ಕಲಬುರಗಿ | ಹಾಲಿನ ದರ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

Date:

ರಾಜ್ಯ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ರಿಂದ ₹12ರವರೆಗೆ ಹೆಚ್ಚಿಸಿರುವುದನ್ನು ಹಾಗೂ ಬಸ್ ಪ್ರಯಾಣ ದರ ಏರಿಕೆಯ ಪ್ರಸ್ತಾವನೆಯನ್ನು ಖಂಡಿಸಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ವತಿಯಿಂದ ಸೋಮವಾರ ನಗರದ ಎಸ್.ವಿ.ಪಿ. ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ರಾಜ್ಯದ ಜನರು ಬರಗಾಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಸಂದರ್ಭದಲ್ಲಿ ಹಾಲಿನ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು. ಹೈನುಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ದರ ಏರಿಕೆಯ ಬದಲಾಗಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಅಮೆರಿಕ ಮಧ್ಯಂತರ ಚುನಾವಣೆ: ಡೊನಾಲ್ಡ್ ಟ್ರಂಪ್ ಕುರ್ಚಿಗಿಲ್ಲ ಕುತ್ತು;...

ಅಮೆರಿಕದ ಕಾಂಗ್ರೆಸ್‌ಗೆ ನ. 3ರಂದು ನಡೆಯಲಿರುವ 'ಮಧ್ಯಂತರ ಚುನಾವಣೆ' ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಬಹುದೊಡ್ಡ ಅಗ್ನಿಪರೀಕ್ಷೆ. ಈ ಸಮರದಲ್ಲಿ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷ ಬಹುಮತ ಕಳೆದುಕೊಂಡರೂ ಅವರ ಅಧ್ಯಕ್ಷ ಸ್ಥಾನಕ್ಕೇನೂ ಕುತ್ತಿಲ್ಲ;...

ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿಯ ಹಿರಿಯ ಸದಸ್ಯರಾದ ವಿ.ನಾಗಮ್ಮಾಳ್ ಮಾತನಾಡಿ, “ಮುಂಬರುವ ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಹಾಲು ಒಕ್ಕೂಟದ ರಾಜಕೀಯ ಪದಾಧಿಕಾರಿಗಳು ಗ್ರಾಮೀಣ ಹೈನುಗಾರರಿಗೆ ಬೆಂಬಲ ನೀಡುವ ಹೆಸರಿನಲ್ಲಿ ದರ ಏರಿಕೆಗೆ ಒತ್ತಾಯಿಸಿರುವುದು ಸ್ಪಷ್ಟವಾಗಿದೆ” ಎಂದು ಹೇಳಿದರು.

ಸರ್ಕಾರ ಹಾಲು ಉತ್ಪಾದಕರು ಹಾಗೂ ಗ್ರಾಹಕರಿಬ್ಬರ ಹಿತವನ್ನು ಪರಿಗಣಿಸಬೇಕು. ಹೈನುಗಾರರಿಗೆ ಮೇವು ಮತ್ತು ಪಶು ಆಹಾರವನ್ನು ರಿಯಾಯಿತಿ ದರದಲ್ಲಿ ಪೂರೈಸಬೇಕು. ಕೆಎಂಎಫ್‌ನಲ್ಲಿನ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಉತ್ಪಾದನಾ ವೆಚ್ಚ ಕಡಿಮೆ ಮಾಡುವ ಬದಲಾಗಿ ದರ ಏರಿಕೆಯನ್ನೇ ಪರಿಹಾರವೆಂದು ಪರಿಗಣಿಸಿದರೆ ಜನರು ಹಣದುಬ್ಬರದ ವಿಷಚಕ್ರಕ್ಕೆ ಸಿಲುಕಬೇಕಾಗುತ್ತದೆ. ಹಾಲು ಮಕ್ಕಳೂ ಸೇರಿದಂತೆ ಎಲ್ಲರಿಗೂ ಅಗತ್ಯವಾದ ಪೌಷ್ಟಿಕ ಆಹಾರವಾಗಿರುವುದರಿಂದ ಸರ್ಕಾರ ತಕ್ಷಣವೇ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಮ್ಮ ದುಂದು ವೆಚ್ಚಗಳನ್ನು ಕಡಿತಗೊಳಿಸಬೇಕು. ದೊಡ್ಡ ಬಂಡವಾಳಗಾರರ ಸಾಲ ಮನ್ನಾ ಮಾಡುವುದನ್ನು ನಿಲ್ಲಿಸಿ, ನಿರುದ್ಯೋಗ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.

ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಜಗನ್ನಾಥ ಎಸ್. ಎಚ್. ಮಾತನಾಡಿ, “ನವೆಂಬರ್ 4ರಂದು ಬಸ್ ಪ್ರಯಾಣ ದರವನ್ನು ಶೇ. 40ರಷ್ಟು ಹೆಚ್ಚಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ತಿಳಿಸಿರುವುದು ಜನವಿರೋಧಿ ನಿಲುವಾಗಿದೆ. ಜನಸಾಮಾನ್ಯರು ಈಗಾಗಲೇ ಅಗತ್ಯ ವಸ್ತುಗಳು ಹಾಗೂ ಆಹಾರ ಧಾನ್ಯಗಳ ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರವನ್ನು ಯಾವುದೇ ಕಾರಣಕ್ಕೂ ಹೆಚ್ಚಿಸಬಾರದು. ಹಾಲಿನ ದರ ಏರಿಕೆ ನಿರ್ಧಾರವನ್ನು ಕೂಡಲೇ ವಾಪಸ್ ಪಡೆಯಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರಾದ ಎಸ್.ಎಂ.ಶರ್ಮಾ, ಡಾ. ಸೀಮಾ, ಮಹೇಶ್ ಎಸ್. ಬಿ., ಸಂದೀಪ್, ಸಂತೋಷ ಹಿರವೆ, ರಾಧಾ, ತುಳಜಾರಾಮ, ವೆಂಕಟೇಶ ದೇವದುರ್ಗಾ, ಪ್ರೀತಿ ದೊಡ್ಡಮನಿ, ಈಶ್ವರ, ರಮೇಶ ದೇವಕರ್, ವಿಶಾಲಾಕ್ಷಿ ಪಾಟೀಲ್, ಶಿವರಾಜ, ಸಾಬಮ್ಮ, ಭೀಮು ಆಂದೋಲಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ನಗರದ ನಾಗರಿಕರು ಭಾಗವಹಿಸಿ ಸರ್ಕಾರದ ಹಾಲಿನ ದರ ಏರಿಕೆ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ಇದನ್ನೂ ಓದಿ : ಕೊಪ್ಪಳ | ರಸ್ತೆ ಅಪಘಾತ: ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಸರುಗಳಿಲ್ಲದ ಮತದಾರರು, ಉತ್ತರವಿಲ್ಲದ ವ್ಯವಸ್ಥೆ; ಕರ್ನಾಟಕದ ಎಸ್‌ಐಆರ್ ಹಿಂದಿನ ಪ್ರಶ್ನೆಗಳು

ಕರ್ನಾಟಕದಲ್ಲಿ ಸುಮಾರು ಒಂದು ಕೋಟಿ ಹೆಸರುಗಳ ಇಳಿಕೆಯನ್ನು ಯಾವುದೇ ಸಾಕ್ಷ್ಯವಿಲ್ಲದೆ ಅಕ್ರಮವೆಂದು...

ಬಾಗಲಕೋಟೆ | ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗೆ ಸಿದ್ಧತೆ; 17 ಕೇಂದ್ರಗಳಲ್ಲಿ 7,362 ಅಭ್ಯರ್ಥಿಗಳು ಭಾಗಿ

ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ ಎ, ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ನವೆಂಬರ್...

‘ಸೋ-ಕಾಲ್ಡ್ PM 3.0 ಸರ್ಕಾರ PM 2.5 ಬಗ್ಗೆ ಗಮನ ಹರಿಸಲಿ’ – ದೆಹಲಿ ವಾಯುಮಾಲಿನ್ಯಕ್ಕೆ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ದೇಶದ ರಾಜಧಾನಿ ದೆಹಲಿ, ಸುತ್ತಮುತ್ತಲಿನ ಉತ್ತರ ಭಾರತ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ...

ಮಾಲಿನ್ಯ ಮುಕ್ತ ದೀಪಾವಳಿ ಸಂದೇಶ: ಬಿಜೆಪಿ ಆಕ್ಷೇಪದ ಬೆನ್ನಲ್ಲೇ ನಟಿ ದಿಯಾ ಮಿರ್ಜಾ ವಿಡಿಯೊ ತೆಗೆದ ಬಿಎಂಸಿ

ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಹಮ್ಮಿಕೊಂಡಿದ್ದ 'ಪರಿಸರ ಸ್ನೇಹಿ ದೀಪಾವಳಿ' ಜಾಗೃತಿ...