ತಾಲೂಕಿನ ಜಂಬಗಾ (ಬಿ) ಗ್ರಾಮದ ಸಮೀಪ ವಲಸೆ ಕುರಿಗಾಹಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ನಿವಾಸಿ ಬಂಡು ತಾಂಬೆ (24) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಹರಿತವಾದ ಆಯುಧದಿಂದ ಹೊಟ್ಟೆ ಭಾಗಕ್ಕೆ ಚುಚ್ಚಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಸಬರ್ಬನ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ನಟರಾಜ ಲಾಡೆ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನು ಓದಿದ್ದೀರಾ? ಬೀದರ್ | ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆಗೈದ 58 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.





