಎಸ್ಎಫ್ಐ ಸಂಘಟನೆ ತ್ಯಾಗ ಬದ್ಧತೆ ಮತ್ತು ಸಿದ್ದಾಂತವನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳ, ಶಿಕ್ಷಣದ ಮತ್ತು ಸಮಾಜದ ಪ್ರಗತಿಗಾಗಿ ಹಾಗೂ ಸೌಹಾರ್ದ, ಸಾಮರಸ್ಯದ ಘನತೆಯ ಬದುಕಿಗಾಗಿ ದಶಕಗಳಿಂದ ವಿದ್ಯಾರ್ಥಿ ಸಮುದಾಯದ ಪರವಾಗಿ ದೇಶಾದ್ಯಂತ ಹೋರಾಟ ಮಾಡುತ್ತಾ ಬರುತ್ತಿದೆ. ಇದನ್ನು ಸಹಿಸದ ಈ ದೇಶದ ಕೋಮುವಾದಿ ಪಕ್ಷದ ಕಾರ್ಯಕರ್ತರು ಸೈದ್ದಾಂತಿಕವಾಗಿ ಸಂಘಟನೆಯನ್ನು ಎದುರಿಸಲಾಗದೆ, ಈ ಪ್ರಕರಣದಲ್ಲಿ ‌ವಿನಾಕಾರಣ ಎಸ್ಎಫ್ಐ ಮೈಸೂರು ಜಿಲ್ಲಾ ಅಧ್ಯಕ್ಷರಾದ‌ ವಿಜಯ್ ಕುಮಾರ್ ಇವರ ಪೋಟೋವನ್ನು ದುರ್ಬಳಕೆ ಮಾಡಿಕೊಂಡು, ಇವನೆ ಮನೋರಂಜನ ಎಂದು ಅಪ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಬಿಜೆಪಿಯವರು ಸೋಶಿಯಲ್ ಮೀಡಿಯಾದಲ್ಲಿ ಅಪ್ರಚಾರ ಮಾಡುತ್ತಾ, ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕೃತ್ಯ ಎಸಗಿದ ವ್ಯಕ್ತಿಗಳ ಬಂಧನವಾದರೂ ದುರುದ್ದೇಶದಿಂದ ಇಂತಹ ಕೆಲಸ ಮಾಡುತ್ತಿರುವ ಬಿಜೆಪಿಯ ಐಟಿ ಸೆಲ್‌ಗಳು ಹಾಗೂ ಅದನ್ನು ನಿರ್ವಹಿಸುವ ಅಡ್ಮಿನ್‌ಗಳನ್ನು ಮತ್ತು ಸುಳ್ಳು ಸುದ್ದಿಯನ್ನು ಶೇರ್ ಮಾಡುತ್ತಿರುವ ಎಲ್ಲಾ ವ್ಯಕ್ತಿಗಳು ಹಾಗೂ ಗುಂಪುಗಳ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಎಸ್‌ಎಫ್‌ಐ ಮನವಿ ಪತ್ರದಲ್ಲಿ ಆಗ್ರಹಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...