ಕಲಬುರಗಿ | ಹತ್ಯೆ ಪ್ರಕರಣ: ಗುಂಡಿನ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

Date:

ನಗರದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಫೈನಾನ್ಸಿಯರ್ ಹಾಗೂ ವಕೀಲ ಅನಿಲ್ ರಾಠೋಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧಿಸುವ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿರು ಘಟನೆ ಶನಿವಾರ ರಾತ್ರಿ ನಡೆದಿದೆ.

- Advertisement -

ಪೊಲೀಸರ ಮಾಹಿತಿ ಪ್ರಕಾರ, ಕೊಲೆ ಆರೋಪಿ ಈಶ್ವರ ರಾಠೋಡ್ ನಗರದ ಹೊರವಲಯದ ಕೆಸರಟಗಿ ಪ್ರದೇಶದಲ್ಲಿ ಅಡಗಿ ಕುಳಿತಿರುವ ಸುಳಿವು ಲಭಿಸಿದ್ದ ಹಿನ್ನೆಲೆಯಲ್ಲಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

‘ಪರಿಸ್ಥಿತಿ ನಿಯಂತ್ರಿಸಲು ಮತ್ತು ಆತ್ಮರಕ್ಷಣೆಗಾಗಿ ಪಿಐ ಗುರುಗೌಡ ಪಾಟೀಲ್ ಆರೋಪಿ ಈಶ್ವರನ ಎಡಗಾಲಿಗೆ ಗುಂಡು ಹಾರಿಸಿದ್ದಾರೆ.’ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಈಶ್ವರ ರಾಠೋಡನನ್ನು ತಕ್ಷಣವೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಬಳಿಕ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್‌ ಡಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ಸ್ಥಿತಿ ಪರಿಶೀಲಿಸಿರುವುದು ತಿಳಿದು ಬಂದಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಹೋರಾಟ ಫಲ: ಕಟ್ಟಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಡ್ಡಿ ಇಮ್ರಾನ್, ಮಿನಾಹಝ್ ಹಾಗೂ ಅಭಿಷೇಕ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...