ಕಲಬುರಗಿ | ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

Date:

ರಾಜ್ಯ ಸರ್ಕಾರ ಭರವಸೆ ನೀಡಿರುವ 56,432 ಖಾಲಿ ಹುದ್ದೆಗಳ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ವತಿಯಿಂದಉದ್ಯೋಗಾಕಾಂಕ್ಷಿಗಳು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ನಗರದ ಪ್ರಮುಖ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ‌ ನಡೆದ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು. ಕೈಯಲ್ಲಿ ಭಿತ್ತಿಪತ್ರ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ ಮಾತನಾಡಿ, “ಕೆಪಿಎಸ್‌ಸಿಯ ಎಲ್ಲಾ ವಿವಾದಿತ ನೇಮಕಾತಿಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದ 56,432 ಹುದ್ದೆಗಳಿಗೆ ತಕ್ಷಣ ಅಧಿಸೂಚನೆ ಹೊರಡಿಸಿ, 8 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು” ಎಂದು ಆಗ್ರಹಿಸಿದರು.

WhatsApp Image 2026 03 27 at 7.56.11 PM

ಕಲಬುರಗಿಯನ್ನು ಐಟಿ ಹಬ್ ಮತ್ತು ಸ್ಟಾರ್ಟ್ಅಪ್ ಕೇಂದ್ರವಾಗಿ ಘೋಷಿಸುವುದು, ಕಲಬುರಗಿ ವಿಶ್ವವಿದ್ಯಾಲಯದ ಫಲಿತಾಂಶ ಪ್ರಕಟಣೆಗೆ ಹಾಗೂ ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಕಾಲಮಿತಿ ನಿಗದಿ ಮಾಡುವುದು, ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ವಯೋಮಿತಿಯನ್ನು ಶಾಶ್ವತವಾಗಿ ಹೆಚ್ಚಿಸುವುದು ಸೇರಿ ಹಲವು ಬೇಡಿಕೆಗೆ ಒತ್ತಾಯಿಸಿದರು.

ಒಂದು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತೇವೆ ಎಂದು ಭರವಸೆ ನೀಡಿದ ಸರ್ಕಾರ ಮಾತು ತಪ್ಪಿದೆ. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ಉಪಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದರು.

ಇದನ್ನೂ ಓದಿ : ಕಲಬುರಗಿ | ಲಾರಿ, ಬೈಕ್‌ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಪ್ರತಿಭಟನೆಯಲ್ಲಿ ಸಂಘಟನೆಯ ಉಪಾಧ್ಯಕ್ಷ ಶ್ರೇಯಾಸ್ ಎಂ.ಎಸ್., ಪ್ರಧಾನ ಕಾರ್ಯದರ್ಶಿ ಸಂಜಯಕುಮಾರ್, ಎಸ್.ಎಂ.ಸಿದ್ದೇಶ, ಶ್ರೀಶೈಲ್ ತೇಲಿ, ಅರ್ಜುನ ಝಳಕಿ, ಈರಣ್ಣ ಸಲಗರ, ಸಂತೋಷ ಬೆಳಮಗಿ, ಅನೀಲಕುಮಾರ ನಾಯ್ಕೋಡಿ, ಆಂದೋಲಾ ಸಿದ್ದಲಿಂಗ ಸ್ವಾಮೀಜಿ, ಎಂ.ಎಸ್.ಪಾಟೀಲ್‌ ನರಿಬೋಳ, ಬಿಜೆಪಿ ಮುಖಂಡ ಚಂದು ಪಾಟೀಲ್‌, ಬಿಜೆಪಿ ಯುವ ಹೋರಾಟಗಾರ ಶಿವ ಅಷ್ಠಗಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಕಲಬುರಗಿ | ಪರವಾನಗಿ ಇಲ್ಲದೇ ಮದ್ಯ ಮಾರಾಟ; ಆರೋಪಿತನ ವಿರುದ್ಧ ಪ್ರಕರಣ ದಾಖಲು

ನಗರದ ಹೀರಾಪುರ ಬಡಾವಣೆಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ...