ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

Date:

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ ಪ್ರತಿ ಟನ್‌ಗೆ ₹5,500 ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದ ಸಮೀಪ ಕಳೆದ ಮಂಗಳವಾರದಿಂದ ನಡೆಯುತ್ತಿದ್ದ ರೈತರ ಪ್ರತಿಭಟನೆಯನ್ನು ಸೋಮವಾರ ಹಿಂಪಡೆಯಲಾಯಿತು.

- Advertisement -

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಭರವಸೆ ಹಾಗೂ ರೈತರ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸದ ಹಿನ್ನೆಲೆಯಲ್ಲಿ ಏಳು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಯನ್ನು ರೈತರು ಹಿಂಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಮಹೇಶಗೌಡ ಸುಬೇದಾರ್ ನೇತೃತ್ವದಲ್ಲಿ ರೈತ ಮುಖಂಡರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರಿಗೆ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಿದರು.

ನವೆಂಬರ್ 26ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಕಬ್ಬಿನ ದರ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಸಭೆಯಲ್ಲಿ ನಿಗದಿಪಡಿಸುವ ದರವನ್ನು ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳಿಗೂ ಅನ್ವಯಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.

ಕಬ್ಬಿಗೆ ಪ್ರತಿ ಟನ್‌ಗೆ ₹5,500, ತೊಗರಿಗೆ ಪ್ರತಿ ಕ್ವಿಂಟಲ್‌ಗೆ ₹15,000 ಹಾಗೂ ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ನಿಗದಿಪಡಿಸಬೇಕು. ಇತರ ಬೆಳೆಗಳಿಗೂ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ವೈಜ್ಞಾನಿಕ ಬೆಲೆ ನೀಡಬೇಕು.ಕಬ್ಬು ಕಟಾವು ಮತ್ತು ಸಾಗಣೆ ವೆಚ್ಚವನ್ನು ಭರಿಸುವುದು, ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿ ಪ್ರಮಾಣದಲ್ಲಿನ (ರಿಕವರಿ) ವ್ಯತ್ಯಾಸಗಳನ್ನು ಸರಿಪಡಿಸುವುದು, ಎಥನಾಲ್ ಕೋಟಾ ನಿಗದಿಪಡಿಸುವುದು ಮತ್ತು ವಿದ್ಯುತ್‌ನಿಂದ ಹಾನಿಗೊಳಗಾದ ಕಬ್ಬಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ರೈತರ ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, “ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಮಳೆ ಮತ್ತು ನೀರಿನ ಕೊರತೆಯೊಂದಿಗೆ ಗೊಬ್ಬರ, ಬೀಜ ಹಾಗೂ ಕೀಟನಾಶಕಗಳ ಬೆಲೆ ಏರಿಕೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯದಿರುವುದು ಹಾಗೂ ತೊಗರಿ ಸೇರಿದಂತೆ ವಿವಿಧ ಬೆಳೆಗಳ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ” ಎಂದು ತಿಳಿಸಿದರು.

ಇದನ್ನೂ ಓದಿ : ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಡಿಸಿಪಿ ಶಾಲೂ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜೆಸ್ಕಾಂ ಮುಖ್ಯ ಎಂಜಿನಿಯರ್ ವೆಂಕಟೇಶ್ ಹಾಗೂ ರೈತ ಮುಖಂಡರಾದ ಗುಳ್ಳಪ್ಪಗೌಡ ಪಾಟೀಲ್, ಬಸವರಾಜ ಕೋರಿ, ವಿಜಯಕುಮಾರ ಮುಷ್ಟೂರು, ವೀರೇಶ ದೊಡ್ಡಮನಿ, ಜಗದೀಶ ಪಾಟೀಲ ರಾಜಾಪುರ, ಸಿದ್ದರಾಮ ಪಾಟೀಲ್, ವೀರೇಶ್ ಸಾಹುಕಾರ, ಉಮಾಪತಿ ಪಾಟೀಲ, ರಮೇಶ ಹೂಗಾರ, ಸಿದ್ದು ಎಸ್.ಎಲ್., ಕರೆಪ್ಪ ಕರಗೊಂಡ, ಅಶೋಕ ಹೂಗಾರ, ಪಿಡ್ಡಪ್ಪ ಜಾಲಗಾರ, ಬಸವರಾಜ ಚಾನಕೋಟೆ, ಶರಣಗೌಡ ಮಾಲಿಪಾಟೀಲ, ಸಿದ್ದು ಹಿರೇಮಠ, ಮಹಾನಂದ ಪಡಶೆಟ್ಟಿ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...