ಕಲಬುರಗಿ | ಸಂಗೀತ ಕಲಾ ಮಹೋತ್ಸವ ಸಂಭ್ರಮ: ಜಿಲ್ಲಾ ಮಟ್ಟದ “ಕಾಯಕ ರತ್ನ” ಪ್ರಶಸ್ತಿ ಪ್ರಧಾನ

Date:

ರವಿವರ್ಮಾ ಕಲಾ ಸಾಹಿತ್ಯ ಸಾಂಸ್ಕೃತಿಕ ಸೇವಾ ಸಂಸ್ಥೆ ಹಡಗಿಲ ಹಾರೂತಿ, ಕಲಬುರಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಸಭಾ ಭವನದಲ್ಲಿ ಸಂಗೀತ ಕಲಾ ಮಹೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮದಿಂದ ನಡೆಯಿತು.

- Advertisement -

ಕಾರ್ಯಕ್ರಮವನ್ನು ಅಭಿಷೇಕ ಅಲ್ಲಮಪ್ರಭು ಪಾಟೀಲ್ ಉದ್ಘಾಟಿಸಿದರು. ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ, ಜಾನಪದ ನೃತ್ಯ, ಜನಪದ ಗೀತೆಗಳ ಪ್ರದರ್ಶನಗಳು ಪ್ರೇಕ್ಷಕರ ಗಮನ ಸೆಳೆದವು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕಲಾವಿದರು ತಮ್ಮ ಪ್ರತಿಭೆ ಪ್ರದರ್ಶಿಸಿ ಮೆಚ್ಚುಗೆ ಪಡೆದರು.
ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಜಿಲ್ಲಾ ಮಟ್ಟದ “ಕಾಯಕ ರತ್ನ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
1617902

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ರೇವಯ್ಯ ವಸ್ತ್ರದಮಠ ಮಾತನಾಡಿ, “ಜನಪದ ಗೀತೆಗಳಲ್ಲಿ ಜೀವನ ಮೌಲ್ಯಗಳು ಮತ್ತು ಸಂಸ್ಕೃತಿಯ ಸಾರ ಅಡಗಿದೆ. ಇವುಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸುವುದು ಅಗತ್ಯ” ಎಂದರು.

ಅತಿಥಿಗಳಾಗಿ ಮಲ್ಲಿನಾಥ ದೇಶಮುಖ ಮಾತನಾಡಿ, “ಜನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವನಾಡಿಯಾಗಿವೆ. ಇಂತಹ ಮಹೋತ್ಸವಗಳು ಗ್ರಾಮೀಣ ಪ್ರತಿಭೆಗಳಿಗೆ ಉತ್ತೇಜನ ನೀಡುತ್ತವೆ” ಎಂದು ಹೇಳಿದರು.

1617905

ಕಾರ್ಯಕ್ರಮದಲ್ಲಿ ಅಣ್ಣಪ್ಪ ಎಸ್ ಜಿ, ರೇಣುಕಾ ವಿಜಯಕುಮಾರ್ ತೆಗಲತಿಪ್ಪಿ, , ಮಲ್ಲಿಕಾರ್ಜುನ ದೊಡ್ಡಿ, ರೇವಯ್ಯ ವಸ್ತ್ರದಮಠ್, ಗುರು ಬಂಡಿ, ಕಿರಣ ಪಾಟೀಲ್, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿವಶಂಕರ್ ಸ್ವಾಗತಿಸಿದರು, ಎಮ್ ಬಿ ನಿಂಗಪ್ಪ ನಿರೂಪಿಸಿದರು. ಮಲ್ಲಿಕಾರ್ಜುನ ದೊಡ್ಡಿ ವಂದಿಸಿದರು.

1617928

ಇದನ್ನು ಓದಿದ್ದೀರಾ? ಕಲಬುರಗಿ | ಭಾರತೀಯ ಸಂಸ್ಕೃತಿಯ ನೆಲೆಯಾದ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸಬೇಕು: ಡಾ. ಸದಾನಂದ ಪೆರ್ಲ ಅಭಿಮತ

ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ಮೂಲಕ ಮಹೋತ್ಸವವು ಯಶಸ್ವಿಯಾಗಿ ನೆರವೇರಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...