ಕಲಬುರಗಿ | ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

Date:

ಸೇಡಂ ನಗರದ ವಿಶ್ವನಗರದಲ್ಲಿರುವ ಮೆಟ್ರಿಕ್ ನಂತರದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬುಧವಾರ ಬೆಳಕಿಗೆ ಬಂದಿದೆ.

- Advertisement -

ಮೃತ ವಿದ್ಯಾರ್ಥಿನಿಯನ್ನು ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದ ಚಂದ್ರಿಕಾ ತಿಪ್ಪೇಸ್ವಾಮಿ (19) ಎಂದು ಗುರುತಿಸಲಾಗಿದೆ. ಆಕೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್‌ಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು, ಬಿಸಿಎಂ ವಸತಿ ನಿಲಯದಲ್ಲಿ ವಾಸವಾಗಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಜ್ಞಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಆರೋಗ್ಯ ಸಮಸ್ಯೆಯಿಂದಾಗಿ ಚಂದ್ರಿಕಾ ಪ್ರತ್ಯೇಕ ಕೋಣೆಯಲ್ಲಿ ವಾಸವಾಗಿದ್ದಳು ಎಂದು ತಿಳಿದುಬಂದಿದೆ. ಬುಧವಾರ ಬೆಳಿಗ್ಗೆ 10 ಗಂಟೆಯ ಬಳಿಕ ವಸತಿ ನಿಲಯದಲ್ಲಿ ಯಾರೂ ಇಲ್ಲದ ವೇಳೆ ಆಕೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿದ ಬಳಿಕವೇ ಸಾವಿನ ಹಿಂದಿನ ಕಾರಣ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ವಿಚಾರಣೆಗೆ ಹೋದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಕುಟುಂಬಸ್ಥರ ಗಂಭೀರ ಆರೋಪ

ಘಟನಾ ಸ್ಥಳಕ್ಕೆ ಸಿಪಿಐ ಮಹಾದೇವ ದಿಡ್ಡಿಮನಿ ಹಾಗೂ ಪಿಎಸ್‌ಐ ಉಪೇಂದ್ರ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ನಾಳೆ ʼಕಲಬುರಗಿ ಚಲೋʼ

ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ ಸೆ.27ರಂದು ಕಲಬುರಗಿಯಲ್ಲಿ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...