ಕಲಬುರಗಿ | ಸರ್ಕಾರಿ ಶಾಲೆ ಉಳಿಸಲು ಇಟಗಾ ಕೆ ಗ್ರಾಮದಲ್ಲಿ ಪೋಷಕರ ಬೃಹತ್ ಪ್ರತಿಭಟನೆ

Date:

ಕಲಬುರಗಿ ತಾಲೂಕಿನ ಇಟಗಾ ಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)–ಮ್ಯಾಗ್ನೆಟ್ ಶಾಲೆ ಯೋಜನೆಯಡಿ ವಿಲೀನಗೊಳಿಸಿ ಮುಚ್ಚಲು ಸರ್ಕಾರ ಮುಂದಾಗಿರುವುದನ್ನು ಖಂಡಿಸಿ, ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಪೋಷಕರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ರಾಜ್ಯಾದ್ಯಂತ ಕೆಪಿಎಸ್–ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಯೋಜನೆ ಜಾರಿಯಲ್ಲಿದ್ದು, ಅದರ ಭಾಗವಾಗಿ ಕಲಬುರಗಿ ದಕ್ಷಿಣ ಭಾಗದ ಕಣದಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಇದರ ಪರಿಣಾಮವಾಗಿ ಇಟಗಾ ಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಎಚ್., ‘ಗುಣಮಟ್ಟ ಮತ್ತು ಮಾದರಿ ಶಾಲೆಗಳ ಹೆಸರಿನಲ್ಲಿ ಉಚಿತ ಹಾಗೂ ಸಾರ್ವತ್ರಿಕ ಶಿಕ್ಷಣದ ಮೂಲ ಆಶಯವನ್ನೇ ನಾಶಪಡಿಸಲಾಗುತ್ತಿದೆ. 6–7 ಕಿಲೋಮೀಟರ್ ದೂರದ ಶಾಲೆಗೆ ಹೋಗಲು ಸಾಧ್ಯವಾಗದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್‌ನಿಂದ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ಕಾರ್ಪೊರೇಟ್ ಹಿತಾಸಕ್ತಿಗಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ’ ಎಂದು ಅವರು ಆರೋಪಿಸಿದರು.

972632

ಇದೇ ವೇಳೆ ಎಐಡಿಎಸ್‌ಒ ಜಿಲ್ಲಾ ಕೌನ್ಸಿಲ್ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಮಾತನಾಡಿ, ‘ಅಭಿವೃದ್ಧಿಪಡಿಸಬೇಕಾದ ಗ್ರಾಮೀಣ ಹಾಗೂ ತಾಂಡಾ ಶಾಲೆಗಳನ್ನು ಮುಚ್ಚುತ್ತಿರುವುದು ಸರ್ಕಾರದ ಶಿಕ್ಷಣ ವಿರೋಧಿ ನೀತಿಯನ್ನು ತೋರಿಸುತ್ತದೆ. ಇದು ಬಡ ರೈತರು ಹಾಗೂ ಕಾರ್ಮಿಕರ ಮಕ್ಕಳ ಶಿಕ್ಷಣ ಹಕ್ಕನ್ನು ಕಸಿದುಕೊಳ್ಳುವ ಕ್ರಮವಾಗಿದೆ,’ ಎಂದರು.

Advertisements
Advertisements

ಇದನ್ನು ಓದಿದ್ದೀರಾ? ಕಲಬುರಗಿ | ಲಂಚ ಪಡೆಯುತ್ತಿದ್ದ ವಿಶೇಷ ಸಾರ್ವಜನಿಕ ಅಭಿಯೋಜಕ ಲೋಕಾಯುಕ್ತ ಬಲೆಗೆ

ಸರ್ಕಾರ ಕೂಡಲೇ ಒಂದೂ ಸರ್ಕಾರಿ ಶಾಲೆ ಮುಚ್ಚದಂತೆ ಲಿಖಿತ ಆದೇಶ ಹೊರಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾ ಕೌನ್ಸಿಲ್ ಉಪಾಧ್ಯಕ್ಷೆ ಪ್ರೀತಿ ದೋಡ್ಡಮನಿ, ಸದಸ್ಯರಾದ ಬಾಬು ಪವರ್, ಯುವರಾಜ ರಾಠೋಡ್, ಸಂಪತ್ ಕುಮಾರ್ ಸೇರಿದಂತೆ ನೂರಾರು ಗ್ರಾಮಸ್ಥರು ಮತ್ತು ಪೋಷಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...