ಕಲಬುರಗಿ | ಮೂಲಸೌಕರ್ಯಕ್ಕಾಗಿ ಪಾಲಿಕೆ ಎದುರು ಸ್ಲಂ ನಿವಾಸಿಗಳ ಪ್ರತಿಭಟನೆ

Date:

ನಗರದ ವಾರ್ಡ್ ನಂ. 2ರ ರಾಮನಗರ ಭಾಗ-2ರಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯ, ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದರ ಜೊತೆಗೆ, ಪ್ರದೇಶವನ್ನು ಕೊಳೆಗೇರಿ ಎಂದು ಘೋಷಿಸಲು ಅಗತ್ಯವಾದ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡುವಂತೆ ಸ್ಲಂ ಜನಾಂದೋಲನ ಕರ್ನಾಟಕದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಧರಣಿ ನಡೆಸಿದರು.

- Advertisement -

ಗುರುವಾರ ಧರಣಿ ನಡೆಸಿದ ನಿವಾಸಿಗಳು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು. ರಾಮನಗರದಲ್ಲಿ ಅಲೆಮಾರಿ ಸಮುದಾಯ, ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತರ 80ರಿಂದ 90 ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿವೆ. ಆದರೆ, ಈವರೆಗೆ ಕುಡಿಯುವ ನೀರು, ವಿದ್ಯುತ್ ಹಾಗೂ ಮಹಿಳೆಯರಿಗೆ ಶೌಚಾಲಯದಂತಹ ಅಗತ್ಯ ಸೌಲಭ್ಯಗಳು ಲಭ್ಯವಿಲ್ಲ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಈ ಪ್ರದೇಶವನ್ನು ಕೊಳೆಗೇರಿ ಎಂದು ಘೋಷಿಸಲು ಮಹಾನಗರ ಪಾಲಿಕೆಗೆ ಎನ್ ಒಸಿ ನೀಡುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ವಿಳಂಬ ಮಾಡಿದ್ದಾರೆ ಮಾಡುತ್ತಿದ್ದಾರೆ. ನಿವಾಸಿಗಳು ಕತ್ತಲಲ್ಲೇ ಬದುಕುವ ಪರಿಸ್ಥಿತಿಯಿದ್ದು, ಕುಡಿಯುವ ನೀರಿಗಾಗಿ ಮನೆಮನೆಗೆ ತೆರಳಿ ಬೇಡಿಕೊಳ್ಳಬೇಕಾಗಿದೆ. ಹಾವು, ಚೇಳುಗಳ ಭೀತಿಯಲ್ಲಿಯೂ ಜೀವನ ನಡೆಸಿದೆ ಎಂದು ಮನವಿಯಲ್ಲಿದೆ.

ಈ ಪ್ರದೇಶವನ್ನು ಕೊಳೆಗೇರಿ ಎಂದು ಘೋಷಿಸಲು ಮಹಾನಗರ ಪಾಲಿಕೆಗೆ ಎನ್ ಒಸಿ ನೀಡುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ವಿಳಂಬ ಮಾಡಿದ್ದಾರೆ ಮಾಡುತ್ತಿದ್ದಾರೆ. ನಿವಾಸಿಗಳು ಕತ್ತಲಲ್ಲೇ ಬದುಕುವ ಪರಿಸ್ಥಿತಿಯಿದ್ದು, ಕುಡಿಯುವ ನೀರಿಗಾಗಿ ಮನೆಮನೆಗೆ ತೆರಳಿ ಬೇಡಿಕೊಳ್ಳಬೇಕಾಗಿದೆ. ಹಾವು, ಚೇಳುಗಳ ಭೀತಿಯಲ್ಲಿಯೂ ಜೀವನ ನಡೆಸಿದೆ ಎಂದು ಮನವಿಯಲ್ಲಿದೆ. ಜೊತೆಗೆ, ಗುಡಿಸಲು ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದಲ್ಲದೆ, ಆಹಾರ ಇಲಾಖೆಯ ಡಿಎಂ ಅವರು ಮಹಾನಗರ ಪಾಲಿಕೆಯ ಅನುಮತಿ ಪಡೆಯುತ್ತಾರೆ ಅಲೆಮಾರಿ ಸಮುದಾಯ ವಾಸಿಸುವ ಸ್ಥಳದ ಸುತ್ತಲೂ ಟಿನ್ ಶೀಟ್‌ಗಳಿಂದ ಕಂಪೌಂಡ್ ನಿರ್ಮಿಸಲಾಗಿದೆ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಕಾನೂನುಬಾಹಿರವಾಗಿ ನಿರ್ಮಿಸಿರುವ ಟಿನ್ ಶೀಟ್‌ಗಳನ್ನು ಹೊಂದಿರಬೇಕು. ನಿವಾಸಿಗಳಿಗೆ ಕುಡಿಯುವ ನೀರು, ವಿದ್ಯುತ್ ಮತ್ತು ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ಧರಣಿಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕದ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ, ಜಿಲ್ಲಾ ಅಧ್ಯಕ್ಷೆ ಗೌರಮ್ಮ ಮಾಕಾ, ಸುನಿತಾ ಕೊಳ್ಳೂರ, ಶರಣು ಕಣ್ಣಿ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಂಬಿಕೆ, ವಿಶ್ವಾಸದಿಂದ ಸಹಕಾರ ರಂಗ ಸುದೃಢ: ಕಾರ್ತಿಕ್ ಕುಮಾರ್

ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಸ್ಪರ್ಧೆ ನೀಡುತ್ತಿರುವ ಸಹಕಾರಿ ರಂಗವು ಜನರ ನಂಬಿಕೆ ಮತ್ತು...

ದಾಂಡೇಲಿ, ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ನವೆಂಬರ್.20ರಂದು ವಿದ್ಯುತ್ ವ್ಯತ್ಯಯ

ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ವಿವಿಧೆಡೆ 11 ಕೆ.ವಿ ವಿದ್ಯುತ್ ಮಾರ್ಗ...

ಕೋಲಾರ | ಶಾಹಿ ಗಾರ್ಮೆಂಟ್ಸ್ ವೇತನ ತಾರತಮ್ಯ ಸಲ್ಲದು; ಮೂಲಸೌಕರ್ಯ ಕಲ್ಪಿಸದಿದ್ದರೆ ಕಠಿಣ ಕ್ರಮ : ಡಿಸಿ ರವಿಕುಮಾರ್

ಕೋಲಾರದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರ ವೇತನ ತಾರತಮ್ಯ...

ಕುಮಟಾ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಖಂಡಿಸಿ...