ಕಲಬುರಗಿ | ಮಂಗಗಳ ದಾಳಿ; ಇಬ್ಬರಿಗೆ ಗಾಯ

Date:

ಮಂಗಗಳ ದಾಳಿಗೆ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಕಲಬುರಗಿ ಸಮೀಪದ ಬಳವಾಡಗಿ ಗ್ರಾಮದಲ್ಲಿ ನಡೆದಿದೆ.

- Advertisement -

ಕೋತಿಗಳ ಗುಂಪು ಗ್ರಾಮಕ್ಕೆ ಬಂದು ತಂಗಿದ್ದು, ಆಹಾರವನ್ನು ಕಸಿದುಕೊಳ್ಳುವ ಮೂಲಕ ಜನರಿಗೆ ತೊಂದರೆ ನೀಡಲು ಪ್ರಾರಂಭಿಸಿವೆ. ಕೋತಿಗಳ ದಾಳಿಗೊಳಗಾದ ಲಕ್ಷ್ಮಿಬಾಯಿ ಸಿದ್ದಪ್ಪ ಮತ್ತು ಅನಿತಾ ಚವ್ಹಾಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮಿ ‌ಎಂಬುವವರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದು, ಅನಿತಾ ಎಂಬುವವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮಹಿಳೆಯರ ಕಾಲುಗಳು, ಕೈಗಳು ಮತ್ತು ಮುಖಕ್ಕೆ ಗಾಯಗಳಾಗಿವೆ. ಈ ಕೋತಿಗಳು ಸ್ಥಳೀಯರಿಗೆ ಅಪಾಯ ಉಂಟು ಮಾಡುತ್ತಿದ್ದು, ಮಹಿಳೆಯರು ಮತ್ತು ಮಕ್ಕಳು ಹೊರಗೆ ಹೋಗಲು ಹೆದರುತ್ತಿದ್ದಾರೆ. ಹಾಗಾಗಿ ಕೋತಿಗಳನ್ನು ತಮ್ಮ ಗ್ರಾಮದಿಂದ ಕಾಡಿಗೆ ಸ್ಥಳಾಂತರಿಸಬೇಕು” ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹನುಮ ಜಯಂತಿ | ಪ್ರಸಾದ ತಿಂದು 200 ಹೆಚ್ಚು ಮಂದಿ ಅಸ್ವಸ್ಥ; ಓರ್ವ ಮಹಿಳೆ ಸಾವು

“ಗ್ರಾಮಸ್ಥರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಹೊರಗೆ ಕಾಲಿಡುವವರು ಲಾಠಿ ಹಿಡಿದು ಓಡಾಡುವಂತಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, “ಕೋತಿಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ, ಕೋತಿಗಳನ್ನು ಹಿಡಿಯಲು ಮಹಾರಾಷ್ಟ್ರದಿಂದ ತಂಡವೊಂದು ಆಗಮಿಸಲಿದೆ. ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ದೊರಕಿಸಲಾಗುವುದು” ಎಂದು  ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...