ಸಂಚಾರದ ವೇಳೆ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಪೊಲೀಸ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗೊಬ್ಬರ ಗ್ರಾಮ ಸಮೀಪ ಶನಿವಾರ ಬೆಳಗ್ಗೆ 11 ಗಂಟೆಗೆ ನಡೆದಿದೆ ಎಂದು ತಿಳಿದು ಬಂದಿದೆ.
ಮೃತರನ್ನು ಧರೆಪ್ಪ (24) ಶಿರವಾಳ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅವರು ಪೊಲೀಸ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕಲಬುರಗಿಯಿಂದ ಶಿರವಾಳ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು, ಪರಿಣಾಮ ಧರೆಪ್ಪ ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಗಳ ತೀವ್ರತೆಯಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಮಾಹಿತಿ ಹಕ್ಕು ಕಾಯಿದೆ ಆಶಯಕ್ಕೆ ಕೊಡಲಿ ಪೆಟ್ಟು: ಆಯೋಗದಲ್ಲಿಯೇ ದೂರುದಾರರಿಗೆ ಅವಮಾನ
ಘಟನಾ ಸ್ಥಳಕ್ಕೆ ಆಳಂದ ಡಿವೈಎಸ್ಪಿ ತಮ್ಮರಾಯ ಪಾಟೀಲ, ಸಿಪಿಐ ಲಖನ್ ಮಸಗುಪ್ಪಿ ಹಾಗೂ ದೇವಲಗಂಗಾಪುರ ಪೊಲೀಸ್ ಠಾಣೆಯ ಪಿಎಸ್ಸೆ ಸಂಗೀತಾ ಶಿಂಧೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಲಗಂಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.





