ಕಲಬುರಗಿ | ಪಿಎಸ್‌ಐ ಹಗರಣ; ಜೈಲಲ್ಲಿ ಆರ್ ಡಿ ಪಾಟೀಲ ಮತ್ತೆ ಕಿರಿಕ್

Date:

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿರುವ ಆರ್.ಡಿ. ಪಾಟೀಲ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೊಂದಿಗೆ ಮತ್ತೆ ಕಿರಿಕ್‌ ಮಾಡಿಕೊಂಡಿರುವ ಘಟನೆ ನಡೆದಿದೆ.

- Advertisement -

ಹಿರಿಯ ಅಧಿಕಾರಿಗಳ ಸೂಚನೆಯಂತೆ ಶನಿವಾರ ಜೈಲು ಸಿಬ್ಬಂದಿ ಬ್ಯಾರೆಕ್ ತಪಾಸಣೆ ನಡೆಸುತ್ತಿದ್ದ ವೇಳೆ, ಆರ್.ಡಿ. ಪಾಟೀಲ ಅವರು ತಪಾಸಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನನ್ನ ಬ್ಯಾರೆಕ್ ತಪಾಸಣೆಗೆ ಅನುಮತಿ ಇದೆಯೇ? ಎಂದು ಪ್ರಶ್ನಿಸಿದ ಅವರು, ಅನುಮತಿ ಇಲ್ಲದೆ ತಪಾಸಣೆ ನಡೆಸಲು ಬಿಡುವುದಿಲ್ಲ ಎಂದು ಜೈಲು ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಕಲಬುರಗಿ | ಅಪಘಾತದ ಸ್ಥಳದಲ್ಲೇ ರಸ್ತೆ ತಡೆದು ದಿಢೀರ್ ಪ್ರತಿಭಟನೆ; 50ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು

ಈ ಘಟನೆ ಸಂಬಂಧ ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಆರ್. ಅನಿತಾ ಅವರು ಫರಹತಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗುವ ವೇಳೆ ಕೂಡ ಆರ್ ಡಿ ಪಾಟೀಲ್ ಅವರು ಜೈಲು ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದರು. ಆ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ಹಾಗೂ ನೂಕಾಟ, ತಳ್ಳಾಟ ನಡೆದಿದ್ದು, ಜೈಲು ಅಧಿಕಾರಿಗಳು ಹಾಗೂ ಆರ್ ಡಿ ಪಾಟೀಲ್ ಪರಸ್ಪರವಾಗಿ ದೂರು ದಾಖಲಿಸಿದ್ದರು. ಈ ಕುರಿತು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...