ಕಲಬುರಗಿ | ಆರ್.​ಡಿ ಪಾಟೀಲ್ ಅವ​ರನ್ನೂ ಶೀಘ್ರವೇ ಬಂಧಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

Date:

ಪಿಎಸ್ಐ ಅಕ್ರಮದಲ್ಲಿ ಬಂಧನಕ್ಕೊಳಗಾದ ಆರೋಪಿಗಳನ್ನು ಬಿಡಿಸಲು ಖುದ್ದು ಬಿಜೆಪಿಯ ಹಾಲಿ ಶಾಸಕರೊಬ್ಬರು ಕರೆ ಮಾಡಿದ್ದರು. ಆದರೆ, ಈಗ ಕಾಂಗ್ರೆಸ್​ ಮೇಲೆ ಆರೋಪ ಮಾಡುತ್ತಿದ್ದಾರೆ. ಆರೋಪ ಮಾಡುವ ಮುನ್ನ ಬಿಜೆಪಿ ನಾಯಕರು ಹೋಂವರ್ಕ್ ಮಾಡಿಕೊಂಡು ಬರಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ.

- Advertisement -

ಕಲಬುರಗಿಯಲ್ಲಿ ಮಾದ್ಯಮಗಳೊಂದಿಗೆ ಅವರು ಮಾತನಾಡಿದರು. “ಆರ್.ಡಿ ಪಾಟೀಲ್ ಇರಲಿ ಬೇರೆ ಯಾರೇ ಇರಲಿ, ತಪ್ಪು ಮಾಡಿದವರನ್ನು ಕಾಂಗ್ರೆಸ್​ ಸರ್ಕಾರ ಬಿಡುವುದಿಲ್ಲ. ಕಳೆದ ನಾಲ್ಕು ದಿನಗಳಲ್ಲಿ ಅಕ್ರಮದಲ್ಲಿ ಭಾಗಿಯಾದ 20ಕ್ಕೂ ಅಧಿಕ ಜನರನ್ನು ಬಂಧಿಸಿದ್ದೇವೆ. ಆರ್.​ಡಿ. ಪಾಟೀಲ್ ಅವ​ರನ್ನು ಕೂಡಾ ಶೀಘ್ರವೇ ಬಂಧಿಸುತ್ತೇವೆ. ಆರ್​ಡಿಪಿ ಇರುವ ಸ್ಥಳದ ಮಾಹಿತಿ ಸಿಕ್ಕಿದೆ ಕೂಡಲೇ ಬಂಧಿಸಲಾಗುವುದು. ಪೊಲೀಸ್​ ಅಧಿಕಾರಿಗಳು ಆರೋಪಿ ಬಂಧನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದರೂ ಆರ್.ಡಿ. ಪಾಟೀಲ್ ತಪ್ಪಿಸಿಕೊಂಡಿದ್ದಾರೆ. ಅಧಿಕಾರಿಗಳ ಪಾತ್ರ ಇದ್ದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಪ್ರಥಮ ಬಾರಿಗೆ ಇಷ್ಟು ಬಿಗಿ ಭದ್ರತೆ ನಡುವೆ ಪ್ರಾಮಾಣಿಕ ಪರೀಕ್ಷೆ ನಡೆಸಿದ್ದೇವೆ. ಹ್ಯಾಂಡ್​ ವೈಡ್​ ಡಿವೈಸರ್ ಅಳವಡಿಕೆ, 800 ಮೀಟರ್​ನಲ್ಲಿನ ಲಾಡ್ಜ್​ಗಳ ಪರಿಶೀಲನೆ. ವಾಹನ ಪಾರ್ಕಿಂಗ್​ ತಪಾಸಣೆ ಸೇರಿ ಹತ್ತು ಹಲವಾರು ಮುಂಜಾಗ್ರತಾ ಕ್ರಮ ಜರುಗಿಸಿದ್ದು, ಇದೆ ಪ್ರಥಮ ಬಾರಿ. ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ಅಕ್ರಮ ನಡೆದಾಗ ಸದನದಲ್ಲಿ ಅಕ್ರಮ ನಡೆದಿಲ್ಲ ಎಂದರು. ಮುಖ್ಯಮಂತ್ರಿ ಗೃಹಮಂತ್ರಿಗಳಿಗೆ ಭೇಟಿಯಾಗಲು ಅಭ್ಯರ್ಥಿಗಳು ಚಪ್ಪಲಿ ಹರಿದುಕೊಂಡು ಸುಸ್ತಾದ ಬಳಿಕ, ಏಳು ತಿಂಗಳ ನಂತರ ಅಕ್ರಮದ ಬಗ್ಗೆ ಒಪ್ಪಿಕೊಂಡರು” ಎಂದು ಹೇಳಿದ್ದಾರೆ.

ಆದರೆ, ನಾವು ಕೇವಲ 24 ತಾಸಿನಲ್ಲಿ ಆರೋಪಿಗಳನ್ನು ಬಂಧನ ಮಾಡಿದ್ದೇವೆ. ಮುಂಜಾಗ್ರತಾ ಕ್ರಮ ಜರುಗಿಸಿ ಸುಮ್ಮನೆ ಕುಳಿತಿಲ್ಲ, ಅಕ್ರಮ ನಡೆದಾಗ ಶೀಘ್ರವೇ ಕ್ರಮ ಕೈಗೊಂಡು ಅಕ್ರಮದಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸುತ್ತೇವೆ. ಅಕ್ರಮದ ಕುರಿತಾಗಿ ಸಿಎಂ ಹೋಂ ಮಿನಿಸ್ಟರ್ ಎಲ್ಲರೂ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಅವರಂತೆ ಮೈಮೇಲೆ ಎಣ್ಣೆ ಹಾಕಿಕೊಂಡು ಕುಳಿತಿಲ್ಲ. ನಮ್ಮ ಜವಾಬ್ದಾರಿ ನಾವು ನಿಭಾಯಿಸುತ್ತಿದ್ದೇವೆ. ಏನಾದರೂ ಮಾಹಿತಿ ಇದ್ದರೆ ಕೊಡಲಿ. ಅದನ್ನು ಬಿಟ್ಟು ಬಿಜೆಪಿ ಅವರು ಕೇವಲ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಲಿ‌ ಎಂದು ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...