ಕಲಬುರಗಿ | ಒಳ ಮೀಸಲಾತಿ ರೋಸ್ಟರ್ ವಿರುದ್ಧ ಬಲಗೈ ಸಮುದಾಯದ ಕಿಡಿ: ರಸ್ತೆ ತಡೆದು ಸರ್ಕಾರಕ್ಕೆ ಎಚ್ಚರಿಕೆ

Date:

ಒಳ ಮೀಸಲಾತಿಯಲ್ಲಿ ರೋಸ್ಟರ್ ಬಿಂದುವಿನ ಆಧಾರದ ಮೇಲೆ ಬಲಗೈ ಸಮುದಾಯದ ಜಾತಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ‘ಒಳ ಮೀಸಲಾತಿ ಬಲಗೈ ಹೋರಾಟ ಸಮಿತಿ, ಕಲಬುರಗಿ ವತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಪ್ರತಿಭಟನೆ ಉದ್ದೇಶಿಸಿ ದಸಂಸ ಹಿರಿಯ ಮುಖಂಡ ಅರ್ಜುನ ಭದ್ರೆ ಮಾತನಾಡಿ, ‘ರಾಜ್ಯ ಸರ್ಕಾರವು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಿರುವ ಅನುಸೂಚಿತ ಜಾತಿಗಳ ವಿಧೇಯಕ–2025 ಅನ್ನು ರಾಜ್ಯಪಾಲರು ತಿರಸ್ಕರಿಸಬೇಕು. ಒಳ ಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆಯಲ್ಲಿ ಹಲವು ಗೊಂದಲಗಳು ಮತ್ತು ಅಸ್ಪಷ್ಟತೆಗಳಿವೆ. ರೋಸ್ಟರ್ ಬಿಂದುವಿನ ಅನ್ವಯಿಕೆಯಲ್ಲಿ ತಾರತಮ್ಯ ಉಂಟಾಗಿದ್ದು, ಇದರಿಂದ ಕೆಲ ಜಾತಿಗಳಿಗೆ ಅವಕಾಶಗಳು ಕಡಿಮೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ,’ ಎಂದು ಆರೋಪಿಸಿದರು.

1449647 1

‘ಒಳ ಮೀಸಲಾತಿ ಕುರಿತ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾದ ಸಮಸ್ಯೆಗಳು ಹಾಗೂ ಅಸಮಾನತೆಗಳು ಸಂಪೂರ್ಣವಾಗಿ ಬಗೆಹರಿಯುವ ತನಕ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ಕ್ರಮಗಳಿಗೆ ತಾತ್ಕಾಲಿಕ ತಡೆ ನೀಡಬೇಕು. ಇಲ್ಲವಾದಲ್ಲಿ ಬಲಗೈ ಸಮುದಾಯದ ವಿದ್ಯಾರ್ಥಿಗಳು ಮತ್ತು ಉದ್ಯೋಗಾರ್ಥಿಗಳು ಹಾನಿಗೊಳಗಾಗುವ ಸಾಧ್ಯತೆ ಇದೆ,’ ಎಂದು ಎಚ್ಚರಿಸಿದರು.

ಹಾಗೆಯೇ, ‘ಹೊಸ ಜಾತಿ ಪ್ರಮಾಣಪತ್ರಗಳ ವಿತರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಿ, ಹಳೆಯ ಜಾತಿ ಪ್ರಮಾಣಪತ್ರಗಳನ್ನೇ ಮುಂದುವರಿಸಬೇಕು ಎಂದು ಮನವಿ ಮಾಡಿದರು. ಹೊಸ ಪ್ರಮಾಣಪತ್ರಗಳ ಜಾರಿಯಿಂದ ಅನೇಕ ಕುಟುಂಬಗಳು ತೊಂದರೆಗೆ ಒಳಗಾಗುತ್ತಿವೆ’ ಎಂದು ಹೇಳಿದರು.

1449725

‘ಒಳ ಮೀಸಲಾತಿಗೆ ಅನ್ವಯಿಸಿರುವ ರೋಸ್ಟರ್ ಬಿಂದುವನ್ನು ಮರುಪರಿಶೀಲಿಸಿ ಪರಿಷ್ಕರಿಸಬೇಕು. ಸಮಿತಿಯಲ್ಲಿನ ಗೊಂದಲಗಳು ಹಾಗೂ ಅಸಮಾಧಾನಗಳಿಗೆ ಶೀಘ್ರ ಪರಿಹಾರ ಕಂಡುಹಿಡಿಯಬೇಕು. ಅಂತಿಮ ನಿರ್ಧಾರವಾಗುವ ತನಕ ಹಳೆಯ ಮೀಸಲಾತಿ ನಿಯಮಗಳ ಆಧಾರದಲ್ಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.

ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಹೋರಾಟವನ್ನು ಹಂತ ಹಂತವಾಗಿ ತೀವ್ರಗೊಳಿಸುವುದೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡುವುದರ ಮೂಲಕ ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಕೋಮುವಾದಿ, ಜಾತಿವಾದಿ ಶಕ್ತಿಗಳನ್ನು ತಡೆಯಲು ಐಕ್ಯ ಹೋರಾಟ ಅಗತ್ಯ; ಮಲ್ಲಿಕಾರ್ಜುನ ಸತ್ಯಂಪೇಟೆ

ಪ್ರತಿಭಟನೆಯಲ್ಲಿ ಎಬಿ ಹೊಸಮನಿ, ಮಹಾದೇವ ಮೋಘಾ, ದೇವೇಂದ್ರ ಸಿನ್ನೂರು, ಅಮೃತ ಸಾಗರ್, ಹಣಮಂತ ಬೋಧನಕರ್, ಸಿದ್ದರಾಮ ಪ್ಯಾಟೆ, ಮಲ್ಲಪ್ಪ ಹೊಸಮನಿ, ಸಂಪತಕುಮಾರ ವಳಕೇರಿ, ವಿಶಾಲ ದರ್ಗಿ, ಎಸ್‌.ಎಸ್‌. ತಾವಡೆ, ದಿಗಂಬರ ಬೆಳಮಗಿ, ಜೈಭೀಮ್, ಮಲ್ಲಿಕಾರ್ಜುನ್ ಮದಾನಿ, ಸಂತೋಷ್ ಮೇಲಿನಮನಿ, ದೇವಪ್ಪ, ಅರ್ಜುನ್ ಎನ್‌ ಕೆ, ಧರ್ಮಣ್ಣ ಕೋಣೆಕರ, ಹಣಮಂತರಾವ್ ದೊಡ್ಡಮನಿ, ದಿನೇಶ ದೊಡ್ಡಮನಿ, ಮಜುನಾಥ ಬಂಡಾರಿ, ಅನಿಲ್ ಟೆಂಗಳಿ, ಹಣಮಂತ ಇಟಗಿ, ಸೇರಿದಂತೆ ಹಲವು ಮುಖಂಡರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...