ಕಲಬುರಗಿ | ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ, ಸಂಸ್ಕಾರ ಅಗತ್ಯ : ವಿನಯ್ ಶುಕ್ಲಾ

Date:

ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಜೊತೆ ಭಾರತೀಯ ಸಂಸ್ಕಾರಗಳನ್ನು ಬೆಳೆಸುವುದೇ ನಮ್ಮ ಸಂಸ್ಥೆಯ ಮುಖ್ಯ ಗುರಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿನಯ್ ಶುಕ್ಲಾ ಹೇಳಿದರು.

- Advertisement -

ನಗರದ ಶಹಬಜಾರ್ ನಾಕಾದಲ್ಲಿರುವ ಶುಕ್ಲಾ ಇಂಗ್ಲಿಷ್ ಮೀಡಿಯಂ ಶಾಲೆಯ ಒಂಬತ್ತನೇ ವರ್ಷದ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ʼಜಾತಿ-ಭೇದ ಮರೆತು ಪ್ರತಿಯೊಬ್ಬ ಮಗು ವಿಶ್ವಮಾನವನಾಗಿ ಬೆಳೆಯಬೇಕು. ಪಾಲಕರು ಮಕ್ಕಳಲ್ಲಿನ ಬದಲಾವಣೆಗಳ ಬಗ್ಗೆ ಗಮನ ಹರಿಸಬೇಕು. ಶಿಕ್ಷಕರು ಮತ್ತು ಪಾಲಕರು ಒಟ್ಟಾಗಿ ಯೋಜನೆ ರೂಪಿಸಿದರೆ ಮಕ್ಕಳ ಉತ್ತಮ ಬೆಳವಣಿಗೆ ಸಾಧ್ಯವಾಗುತ್ತದೆʼ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ವರ್ಷಾ ಶುಕ್ಲಾ ಮಾತನಾಡಿ, ʼಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ವೇದಿಕೆ ಒದಗಿಸಬೇಕು. ಇಂದಿನ ಮಕ್ಕಳು ಮುಂದಿನ ಸಮಾಜದ ಉತ್ತಮ ನಾಗರಿಕರಾಗಿ ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕುʼ ಎಂದು ತಿಳಿಸಿದರು.

ರಜಪೂತ ಸಮಾಜದ ಜಿಲ್ಲಾಧ್ಯಕ್ಷ ಸಂಜಯ್ ಸಿಂಗ್ ಮಾತನಾಡಿ, ʼಇಂದಿನ ಮಕ್ಕಳಲ್ಲಿ ಮೊಬೈಲ್ ವ್ಯಾಮೋಹ ಹೆಚ್ಚುತ್ತಿರುವುದು ಓದಿನ ಮೇಲೆ ಪರಿಣಾಮ ಬೀರುತ್ತಿದೆ. ಪಾಲಕರು ಮಕ್ಕಳ ಮೊಬೈಲ್ ಬಳಕೆಯ ಮೇಲೆ ನಿಯಂತ್ರಣ ವಹಿಸಬೇಕುʼ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಿಕೊಟ್ಟರು. ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸತ್ಕರಿಸಲಾಯಿತು.

ಇದನ್ನೂ ಓದಿ : ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

ಕಾರ್ಯಕ್ರಮದಲ್ಲಿ ಪ್ರಮುಖರಾದ ಪ್ರಮೋದ್ ತಿವಾರಿ, ರಾಜೇಶ್ ಪಾಂಡೆ, ಮುಖ್ಯಗುರು ವಸಂತರಾವ ಹಾಗೂ ಶಾಲೆಯ ಸಿಬ್ಬಂದಿಗಳಾದ ಸ್ವರೂಪ ರಾಣಿ, ಕವಿತಾ ಘನಾತೆ, ಅಶ್ವಿನಿ, ಸಂಗೀತಾ, ಶಿವಾನಿ, ಪೂಜಾ ಪಾಟೀಲ್, ಸ್ನೇಹ, ಸುಷ್ಮಾ, ಭಾಗ್ಯಶ್ರೀ, ಸೌಮ್ಯ, ಗಿರಿಜಾ, ಶೀತಲ್, ಶೀಲಾ ಸೇರಿದಂತೆ ಸಾವಿರಾರು ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...