ಕಲಬುರಗಿ | ಎಸ್ಟಿ ಪ್ರಮಾಣ ಪತ್ರ ವಿತರಣೆಗೆ ಆಗ್ರಹಿಸಿ ತಳವಾರ ಸಮುದಾಯ ರಸ್ತೆ ತಡೆದು ಪ್ರತಿಭಟನೆ

Date:

ಜಿಲ್ಲೆಯಲ್ಲೂ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿ ರಾಜ್ಯ ತಳವಾರ, ಪರಿವಾರ ಎಸ್ಟಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಮುದಾಯದ ಸಾವಿರಾರು ಜನರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿಯ ಮುಚ್ಚಿದ ಗೇಟಿಗೆ ಬ್ಯಾನರ್ ಕಟ್ಟಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಸಿಲಿನ ತಾಪ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕೆಲವೇ ನಿಮಿಷಗಳಲ್ಲಿ ರಸ್ತೆಯ ಮಧ್ಯದಲ್ಲೇ ಶಾಮಿಯಾನ ಅಳವಡಿಸಿ ಪ್ರತಿಭಟನೆ ಮುಂದುವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದೆ ವೇಳೆ ಪ್ರತಿಭಟನಾಕಾರರು ಮಾತನಾಡಿ “ಬಿಜೆಪಿ ಸರ್ಕಾರವು 2020ರಲ್ಲಿ ತಳವಾರ ಮತ್ತು ಪರಿವಾರ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಿ ಆದೇಶ ಹೊರಡಿಸಿತ್ತು. ಅದರಂತೆ 2022ರ ಅಕ್ಟೋಬರ್‌ನಲ್ಲಿ ಈ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಡಲಾಗಿದೆ. ಆದರೂ ಕಲಬುರಗಿ ಜಿಲ್ಲೆಯಲ್ಲಿ ಮಾತ್ರ ಉದ್ದೇಶಪೂರ್ವಕವಾಗಿ ಎಸ್‌ಟಿ ಪ್ರಮಾಣಪತ್ರ ವಿತರಣೆಯನ್ನು ನಿಲ್ಲಿಸಲಾಗಿದೆ” ಎಂದು ಆರೋಪಿಸಿದರು.

ರಾಜ್ಯದ ಇತರೆ ಜಿಲ್ಲೆಗಳಲ್ಲಿ ತಳವಾರ ಸಮುದಾಯದವರಿಗೆ ಎಸ್ಟಿ ಪ್ರಮಾಣಪತ್ರ ನೀಡಲಾಗುತ್ತಿದ್ದು, ಕಲಬುರಗಿಯಲ್ಲಿ ಮಾತ್ರ ವಿಳಂಬ ಮಾಡುತ್ತಿರುವುದು ಏಕೆ ಎಂಬ ಪ್ರಶ್ನೆಯನ್ನು ಅವರು ಎತ್ತಿದರು.

ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೂಚನೆಯಂತೆ ಪ್ರಮಾಣಪತ್ರ ವಿತರಣೆ ತಡೆಹಿಡಿದಿದ್ದಾರೆಯೇ ಎಂಬ ಅನುಮಾನವೂ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ತಕ್ಷಣವೇ ಕಲಬುರಗಿ ಜಿಲ್ಲೆಯಲ್ಲೂ ಎಸ್ಟಿ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆ ಆರಂಭಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಬಳ್ಳಾರಿ ಕುಡಿತಿನಿಯಲ್ಲಿ ರೈತರ ಬಂಧನ ಖಂಡನೆ: ಕೆಪಿಆರ್‌ಎಸ್ ಆಕ್ರೋಶ

ಅಗತ್ಯ ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಹೋರಾಟ ಸಮಿತಿ ಎಚ್ಚರಿಕೆ ನೀಡಿತು.

ಈ ಸಂದರ್ಭದಲ್ಲಿ ತಳವರ ಸಮುದಾಯದ ಮುಖಂಡರು ಸೇರಿದಂತೆ ಅನೇಕ ಸಮುದಾಯ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಕಲಬುರಗಿ | ಡಿ.12ರಿಂದ ಮೂರು ದಿನ ರಾಜ್ಯಮಟ್ಟದ ರೈತ ಸಮಾವೇಶ, ಕೃಷಿಮೇಳ

ನವ ಕರ್ನಾಟಕ ರೈತ ಸಂಘದ ವತಿಯಿಂದ ನಗರದ ಸುಮಾರು 18 ಎಕರೆ...