ಕಲಬುರಗಿ | ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮಹತ್ಯೆ

Date:

ನಗರದ ಹೊರವಲಯದ ಅಷ್ಟಗಾ ಗ್ರಾಮದ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಹಿರಿಯ ಪತ್ರಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ಮೃತರನ್ನು ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದ ಮೂಲ ನಿವಾಸಿ, ಸದ್ಯ ಕಲಬುರಗಿ ನಗರದ ಬಸ್ ಡಿಪೊ–2ರ ಸಮೀಪ ವಾಸಿಸುತ್ತಿದ್ದ ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ (52) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅವರು ವಿಜಯ ಕರ್ನಾಟಕ ದಿನಪತ್ರಿಕೆಯ ಕಲಬುರಗಿ ಸ್ಥಾನಿಕ ಕಚೇರಿಯಲ್ಲಿ ಮುಖ್ಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಅವರು ಅನೇಕ ಕೃತಿಗಳನ್ನು ರಚಿಸಿದ್ದರು. ಎರಡು ವರ್ಷಗಳ ಹಿಂದೆ ನಡೆದ ಆಳಂದ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು.

ಮೃತರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಜೀವ ಬೆದರಿಕೆ ಹಾಕಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು

ಮೃತ ಪತ್ರಕರ್ತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಿರಿಯ ಪತ್ರಕರ್ತರು, ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ನಾಳೆ ʼಕಲಬುರಗಿ ಚಲೋʼ

ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ ಸೆ.27ರಂದು ಕಲಬುರಗಿಯಲ್ಲಿ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...

ಕಲಬುರಗಿ | ಎಸ್‌ಐಆರ್: ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಪರಿಶೀಲನೆ ನಡೆಸಲಿ: ಬಹುಭಾಷ ನಟ ಪ್ರಕಾಶ್ ರೈ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳಿಗೆ...

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...