ಕಲಬುರಗಿ | ನಾಪತ್ತೆಯಾದ 9ನೇ ತರಗತಿ ವಿದ್ಯಾರ್ಥಿ ಶವವಾಗಿ ಪತ್ತೆ

Date:

ನಗರದ ಹೊರವಲಯದ ಬಬಲಾದ ಸಮೀಪದಲ್ಲಿರುವ ಡಾನ್ ಬೊಸ್ಕೋ ಶಾಲೆ ಆವರಣದ ಬಾವಿಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬನ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

- Advertisement -

ಚಿಂಚೋಳಿ ತಾಲೂಕಿನ ಸಾಸರಗಾಂವ್ ಗ್ರಾಮದ ಗುರು ನಾಗಪ್ಪ (15) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಶಾಲೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಮಂಗಳವಾರ ಶಾಲಾ ಆವರಣದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವುದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಶವವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ ಅವರು ತಿಳಿಸಿರುವಂತೆ, ‘ಎರಡು ದಿನಗಳ ಹಿಂದೆ ವಿದ್ಯಾರ್ಥಿ ಶಾಲೆಯ ಬೈಕ್ ತೆಗೆದುಕೊಂಡು ಹೋಗಿ ಗೋಡೆಗೆ ಢಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಅಪಘಾತದಿಂದ ಬೈಕ್ ಹಾನಿಗೊಳಗಾಗಿದ್ದು, ದುರಸ್ತಿ ವೆಚ್ಚ ಭರಿಸುವಂತೆ ಒತ್ತಾಯ ಮಾಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆತ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ,’ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಖಾಸಗಿ ಶಾಲಾ ಬಸ್‌ ಚಕ್ರಕ್ಕೆ ಸಿಲುಕಿ 4 ವರ್ಷದ ಬಾಲಕ ಸಾವು

ಮೃತನ ಪಾಲಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...