ಕಲಬುರಗಿ | ಕಳಪೆ ಬಿತ್ತನೆ ಬೀಜ ವಿತರಣೆ; ಮಿಲ್‌ ವಿರುದ್ಧ ಕ್ರಮಕ್ಕೆ ಎಐಕೆಕೆಎಂಎಸ್‌ ಆಗ್ರಹ

Date:

ಉತ್ತಮ ಇಳುವರಿ ಬರುವ ಬಿತ್ತನೆ ಬೀಜಗಳನ್ನು ನೀಡುತ್ತೇವೆಂದು ನಂಬಿಸಿ, ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ತಪ್ಪಿತಸ್ಥ ಮಿಲ್ ಮಾಲೀಕರ ವಿರುದ್ಧ ಕ್ರಮ ಕೈಕೊಳ್ಳಬೇಕೆಂದು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್‌) ಒತ್ತಾಯಿಸಿದೆ.

- Advertisement -

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಸುಮಾರು 25ಕ್ಕೂ ಅಧಿಕ ರೈತರಿಗೆ ‘ಫತಾಹ ಇಂಡಸ್ಟಿ’ ಎಂಬ ಶೇಂಗಾ ಮಿಲ್‌ ಮಾಲೀಕರು ಕಳಪೆ ಬಿತ್ತನೆ ಬೀಜ ವಿತರಿಸಿದ್ದಾರೆ. ಇದರಿಂದಾಗಿ, ಸರಿಯಾಗಿ ಬೆಳೆ ಬಾರದೆ, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರಿಗೆ ಮೋಸ ಮಾಡಿರುವ ಮಿಲ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಬಿತ್ತನೆ ಮಾಡಿದ್ದ ಬೀಜಗಳ ಪೈಕಿ ಸುಮಾರು 40% ಬೀಜಗಳು ಮೊಳಕೆಯನ್ನೇ ಹೊಡೆದಿಲ್ಲ. ಬೆಳೆದ ಸಸಿಗಳು ರೋಗ ಬಾಧಿಸಿದೆ. ಮಿಲ್‌ ಮಾಲೀಕರು ಈ ಕಳಪೆ ಬೀಜಕ್ಕೆ ಪ್ರತಿ ಕ್ವಿಂಟಾಲ್‌ಗೆ 13,200 ರೂ. ಪಡೆದು ವಂಚಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಹೇಶ್ ಎಸ್.ಬಿ, ಬಿ. ಭಗವಾನ್ ರೆಡ್ಡಿ, ಗುಂಡಣ್ಣ ಕುಂಬಾರ್‌, ಅನೀಲಗೌಡ, ಶರಣು ಗಂಜಿ, ಮರೆಪ್ಪ ಗಂಜಿ, ಸಾಬಣ್ಣ, ಶಿವು, ನಾಗಪ್ಪ ನಾಯಕೋಡಿ, ಗೌಡಪ್ಪ, ಸಾಬಣ್ಣ ಗಂಜಿರ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...