ಕಲಬುರಗಿ | ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು, ₹1.25 ಲಕ್ಷ ದಂಡ

Date:

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.25 ಲಕ್ಷ ದಂಡ ವಿಧಿಸಿ ಕಲಬುರಗಿಯ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಕಾಳಗಿ ತಾಲೂಕಿನ ರಟಕಲ್ ನಿವಾಸಿ ಸಾಬಣ್ಣ ಕಟ್ಟಿಮನಿ (23) ಶಿಕ್ಷೆಗೆ ಗುರಿಯಾದ ಆರೋಪಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಗೆ ಪ್ರೀತಿ ಹಾಗೂ ಮದುವೆಯ ಭರವಸೆ ನೀಡಿ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಪ್ರಕರಣದಲ್ಲಿ ತಿಳಿದುಬಂದಿದೆ.

2024ರ ಅಕ್ಟೋಬರ್ 15ರಂದು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದ ಆರೋಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೂದಿಗೆರೆ ಗ್ರಾಮದ ಬಾಡಿಗೆ ಮನೆಯಲ್ಲಿ ಇರಿಸಿ ಬೆದರಿಕೆ ಹಾಕಿದ್ದನು. ಅಕ್ಟೋಬರ್ 16ರಿಂದ 31ರವರೆಗೆ ಸುಮಾರು 15 ದಿನಗಳ ಕಾಲ ಬಾಲಕಿಯನ್ನು ಬಂಧನದಲ್ಲಿಟ್ಟು ಲೈಂಗಿಕ ದೌರ್ಜನ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ರಾಘವೇಂದ್ರ ಹೆಚ್.ಎಸ್. ತನಿಖೆ ನಡೆಸಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿಯ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ವಿಶೇಷ ಪೋಕ್ಸೋ) ನ್ಯಾಯಾಧೀಶ ಮುಹಮ್ಮದ್ ಮುಜೀರ್ ಉಲ್ಲಾ ಸಿ.ಜಿ., ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ, ಪೋಕ್ಸೋ ಕಾಯ್ದೆ ಕಲಂ 6ರ ಅಡಿಯಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ, ಬಿಎನ್‌ಎಸ್ ಕಲಂ 137(2) ಅಡಿಯಲ್ಲಿ 2 ವರ್ಷ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ಆದೇಶಿಸಿದರು. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ ಶಿಕ್ಷೆಯನ್ನೂ ವಿಧಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಲಾರಿ,ಬಸ್,ಆಟೋ ನಡುವೆ ಭೀಕರ ಅಪಘಾತ: 13 ಮಂದಿ ಗಂಭೀರ ಗಾಯ

ಇದೇ ವೇಳೆ, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...