ಕಲಬುರಗಿ | ಆರ್‌ಬಿಐ ನಿಯಮ ಉಲ್ಲಂಘನೆ ಆರೋಪ: ಎಕ್ವಿಟಾಸ್ ಬ್ಯಾಂಕ್ ವಿರುದ್ಧ ಪ್ರತಿಭಟನೆ

Date:

ಆರ್‌ಬಿಐ ನಿರ್ದೇಶನಗಳು ಹಾಗೂ ರಾಜ್ಯ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ವಾಸವಾಗಿರುವ ಮನೆಗಳನ್ನು ಅಕ್ರಮವಾಗಿ ಸೀಸ್ ಮಾಡಲಾಗುತ್ತಿದೆ ಎಂದು ಆರೋಪಿಸಿ, ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ನೇತೃತ್ವದಲ್ಲಿ ಸಿಪಿಐ ಕಾರ್ಯಕರ್ತರು ಮಂಗಳವಾರ ಜೇವರ್ಗಿ ಪಟ್ಟಣದ ಎಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಶಾಖೆ ಎದುರು ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶ್ ಕುಮಾರ್, ‘ಎಕ್ವಿಟಾಸ್ ಬ್ಯಾಂಕ್ ರೈತರು, ರೈತ ಮಹಿಳೆಯರು ಹಾಗೂ ಬಡಜನರಿಗೆ ಸಾಲ ನೀಡಿ ಅಧಿಕ ಬಡ್ಡಿ ವಿಧಿಸುತ್ತಿದೆ. ಇಎಮ್‌ಐ ಪಾವತಿಯಲ್ಲಿ ಸ್ವಲ್ಪ ವಿಳಂಬವಾದರೂ ಆರ್‌ಬಿಐ ಹಾಗೂ ರಾಜ್ಯ ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿ ದಂಡ ವಸೂಲಿ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

‘ಸಾಲ ಮರುಪಾವತಿಯಲ್ಲಿ ವಿಫಲವಾದರೆ ಯಾವುದೇ ನೋಟಿಸ್ ನೀಡದೇ, ಕಾಲಾವಕಾಶ ನೀಡದೇ ಏಕಾಏಕಿ ಮನೆಗಳನ್ನು ಸೀಸ್ ಮಾಡಲಾಗುತ್ತಿದೆ. ಇಂತಹ ಅಕ್ರಮ ಚಟುವಟಿಕೆ ನಡೆಸುತ್ತಿರುವ ಜೇವರ್ಗಿ ಶಾಖೆಯನ್ನು ತಕ್ಷಣ ಮುಚ್ಚಬೇಕು. ಸಂಬಂಧಪಟ್ಟ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬ್ಯಾಂಕಿನ ಪರವಾನಗಿ ರದ್ದುಪಡಿಸಬೇಕು’ ಎಂದು ಅವರು ಆಗ್ರಹಿಸಿದರು.

ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿಯ ಸಂಚಾಲಕ ಬಾಬು ಬಿ. ಪಾಟೀಲ್ ಮಾತನಾಡಿ, ‘ಕಡಿಮೆ ಬಡ್ಡಿಯಲ್ಲಿ ಹೋಮ್ ಲೋನ್ ನೀಡುವುದಾಗಿ ಜನರನ್ನು ನಂಬಿಸಿ ನಂತರ ಕಾನೂನುಬಾಹಿರವಾಗಿ ಮನೆಗಳನ್ನು ಸೀಸ್ ಮಾಡುವುದು ಖಂಡನೀಯ’ ಎಂದು ಹೇಳಿದರು.

ಇದೆ ವೇಳೆ ಆದರ್ಶ ಗ್ರಾಮ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಪಟೇಲ್ ಯಾಳವಾರ ಮಾತನಾಡಿ, ‘ಬ್ಯಾಂಕುಗಳು ಮಾನವೀಯತೆಯಿಂದ ಕಾರ್ಯನಿರ್ವಹಿಸಬೇಕು. ಬಡವರ ಹಣದಲ್ಲೇ ನಡೆಯುವ ಬ್ಯಾಂಕುಗಳು ಬಡವರಿಗೆ ಕಿರುಕುಳ ನೀಡುತ್ತಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಸೌಹಾರ್ದ ಸಮಿತಿಯ ತಾಲೂಕು ಅಧ್ಯಕ್ಷ ಹಬೀಬ್ ಜಮಾದಾರ್ ಜೈನಾಪುರ ಮಾತನಾಡಿ, ‘ಬ್ಯಾಂಕ್ ಸಿಬ್ಬಂದಿ ಕಾನೂನು ಪಾಲನೆಯ ಜೊತೆಗೆ ಮಾನವೀಯತೆಯನ್ನೂ ಕಾಪಾಡಬೇಕು’ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡ ಇಬ್ರಾಹಿಂ ಪಟೇಲ್ ಜೇವರ್ಗಿ ಮಾತನಾಡಿ, ‘ರೈತರ ಪರವಾಗಿ ಜಾರಿಗೊಂಡಿರುವ ಕಾನೂನುಗಳನ್ನು ಬ್ಯಾಂಕ್ ಉಲ್ಲಂಘಿಸುತ್ತಿದೆ. ರಾಜ್ಯ ಸರ್ಕಾರ ಇಂತಹ ಬ್ಯಾಂಕುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿಕ್ಷಣ ಇಲಾಖೆಗೆ ದಲಿತ ವಿದ್ಯಾರ್ಥಿ ಪರಿಷತ್ ಮನವಿ

ಪ್ರತಿಭಟನೆಯಲ್ಲಿ ಸಿಪಿಐ ತಾಲೂಕು ಕಾರ್ಯದರ್ಶಿ ಮಹಮ್ಮದ್, ನಗರ ಕಾರ್ಯದರ್ಶಿ ಸಾಜಿದ್ ಅಹಮದ್ ಚೌದರಿ, ರಾಘವೇಂದ್ರ ಹಂಗರಗಿ, ಮಲ್ಲಿಕಾರ್ಜುನ ಕಲ್ಲಹಂಗರಗಾ, ಸೈಯದ್ ಜಾಫರ್ ಹುಸೈನ್ ಆಂದೋಲ, ಶಹಬುದ್ದೀನ್ ಕುಕನೂರ್, ಮಲ್ಲಣ್ಣ ಮುತ್ತಕೋಡ, ಶರಣಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...