ಕಲಬುರಗಿ | ‘ಪ್ರಬುದ್ಧ ಅಕಾಡೆಮಿ’: ಉದ್ಘಾಟನೆಗೊಂಡು ಎರಡು ತಿಂಗಳಲ್ಲೇ ಉದುರಿ ಬಿದ್ದ ಚಾವಣಿಯ ಸಿಮೆಂಟ್ ಪದರು

Date:

ನಗರದ ಹೊರವಲಯದಲ್ಲಿ ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಪ್ರಬುದ್ಧ ಅಕಾಡೆಮಿ ಕಟ್ಟಡದ ಪಕ್ಕದ ಉಪಾಹಾರ ಗೃಹದಲ್ಲಿ ಸೋಮವಾರ ಮಧ್ಯಾಹ್ನ ಮೇಲ್ಛಾವಣಿಯ ಸಿಮೆಂಟ್ ಪದರು ಉದುರಿ ಟೇಬಲ್ ಹಾಗೂ ಕುರ್ಚಿಗಳ ಮೇಲೆ ಬಿದ್ದ ಘಟನೆ ನಡೆದಿದೆ.

- Advertisement -

ಮಧ್ಯಾಹ್ನದ ಊಟದ ವಿರಾಮದ ವೇಳೆ ಈ ಅವಘಡ ಸಂಭವಿಸಿದ್ದು, ವಿದ್ಯಾರ್ಥಿನಿಯೊಬ್ಬರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆ ವೇಳೆ ಗೃಹದೊಳಗೆ ವಿದ್ಯಾರ್ಥಿಗಳು ಊಟಕ್ಕಾಗಿ ಸೇರಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1552007

ಈ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಜನವರಿ 11ರಂದು ಉದ್ಘಾಟಿಸಿದ್ದರು. ಉದ್ಘಾಟನೆಗೊಂಡು ಇನ್ನೂ ಎರಡು ತಿಂಗಳು ಪೂರ್ಣಗೊಳ್ಳುವ ಮುನ್ನವೇ ಮೇಲ್ಚಾವಣಿಯ ಸಿಮೆಂಟ್ ಪದರು ಉದುರಿ ಬೀಳುತ್ತಿರುವುದು ನಿರ್ಮಾಣದ ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

1552012

ಗಮನಾರ್ಹವಾಗಿ, ಉಪಾಹಾರ ಗೃಹ ಇನ್ನೂ ಅಧಿಕೃತವಾಗಿ ಕಾರ್ಯಾರಂಭವಾಗಿಲ್ಲದಿದ್ದರೂ ವಿದ್ಯಾರ್ಥಿಗಳು ಅದನ್ನು ಬಳಸುತ್ತಿದ್ದರು ಎಂಬ ಮಾಹಿತಿ ದೊರೆತಿದೆ. ಇದರಿಂದ ಭದ್ರತಾ ಕ್ರಮಗಳು ಸಮರ್ಪಕವಾಗಿದ್ದವೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತ ಬಾಲಕಿಯರೊಂದಿಗೆ ಅನುಚಿತ ವರ್ತನೆ: ಖಾಸಗಿ ಶಾಲಾ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಘಟನೆಯ ಬಳಿಕ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನಿರ್ಮಾಣದ ಗುಣಮಟ್ಟ, ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ...

ಕಲಬುರಗಿ | ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಮೋಟಾರ್‌ಸೈಕಲ್ ಹಾಗೂ ಕೇಬಲ್ ವೈರ್ ಕಳ್ಳತನಕ್ಕೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಕರಣಗಳನ್ನು...

ಕಲಬುರಗಿ | ರಸ್ತೆ ಬದಿಯಲ್ಲಿ ಲಾರಿ ನಿಲುಗಡೆಗೆ ಕಡಿವಾಣ: ಪೊಲೀಸರ ಕಟ್ಟುನಿಟ್ಟಿನ ಸೂಚನೆ

ರಸ್ತೆ ಅಪಘಾತಗಳನ್ನು ನಿಯಂತ್ರಿಸಿ ಸಾರ್ವಜನಿಕರ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಸೇಡಂ ಪೊಲೀಸ್...

ಕಲಬುರಗಿ | ಸಂಕನೂರ ಗುಡ್ಡದಲ್ಲಿ ಒಂದೇ ಮರದ ಬಳಿ ಇಬ್ಬರ ಶವ: ಪ್ರೇಮದ ಶಂಕೆ, ಸಾವಿನ ಸುತ್ತ ನಿಗೂಢತೆ

ಚಿತ್ತಾಪುರ ತಾಲೂಕಿನ ಸಂಕನೂರ ಗುಡ್ಡದ ನಿರ್ಜನ ಪ್ರದೇಶದಲ್ಲಿ ಒಂದೇ ಮರದ ಬಳಿ...